March 14, 2026
WhatsApp Image 2023-07-25 at 6.29.39 PM

ಉಡುಪಿ: ಕಾಲೇಜು ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಉಡುಪಿಯ ನೇತ್ರಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿ ನಡೆಸಿದ್ದು, ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ ಮತ್ತು ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಎಂದು ಮನವಿ ಮಾಡಿದೆ.

ಆಡಳಿತ ಮಂಡಳಿಯ ರಶ್ಮೀ ಕೃಷ್ಣಪ್ರಸಾದ್ ಮಾಹಿತಿ ನೀಡಿದ್ದು ಮೂವರು ಒಂದೇ ಕ್ಲಾಸ್, ಇನ್ನೊಬ್ಬಳು ಹುಡುಗಿ ಬೇರೆ ಕ್ಲಾಸ್ ನವಳಾಗಿದ್ದು ಇಂತಹ ಘಟನೆ ನಡೆಯಬಾರದು ಎಂಬ ಕಾರಣಕ್ಕೆ ಮೊಬೈಲ್ ಬ್ಯಾನ್ ಮಾಡಿದ್ದೇವೆ ಮತ್ತು ನಮ್ಮ ಜವಾಬ್ದಾರಿ ಸುರಕ್ಷತೆ ಹಾಗಾಗಿ ನಿಯಮ ಮಾಡಿದ್ದೇವೆ.

ಈ ಪ್ರಕರಣ ಸಂಬಂಧಿದಂತೆ ಸಂತ್ರಸ್ತೆ ಯಾವುದೇ ದೂರು ಕೊಟ್ಟಿಲ್ಲ, ಕಾಲೇಜ್ ಮೇಟ್ ಆಗಿರುವ ಕಾರಣ ದೂರು ಕೊಡಲ್ಲ ಎಂದಿದ್ದಾಳೆ.

ಮೊಬೈಲ್ ತಂದದ್ದು, ಶೂಟ್ ಮಾಡಿದ್ದು ತಪ್ಪು ಹಾಗಾಗಿ ಸಸ್ಪೆಂಡ್ ಮಾಡಿದ್ದೇವೆ.

ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡಲ್ಲ, ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ಕೊಟ್ಟಿದ್ದಾಳೆ

ನೂರಾರು ವಿದ್ಯಾರ್ಥಿನೀಯರ ಚಿತ್ರೀಕರಣ ಮಾಡಲಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಡುತ್ತಿದ್ದು, ಇದು ಸರಿಯಲ್ಲ, ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ, ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯ ಬಿಡಬೇಡಿ ಮನವಿ ಮಾಡಿದರು.

About The Author

Leave a Reply

Your email address will not be published. Required fields are marked *

You cannot copy content of this page.