March 13, 2026
WhatsApp Image 2023-03-30 at 8.54.25 PM

ಬೆಂಗಳೂರು: ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸುವುದನ್ನು ಕೆಎಂಎಫ್ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಂದಿನಿಯನ್ನು ಬ್ರಾಂಡ್ ಅನ್ನು ಹಳ್ಳ ಹಿಡಿಸಲು ವ್ಯವಸ್ಥಿತ ಸಂಚು ಹೂಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ನಂದಿನಿಯು ಅಮುಲ್ ಅಡಿಯಾಳು ಅಲ್ಲ, ಕರ್ನಾಟಕವು ಗುಜರಾತಿನ ವಸಾಹತು ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.