March 4, 2026
WhatsApp Image 2023-10-03 at 5.42.12 PM

ಬಂಟ್ವಾಳ: ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

ಬೈಕ್ ಸವಾರ ಶಿವಪ್ರಸಾದ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.

ಶಿವಪ್ರಸಾದ್ ಮತ್ತು ಸಹಸವಾರ ತಿಲಕ್ ಪ್ರಸಾದ್ ಅವರು ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಿಸಿರೋಡು ಕಡೆಯಿಂದ ಬರುತ್ತಿದ್ದ ಕಾರು ಬಿಸಿರೋಡು ತಲಪಾಡಿ ಕೆಎಸ್.ಆರ್.ಟಿ.ಸಿ‌.ಡಿಪೋ ಎದುರುಗಡೆ ಡಿಕ್ಕಿ ಹೊಡೆದಿದೆ.
ಕಾರಿನ ಚಾಲಕ ಜಾಕೀರ್ ಹುಸೈನ್ ಅವರು ಅಜಾಗರೂಕತೆಯಿಂದ ಬಲಬದಿ ಅಂದರೆ ಮತ್ತೆ ವಾಪಸು ಬಿಸಿರೋಡು ಕಡೆಗೆ ಹೋಗುವ ಉದ್ದೇಶದಿಂದ ತಲಪಾಡಿ ಡಿವೈಡರ್ ನಲ್ಲಿ ಬಲಬದಿಗೆ ತಿರುಗಿಸಿದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಪಲ್ಟಿಯಾಗಿದೆ, ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದು, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.