ಚಂದ್ರಯಾನ-3 ಯಶಸ್ವಿ ಉಡಾವಣೆ; ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು: ಚಂದ್ರಯಾನ 3 ಮಿಷನ್‌ನ ಯಶಸ್ವಿ ಉಡಾವಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಸ್ರೋ ತಂಡವನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹ ನೌಕೆಯನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ಯಶಸ್ವಿ ಉಡಾವಣೆ ಮಾಡಲಾಗಿದೆ. ಉಡಾವಣೆಯಾಗಿರುವ ನೌಕೆಯು ಚಂದ್ರನ ಮೇಲ್ಮೈ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದ್ದು ಆಗಸ್ಟ್ 23 ಇಲ್ಲವೇ 24ರಂದು ಇಳಿಯಲಿದೆ.

Check Also

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ..!

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ …

Leave a Reply

Your email address will not be published. Required fields are marked *

You cannot copy content of this page.