
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು, ಉಡುಪಿಯ ಮಹಾತ್ಮಗಾಂಧಿ ಮೈದಾನದಲ್ಲಿ ಬುಧವಾರ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಿ ಗೌರವಿಸಿದರು. ಜಿಲ್ಲೆಯ 29 ಮಂದಿ ಹಾಗೂ 5 ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭ ಶಾಸಕರು,ಜಿಲ್ಲಾಧಿಕಾರಿ ಸಹಿತ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
