ಬೆಂಗಳೂರು : ಕಲರ್ಸ್ ಕನ್ನಡದಲ್ಲಿ ನಡೆಯುತ್ತಿರುವ ಬಿಗ್ಬಾಸ್ ಕನ್ನಡ ಆವೃತ್ತಿಯ 10ನೇ ಸೀಸನ್ ನಲ್ಲಿ ಇದೀಗ ವೈಲ್ಡ್ ಕಾರ್ಡ್ ಎಂಟ್ರಿ ಆಗಿದ್ದು, ಇಬ್ಬರು ಮನೆಯೊಳಗೆ ಎಂಟ್ರಿ ಪಡೆದಿದ್ದಾರೆ, ವೈಲ್ಡ್ ಕಾರ್ಡ್ ಮೂಲಕ ಅವಿನಾಶ್ ಶೆಟ್ಟಿ ಹಾಗೂ ಪವಿ ಪೂವಪ್ಪ ಎಂಟ್ರಿ ಆಗಿದೆ. ಮಾಡೆಲಿಂಗ್ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ, ಬಿಕಿನಿ ಬಾಲೆ ಎಂದೇ ಖ್ಯಾತರಾಗಿರುವ ಪವಿ ಪೂವಪ್ಪ ಈ ಬಾರಿ ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಪವಿ ಪೂವಪ್ಪ ಮೂಲತಃ ಕೊಡಗಿನವರು. ಹುಟ್ಟಿದ್ದು ಕೂರ್ಗನಲ್ಲಿಯಾದರೂ, ಬೆಳೆದದ್ದು ಮಾತ್ರ ಬೆಂಗಳೂರಿನಲ್ಲಿ. ಇವರ ಪೂರ್ಣ …
Read More »ಸಿನೆಮಾ ವಿಶೇಷ
ಉಗ್ರ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ- ಕಾಂತಾರ ಅಧ್ಯಾಯ 1 ರ ಫಸ್ಟ್ ಲುಕ್ ರಿಲೀಸ್
‘ಕಾಂತಾರ 2’ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮೂಡಿಬರುತ್ತಿದೆ. ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್ ಆರಂಭ ಆಗಲಿದೆ ಎನ್ನಲಾಗುತ್ತಿದೆ. ‘ಕಾಂತಾರ 2 ಚಿತ್ರ ಬರಲಿದೆ ಎಂದಾಗಿನಿಂದಲೂ ಅಭಿಮಾನಿಗಳ ವಲಯದಲ್ಲಿ ಒಂದು ಕುತೂಹಲ ಇತ್ತು. ಈ ಕುತೂಹಲವನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ ಚಿತ್ರದ ಪೋಸ್ಟ್ ಮೂಡಿಬಂದಿದೆ. ಇಂದು (ನವೆಂಬರ್ 27) ಚಿತ್ರತಂಡ ಉಡುಪಿ ಜಿಲ್ಲೆಯ, ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದಲ್ಲಿ ‘ಕಾಂತಾರ ಚಾಪ್ಟರ್ 1’ (Kantara Chapter 1) ಚಿತ್ರದ ಮುಹೂರ್ತ ನೆರವೇರಿಸುವುದರ ಜೊತೆಗೆ ಮೊದಲ ಪೋಸ್ಟರ್ ಅನಾವರಣ …
Read More »ನವೆಂಬರ್ 27 ರಂದು ಕಾಂತಾರ ಸಿನೆಮಾ ಪ್ರೀಕ್ವೆಲ್ ಫಸ್ಟ್ ಲುಕ್ ರಿಲೀಸ್
ಬೆಂಗಳೂರು :ಕೊನೆಗೂ ಕಾಂತಾರ ಸಿನೆಮಾದ ಮುಂದಿನ ಭಾಗದ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದ್ದು, ನವೆಂಬರ್ 27 ರಂದು ಕಾಂತಾರ ಸಿನೆಮಾದ ಮುಂದಿನ ಭಾಗದ ಫಸ್ಟ್ ಲುಕ್ ರಿಲೀಸ್ ಆಗಲಿದೆ. ಇಡೀ ವಿಶ್ವವನ್ನೇ ತಿರುಗಿ ನೋಡುವಂತೆ ಮಾಡಿದ್ದ ಕಾಂತಾರ ಸಿನೆಮಾದ ಎರಡನೇ ಭಾಗ ಅಥವಾ ಪ್ರೀಕ್ವೇಲ್ ನ ಬಗ್ಗೆ ಇದೀಗ ಒಂದು ಶುಭ ಸುದ್ದಿ ಸಿಕ್ಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪ್ಡೇಟ್ ನೀಡಿರುವ ಹೊಂಬಾಳೆ ನವೆಂಬರ್ 27 ರಂದು ಫಸ್ಟ್ ಲುಕ್ ರೀಲಿಸ್ ಆಗಲಿದೆ ಎಂದಿದೆ. ರಿಷಬ್ ಶೆಟ್ಟಿ ಬರೆದು ನಿರ್ದೇಶನ ಮಾಡಿರುವ ‘ಕಾಂತಾರ’ …
Read More »ಕಾಂತಾರ-2 ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್..! ಇದು ಸಿಕ್ವೆಲ್ ಅಲ್ಲ ಪ್ರೀಕ್ವೆಲ್ – ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
ಸ್ಯಾಂಡಲ್‌ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ-2 ಚಿತ್ರದ ಹೊಸ ಸುದ್ದಿ ಹರಿದಾಡುತ್ತಿದ್ದು, ಇದು ಸಿನಿಮಾದ ಮುಹೂರ್ತಕ್ಕೆ ಸಂಬಂಧಿಸಿದ್ದೇ ಆಗಿದೆ. ಕಾಂತಾರ ರಿಲೀಸ್ ಆಗಿ ಹಿಟ್ ಆದ್ಮೇಲೆ ಎಲ್ಲೆಡೆ ಈ ಚಿತ್ರದ ಪಾರ್ಟ್-2 ಬಗ್ಗೆ ಚರ್ಚೆ ಹೆಚ್ಚಾಗಿದ್ದು, ಅದೇ ಸರಿಯಾದ ಸಮಯಕ್ಕೆ ರಿಷಬ್ ಶೆಟ್ಟಿ ಒಂದು ಮಾಹಿತಿ ನೀಡಿದ್ದರು. ಇದು ಕಾಂತಾರ ಸಿನಿಮಾದ ಕಥೆ ಮುಂದುವರೆಯುತ್ತಿದ್ದು, ಆದರೆ ಅದು ಸಿಕ್ವೆಲ್ ಆಗಿ ಅಲ್ವೇ ಅಲ್ಲ. ನಟ ರಿಷಬ್ ಶೆಟ್ಟಿ ಈ ಹಿಂದೆ, ಕಾಂತಾರ-2 ಸಿನಿಮಾ ಪ್ರೀಕ್ವೆಲ್ ಆಗಿಯೇ ಬರುತ್ತದೆ. ಇಲ್ಲಿವರೆಗೂ ನೀವೂ ನೋಡಿರೋದು …
Read More »ಮಹಿಳೆಗೆ ನಾಯಿ ಕಚ್ಚಿದ ದಿನ ನಾನು ಗುಜರಾತಿನಲ್ಲಿದ್ದೆ ಪೋಲೀಸರ ಮುಂದೆ ದರ್ಶನ್ ಹೇಳಿಕೆ
ಬೆಂಗಳೂರು: ಖ್ಯಾತ ನಟ ದರ್ಶನ್ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ದರ್ಶನ್ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಮನೆಯ ನಾಯಿ ಕಚ್ಚಿತ್ತು. ಹೀಗಾಗಿ ಅಮಿತಾ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಬಳಿಕ ಪೊಲೀಸರು ಐಪಿಸಿ ಸೆಕ್ಷನ್ 289ರ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿತ್ತು. ನಟ ದರ್ಶನ್ ಅವರನ್ನು ಈ ಪ್ರಕರಣದಲ್ಲಿ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಪೊಲೀಸರು …
Read More »ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧಎಫ್‌ಐಆರ್
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ನಲ್ಲಿ ಸ್ಪರ್ಧಿಯಾಗಿರುವ ನಟಿ ತನಿಷಾ ಕುಪ್ಪಂಡ ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪಿಸಿ ಅವರು ದೂರು ನೀಡಿದ್ದಾರೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.
Read More »ಸೆಪ್ಟಂಬರ್ 22 ರಂದು “ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಬಿಡುಗಡೆ
ಮಂಗಳೂರು: “ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ” ಎಂದು ರಾಮ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಸಿಐಡಿ ದಯಾ ಖ್ಯಾತಿಯ ದಯಾನಂದ ಶೆಟ್ಟಿ ಅವರು, “ಹಿಂದಿ ಸಿನಿಮಾ ಮತ್ತು ಧಾರವಾಹಿ ಕ್ಷೇತ್ರದಲ್ಲಿ ನಾನು ಕಳೆದ 25 ವರ್ಷಗಳಿಂದ ದುಡಿಯುತ್ತಿದ್ದೇನೆ. ನಾನೆಲ್ಲಿ ಹೋದರೂ ತುಳು ಸಿನಿಮಾ ಯಾವಾಗ ಮಾಡುತ್ತೀರಿ ಎಂದು …
Read More »ಖ್ಯಾತ ನಟ ಪೃಥ್ವಿರಾಜ್ ಆಸ್ಪತ್ರೆಗೆ ದಾಖಲು..!
ಕೇರಳ;ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್ ಅವರಿಗೆ ಗಾಯವಾಗಿದ್ದು ಅವರಿಗೆ ಇಂದು ಶಸ್ತ್ರಕ್ರಿಯೆ ನಡೆಯಲಿದೆ. ನಿನ್ನೆ ಕೇರಳದ ಇಡುಕ್ಕಿ ಮರಯೂರ್ ಎಂಬಲ್ಲಿ ಮಲಯಾಳಂ ಚಿತ್ರ ‘ವಿಲಾಯತ್ ಬುದ್ಧ’ ಇದರ ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್ ಅವರಿಗೆ ಗಾಯವಾಗಿದೆ. ಬಸ್ ತಂಗುದಾಣವೊಂದರಲ್ಲಿ ಫೈಟ್ ದೃಶ್ಯ ಚಿತ್ರೀಕರಣದ ವೇಳೆ ನಟನ ಕಾಲಿಗೆ ಗಾಯವಾಗಿದ್ದು ಅವರನ್ನು ಇಡುಕ್ಕಿಯ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಸ್ತ್ರಕ್ರಿಯೆ ನಂತರ ಅವರಿಗೆ ಎರಡು ಮೂರು ತಿಂಗಳು ವಿಶ್ರಾಂತಿ ಬೇಕಾಗಬಹುದೆಂದು ನಿರೀಕ್ಷಿಸಲಾಗಿದೆ. ʻವಿಲಾಯತ್ ಬುದ್ಧʼ ಚಲನಚಿತ್ರವು ಜಯನ್ ನಂಬಿಯಾರ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.
Read More »ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಬಿಗ್ ಟ್ವಿಸ್ಟ್..!
ಬೆಂಗಳೂರು: ಖ್ಯಾತ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ. 2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಾಧಾರವಿಲ್ಲ …
Read More »ಚಿತ್ರೀಕರಣದ ವೇಳೆ ಬಾಲಿವುಡ್ ನಟ ‘ಅಮಿತಾಭ್ ಬಚ್ಚನ್’ಗೆ ಗಂಭೀರ ಗಾಯ
ಶೂಟಿಂಗ್ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಬಿದ್ದು ಪಕ್ಕೆಲುಬಿಗೆ ಗಾಯವಾಗಿದೆ. ಸದ್ಯ ಅವರನ್ನು ಹೈದರಾಬಾದ್‌ನ AIG ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತಾಭ್ ಬಚ್ಚನ್ ಹೈದರಾಬಾದ್ ನಲ್ಲಿ ಚಿತ್ರಿಕರಣ ಮಾಡುತ್ತಿರುವ ಸಮಯದಲ್ಲಿ ಈ ಅವಾಂತರ ನಡೆದಿದೆ. ಆಕ್ಷನ್ ಸಿನಿಮಾವೊಂದರ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯಾರ ಭೇಟಿಗೂ ಅವಕಾಶ ನೀಡಲಾಗುತ್ತಿಲ್ಲ. ವೈದ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕ ಪಡಬಾರದು. ಯಾವುದೇ ಪ್ರಾಣಾಪಯವಿಲ್ಲ ಎಂದಿದ್ದಾರೆ. ಪ್ರಾಜೆಕ್ಟ್ ಕೆ ಚಿತ್ರೀಕರಣ ಈ ಹಿಂದೆ ಕೂಲಿ ಚಲನಚಿತ್ರ …
Read More »