ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ 3 ವಿದ್ಯಾರ್ಥಿನಿಯರ ಅಮಾನತು

ಉಡುಪಿ: ನಗರದ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೊ ಚಿತ್ರೀಕರಣ ಮಾಡಿದ  ಆರೋಪದ ಸಂಬಂಧ ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟು, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೊ ಚಿತ್ರೀಕರಿಸಿದ್ದರು. ಅದನ್ನು ವಾಟ್ಸ್‌ಆಯಪ್‌ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದರು. ಇದು ಗೊತ್ತಾಗುತ್ತಿದ್ದಂತೆ ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಇವರ ಮಧ್ಯೆ ತೀವ್ರತರದ ವಾಗ್ವಾದ ನಡೆದಿತ್ತು. ಆಸ್ಪತ್ರೆಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯರಿಂದ ಮುಚ್ಚಳಿಕೆ ಬರೆಸಿಕೊಂಡು ಶಿಸ್ತು ಕ್ರಮ ಜರುಗಿಸಿದೆ’ ಎಂದು ಮೂಲಗಳು ತಿಳಿಸಿವೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.