ಆಂದ್ರಪ್ರದೇಶ : ಕಾಂತಾರ ಮೂವಿ ಇಡೀ ದೇಶವನ್ನೇ ಮೋಡಿ ಮಾಡಿದ್ದು, ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ತುಳುನಾಡಿನ ಪರಂಪರೆಯನ್ನು ಬಿಂಬಿಸುವ ಈ ಚಿತ್ರ ಕೋಟಿಗಟ್ಟಲೇ ಹಣ ಬಾಚುತ್ತಿದೆ.
ಈ ನಡುವೆ ಗುಂಟೂರಿನ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದೆ. ಇದರಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದಾರೆ. ಈ ವೇಳೆ ವಿಜಯನಗರಂ ಜಿಲ್ಲೆಯ ತಹಶೀಲ್ದಾರ್ ಪ್ರಸಾದ್ ರಾವ್ ಅವರು ‘ಕಾಂತಾರ’ ಸಿನಿಮಾದ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರನ್ನು ಈ ಅವತಾರದಲ್ಲಿ ಕಂಡು ಅಲ್ಲಿದ್ದ ಎಲ್ಲರಿಗೂ ಅಚ್ಚರಿ ಆಗಿದೆ. ಈ ವೇಳೆ ಅವರು ‘ಕಾಂತಾರ’ ಚಿತ್ರದ ಡೈಲಾಗ್ ಕೂಡ ಹೇಳಿದ್ದಾರೆ ಎನ್ನಲಾಗಿದೆ.
ತಹಶೀಲ್ದಾರ್ ಪ್ರಸಾದ್ ರಾವ್ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ಹಾಗಾಗಿ ಅವರು ಈ ಕಾರ್ಯಕ್ರಮಕ್ಕೆ ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಬಂದಿದ್ದರು. ಅವರನ್ನು ನೋಡಿ ಜಿಲ್ಲಾಧಿಕಾರಿಗೂ ಅಚ್ಚರಿ ಆಗಿದೆ. ಅವರು ಕೂಡ ಇಂಪ್ರೆಸ್ ಆಗಿದ್ದು, ತಹಶೀಲ್ದಾರ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.