ಮಂಗಳೂರು: ಸುರತ್ಕಲ್ ಟೋಲ್ ಸಂಗ್ರಹ ರದ್ದಿಗೆ ಗ್ರೀನ್‌ ಸಿಗ್ನಲ್ – ಟ್ವೀಟ್ ಮೂಲಕ ನಳಿನ್ ಮಾಹಿತಿ

ಮಂಗಳೂರು: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.ಇನ್ನು ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದಿದ್ದಾರೆ.ಸುರತ್ಕಲ್ ಟೋಲ್ ಗೇಟ್ ರದ್ದುಗೊಳಿಸುವಂತೆ ಸಮಾನಮನಸ್ಕರು ಕಳೆದ ಹಲವು ದಿನಗಳಿಂದ ರಾತ್ರಿ ಹಗಲು ಪ್ರತಿಭಟನೆ ನಡೆಸುತ್ತಿದ್ದರು.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.