March 15, 2026
WhatsApp Image 2023-11-07 at 4.48.36 PM

ಕ್ಷಿಣಕನ್ನಡ : ಕನಸಿನಲ್ಲಿ ಬಿದ್ದಂತಹ ಹಲವು ಸ್ಥಳಗಳ ಬಗ್ಗೆ ಪತ್ತೆ ಹಚ್ಚಿ ಆ ಸ್ಥಳಕ್ಕೆ ಹೋಗುವುದನ್ನು ನಾವು ಸಾಮಾನ್ಯವಾಗಿ ಸಿನಿಮಾದಲ್ಲಿ ನೋಡಿರುತ್ತೇವೆ ಆದರೆ ಇದೀಗ ಬೆಂಗಳೂರು ಮೂಲದ ವ್ಯಕ್ತಿ ಒಬ್ಬರಿಗೆ ಕನಸಿನಲ್ಲಿ ದೇವಸ್ಥಾನ ಕಂಡಿದ್ದು ಅದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಇರುವುದು ಕನಸಿನಲ್ಲಿ ಕಂಡು ಬಂದಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಲಕ್ಷ್ಮಣ್ ಎಂಬವರಿಗೆ ಬಿದ್ದ ಕನಸಿನಲ್ಲಿ ಮುಸ್ಲಿಂ ಧರ್ಮದ ವ್ಯಕ್ತಿಗೆ ಸೇರಿದ ಕೃಷಿ ಜಮೀನಿನಲ್ಲಿ ದೇವಾಲಯ ಇರುವ ಸುಳಿವು ಸಿಕ್ಕಿದೆ. ಅದರಂತೆ ಜಮೀನು ಅಗೆದಾಗ ಗೋಪಾಲಕೃಷ್ಣ ದೇವರ ವಿಗ್ರಹ ಪತ್ತೆಯಾಗಿದೆ. ಹೀಗಾಗಿ ಮುಸ್ಲಿಂ ವ್ಯಕ್ತಿ ತನ್ನ ವಶದಲ್ಲಿದ್ದ ಜಮೀನನ್ನು ದೇವಸ್ಥಾನಕ್ಕೆ ಬಿಟ್ಟುಕೊಟ್ಟಿದ್ದಾರೆ.

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲಿನಲ್ಲಿ ಮುಸ್ಲಿಂ ಧರ್ಮದ ವ್ಯಕ್ತಿಗೆ ಸೇರಿದ ಕೃಷಿ ಜಮೀನಿನಲ್ಲಿ ದೇವಾಲಯ ಇರುವ ಬಗ್ಗೆ ವ್ಯಕ್ತಿಯೊಬ್ಬರಿಗೆ ಕನಸು ಬಿದ್ದಿದೆ. ಅದರಂತೆ ಜೆಸಿಬಿ ಮೂಲಕ ಜಮೀನು ಅಗೆದಾಗ ನಶಿಸಿ ಹೋಗಿದ್ದ ನೂರಾರು ವರ್ಷಗಳ ಹಿಂದಿನ ಗೋಪಾಲಕೃಷ್ಣ ದೇವರ ವಿಗ್ರಹ ಪತ್ತೆಯಾಗಿದೆ.

ಅದರಂತೆ ಜ್ಯೋತಿಷಿಗಳ ಮೂಲಕ ಚಿಂತನೆ ನಡೆಸಿದಾಗ ಭೂಗರ್ಭದಲ್ಲಿ ದೇವರಿರುವ ಬಗ್ಗೆ ಸುಳಿವು ಸಿಕ್ಕಿದೆ. ಹೀಗಾಗಿ ಜೆಸಿಬಿ ಮೂಲಕ ಭೂಮಿಯ ಅಗೆತ ನಡೆಸಿದ್ದರು. ಹತ್ತಾರು ಅಡಿ ಅಗೆಯುತ್ತಿದ್ದಂತೆ ಭಗ್ನಗೊಂಡ ಗೋಪಾಲ ಕೃಷ್ಣ ದೇವರ ವಿಗ್ರಹ ಪತ್ತೆಯಾಗಿದೆ. ಇದೀಗ ಗ್ರಾಮಸ್ಥರೆಲ್ಲರೂ ಸೇರಿ ಅಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ಮೂರ್ತಿಯನ್ನು ಶುಚಿಗೊಳಿಸಿ ಪೂಜಾ ಕೈಂಕರ್ಯಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.