ಮಂಗಳೂರು: ಖಾಸಗಿ ಬಸ್ ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಮಂಗಳೂರು: ಖಾಸಗಿ ಬಸ್‌ನ ಧಾವಂತಕ್ಕೆ ಪಾದಚಾರಿಯೊಬ್ಬರು ಬಸ್ ನಡಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಗರದ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಆ್ಯಂಡ್ ರಾವ್ ಸರ್ಕಲ್‌ನಲ್ಲಿ ಸಂಭವಿಸಿದೆ. ಕೊಣಾಜೆಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ 54 ಸಂಬರ್‌ನ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿತ್ತು. ಈ ವೇಳೆ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದರು. ಆಗ ನೇರವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಮುಂದಿನ ಚಕ್ರದಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ವ್ಯಕ್ತಿಯ ತಲೆ ಸಂಪೂರ್ಣ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖವೂ ಛಿದ್ರಗೊಂಡ ಪರಿಣಾಮ ಅವರ ಮುಖ ಪರಿಚಯವೂ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆಸ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.