ನಿಸರ್ಗ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ರಿ. ಕಿದಿಯೂರು ಇದರ ವತಿಯಿಂದ ಆಯೋಜಿಸಿದ್ದ ದೇಶ ಭಕ್ತಿ ಗೀತೆ ಕಾರ್ಯಕ್ರಮ ವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಬಾಬು, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ಪಂದುಬೆಟ್ಟು, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗಿರೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಶಶಿಧರ ಸುವರ್ಣ, ಶ್ರೀಸುಂದರ ಪೂಜಾರಿ, ಶ್ರೀಮತಿ ಉಷಾ ಜೆ ಶೆಟ್ಟಿ, ಶ್ರೀ ರಾಮರಾಜ್ ಕಿದಿಯೂರು ಹಾಗೂ ಗಣ್ಯರು ಉಪಸ್ಥಿತರಿದ್ದರು.