March 14, 2026
WhatsApp Image 2023-08-06 at 2.18.44 PM

ಉಡುಪಿ : ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ನೀರುಪಾಲಾಗಿದ್ದು, ಓರ್ವ ಯುವತಿ ಸಾವನನಪ್ಪಿದರೆ, ಮತ್ತೊರ್ವ ಯುವತಿಯನ್ನು ರಕ್ಷಿಸಿದ ಘಟನೆ ನಡೆದಿದೆ.ಮಡಿಕೇರಿ ಮೂಲದ ಮಾನ್ಯ ಮೃತ ರ್ದುದೈವಿ. ಇನ್ನು ಬದುಕುಳಿದ ಯಶಸ್ವಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಮಡಿಕೇರಿಯಿಂದ ಈ ಹುಡುಗಿಯರು ನಾಪತ್ತೆಯಾಗಿದ್ದರು. ಈ ಕುರಿತು ಮಡಿಕೇರಿ ಠಾಣೆಯಲ್ಲಿ ಇಬ್ಬರು ಕಾಣೆಯಾಗಿರುವ ದೂರು ದಾಖಲಾಗಿತ್ತು. ಇದೀಗ ಮಲ್ಪೆ ಬಳಿ ನಿನ್ನೆ ತಡರಾತ್ರಿ ಭಾರಿ ಅಲೆಗಳ ಹೊಡೆತಕ್ಕೆ ಇಬ್ಬರು ಯುವತಿಯರು ಸಮುದ್ರ ಪಾಲಾಗಿದ್ದರು. ಕೂಡಲೇ ಆಪತ್ಬಾಂಧವ ಸಿಬ್ಬಂದಿ ಈಶ್ವರ್​ ಎಂಬುವವರು ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದು, ಮತ್ತೊರ್ವ ಯುವತಿ ಅಲೆಗಳ ಹೊಡೆತಕ್ಕೆ ಮೃತಪಟ್ಟಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.