ಉಡುಪಿ ಜಿಲ್ಲೆಯಾದ್ಯಂತ ಜಾನುವರು ಸಾಗಾಟ 1 ತಿಂಗಳು ನಿಷೇಧ- ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಿಲ್ಲೆಯ ಒಳಗೆ ಮತ್ತು ಹೊರಗೆ ಜಾನುವಾರುಗಳ (ದನ ಮತ್ತು ಎಮ್ಮೆ) ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.

ಇದು ವೈರಸ್ ಕಾಯಿಲೆಯಾಗಿದ್ದು, ಕ್ಯಾಪ್ರಿಪಾಕ್ಸ್‌ ಎಂಬ ವೈರಾಣುವಿನಿಂದ ಜಾನುವಾರುಗಳಿಗೆ ಹರಡುವ ಕಾಯಿಲೆಯಾಗಿದೆ. ರೋಗಗ್ರಸ್ಥ ಜಾನುವಾರುಗಳಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುವುದರಿಂದ ಮತ್ತು ಈ ರೋಗದಿಂದ ಜಾನುವಾರು ಮಾಲೀಕರಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.