March 15, 2026
WhatsApp Image 2023-10-18 at 5.51.21 PM

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್‌ ವಾಹನವೊಂದು ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ಮಹಮ್ಮದ್ ರಫೀಕ್ ಅವರ ಮಗ ಮಹಮ್ಮದ್ ರಂಝಿನ್ (10) ಶಾಲಾ ರಜೆಯ ಹಿನ್ನಲೆ ಸಂಬಂಧಿಕರ ಮನೆಗೆ ಬಂದಿದ್ದು, ಇಂದು 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್‌ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್‌ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಪಿಕಪ್ ವಾಹನ ಚಾಲಕ ವೇಣೂರಿನ ನಿವಾಸಿ ಜಯ ವಿರುದ್ಧ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.