ಮಂಗಳೂರು:ಮೊಸರು ಕುಡಿಕೆ ಉತ್ಸವ ಹಿನ್ನಲೆ-ಮದ್ಯ ಮಾರಾಟ ನಿಷೇಧ

ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ.
ಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಅಧಿಕವಿರಲಿದ್ದಾರೆ

ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.

Check Also

ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲೆಗಳಿಗೆ …

Leave a Reply

Your email address will not be published. Required fields are marked *

You cannot copy content of this page.