May 15, 2025
WhatsApp Image 2023-09-12 at 5.09.29 PM

ಚಿಕ್ಕಮಗಳೂರು:  ಕೆಎಸ್‌ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ.

ಕೆಎಸ್‌ಆರ್‌ಟಿಸಿ ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿದ್ದು, ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಉಂಟಾಗಿದೆ.

ಸರ್ಕಾರಿ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>