ಮಂಗಳೂರು : ಮೀನುಗಾರರ ಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು.

ಉಳ್ಳಾಲ:(ಮಂಗಳೂರು) ದೈತ್ಯ ಗಾತ್ರದ ಪಿಲಿ ತೊರಕೆ ಮೀನೊಂದು ಸೋಮೇಶ್ವರ,ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಸಮುದ್ರ ತೀರದಲ್ಲಿ ಬೀಸಿದ ಬಲೆಗೆ ನಿನ್ನೆ‌ ಸಂಜೆ ಹೊತ್ತಿಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ. ಉಚ್ಚಿಲ,ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ವ್ಯಾಪಾರ ಮಾಡುತ್ತಿದ್ದರೆ ಕೆಜಿಗೆ ರೂ. 200 ರಷ್ಟಿದೆ. ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೇ ಈದ್ ಹಬ್ಬ ಇರುವುದರಿಂದ ಮೀನುಗಾರರು ತಮ್ಮೊಳಗೆ ಹಂಚಿಕೊಂಡಿದ್ದಾರೆ.

Check Also

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ …

Leave a Reply

Your email address will not be published. Required fields are marked *

You cannot copy content of this page.