March 14, 2026
WhatsApp Image 2023-08-03 at 3.33.58 PM

ಮಣಿಪಾಲ: ಅಪಾಯಕಾರಿ ಸಾಹಸಗಳನ್ನು ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡುತ್ತಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು ಅಪಾಯಕಾರಿಯಾಗಿ ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು.

ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಸಿಸಿಟಿವಿ ಆಧಾರದಲ್ಲಿ ಪರ್ಕಳ ನಿವಾಸಿ ಆಶಿಕ್ (19) ಎಂಬಾತನನ್ನು ಬಂಧಿಸಿದ್ದು, ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.