ದೇಶ

ಹಿಂದೂ ವಿವಾಹ ಕಾಯ್ದೆಯಡಿ ಅಂತರ್ ಧರ್ಮೀಯ ನಡುವಿನ ಮದುವೆಗೆ ಸುಪ್ರೀಂ ಕೋರ್ಟ್ ಹೇಳಿದ್ದೆನು….?

ನವದೆಹಲಿ:ಹಿಂದೂ ವಿವಾಹ ಕಾಯ್ದೆಯಡಿ ಅಂತರ್ ಧರ್ಮೀಯ ದಂಪತಿಗಳ ನಡುವಿನ ಯಾವುದೇ ವಿವಾಹವು ಅನೂರ್ಜಿತವಾಗಿದೆ ಮತ್ತು ಹಿಂದೂಗಳು ಮಾತ್ರ ಅದೇ ಕಾನೂನಿನ ಅಡಿಯಲ್ಲಿ ಮದುವೆಯಾಗಬಹುದು ಎಂದು ಸುಪ್ರೀಂ ಕೋರ್ಟ್ ಜನವರಿ 13 ರಂದು ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಆಗಸ್ಟ್ 2017 ರಲ್ಲಿ ತೆಲಂಗಾಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. ಇದೇ ವೇಳೇ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆಬ್ರವರಿಯಲ್ಲಿ ಮುಂದೂಡಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 494 ರ ಅಡಿಯಲ್ಲಿ ಅರ್ಜಿದಾರರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲು …

Read More »

ತೀವ್ರ ಅನಾರೋಗ್ಯದಿಂದ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು..!

ನವದೆಹಲಿ:  ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೃತಕ ಆಮ್ಲಜನಕ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕು ಮತ್ತು ನ್ಯುಮೋನಿಯಾ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಲಲಿತ್ ಮೋದಿ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಸಂಬಂಧ ಮಾಹಿತಿ ನೀಡಲಾಗಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕು ತಗುಲಿತ್ತು. ನ್ಯುಮೋನಿಯಾವೂ ಇದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ …

Read More »

ಅಯ್ಯಪ್ಪ ಪ್ರಸಾದಕ್ಕೆ ಬಳಸುವ ಏಲಕ್ಕಿಯಲ್ಲಿ ಕೀಟನಾಶಕದ ಅಂಶ: ಅರವಣ ಪ್ರಸಾದಮ್‌ ವಿತರಣೆಗೆ ಹೈಕೋರ್ಟ್‌ ನಿಷೇಧ

ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಅರವಣ ಪ್ರಸಾದಮ್‌ ವಿತರಣೆಯನ್ನು ತಕ್ಷಣ ನಿಲ್ಲಿಸುವಂತೆ ಕೇರಳ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೀಟನಾಶಕದ ಉಳಿಕೆ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿದ್ದ ಸಂಗತಿ ಬೆಳಕಿಗೆ ಬಂದಿದೆ.. ‘ಮನುಷ್ಯರ ಬಳಕೆಗೆ ಇದು ಸುರಕ್ಷಿತ ಅಲ್ಲ’ ಎಂದು ಆಹಾರ ವಿಜ್ಞಾನಿಗಳು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್​ ಪ್ರಸಾದ ವಿತರಣೆ ನಿಲ್ಲಿಸುವಂತೆ ಆದೇಶ ಹೊರಡಿಸಿತು.

Read More »

ಮಹಾರಾಷ್ಟ್ರ ನಾಸಿಕ್: ಟ್ರಕ್ ಗೆ ಬಸ್ ಡಿಕ್ಕಿ: 10 ಮಂದಿ ಸಾವು

ಶಿರಢಿಗೆ ಹೊರಟಿದ್ದ ಬಸ್ ಒಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಥಾಣೆ ಜಿಲ್ಲೆಯ ಅಂಬರನಾಥದಿಂದ ಹೊರಟಿದ್ದ ಖಾಸಗಿ ಐಷಾರಾಮಿ ಬಸ್ ಅಹಮದ್‌ನಗರ ಜಿಲ್ಲೆಯ ಶಿರಡಿಗೆ ಹೋಗುತ್ತಿತ್ತು ಎಂದು ಅವರು ಹೇಳಿದರು. ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್‌ನ ಸಿನ್ನಾರ್ ತೆಹಸಿಲ್‌ನ ಪಥರೆ ಶಿವಾರ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ …

Read More »

BIGG NEWS : ಶಬರಿಮಲೆ ಪ್ರಸಾದಕ್ಕೆ ಬಳಸಿದ ಏಲಕ್ಕಿಯಲ್ಲಿ ಕೆಮಿಕಲ್‌ ಪತ್ತೆ : 6.5 ಕೋಟಿ ರೂ.ಮೌಲ್ಯದ ʻಅರಾವಣಂʼ ನೈವೇದ್ಯ ವ್ಯರ್ಥ

ಕೊಚ್ಚಿ : ಶಬರಿಮಲೆ ಅಯ್ಯಪ್ಪ ಸ್ವಾಮಿ ಪ್ರಸಾದ ಎಂದಾಗ ಎಲ್ಲರೂ ಭಕ್ತಿಯಿಂದ ಸ್ವೀಕಾರ ಮಾಡುತ್ತಾರೆ ಇದೀಗ ಇಂತಹ ದೇವಸ್ಥಾನದ ಪ್ರಸಾದ ಕ್ಕೆ ಬಳಸಿದ ಏಲಕ್ಕಿಯಲ್ಲಿ ಕೆಮಿಕಲ್ ಪತ್ತೆಯಾಗಿದ್ದು‌, ಮತ್ತೊಂದು ಆತಂಕಕ್ಕೆ ಕಾರಣವಾಗಿದೆ. ಅಯ್ಯಪ್ಪ ಸ್ವಾಮಿ ಪ್ರಸಾದ ʻಅರಾವಣಂʼಗೆ ಬಳಸಲಾದ ಏಲಕ್ಕಿಯಲ್ಲಿ95 ಬಗೆಯ ಭಾರೀ ಪ್ರಮಾಣದ ಕ್ರಿಮಿನಾಶಕ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ 6.5 ಕೋಟಿ ರೂ ಮೌಲ್ಯದ ಅಯ್ಯಪ್ಪ ಸ್ವಾಮಿ ಪ್ರಸಾದ ವ್ಯರ್ಥಮಾಡಲಾಗಿದೆ ಎಂಧು ಕೆಮಿಕಲ್‌ ಟೆಸ್ಟ್‌ ಮೂಲಕ ಮಾಹಿತಿ ಬಹಿರಂಗವಾಗಿದೆ. ಈ ನಿಟ್ಟಿನಲ್ಲಿ ಕೇರಳ ಹೈಕೋರ್ಟ್‌ ʻಅರಾವಣಂʼ ಪ್ರಸಾದವನ್ನು ಭಕ್ತರಿಗೆ ವಿತರಣೆ ಮಾಡುವುದಕ್ಕೆ ತಡೆಯಾಜ್ಞೆ …

Read More »

ಮದುವೆಗೆ ಮುಂಚೆ ಮಗುವಿಗೆ ಜನ್ಮ ; ಬಾತ್‌ರೂಂ ಕಿಟಕಿಯಿಂದ ನವಜಾತ ಶಿಶುವನ್ನು ಎಸೆದ ಯುವತಿ

ನವದೆಹಲಿ : ಮದುವೆಗೆ ಮುಂಚೆನೆ ಮಗುವಿಗೆ ಜನ್ಮ ನೀಡಿದ 20 ರ ಹರೆಯದ ಯುವತಿ ಮಗುವನ್ನು ಅಪಾರ್ಟ್ ಮೆಂಟ್ ನ ಬಾತ್ ರೂಮ್ ಕಿಟಕಿಯಿಂದ ಎಸೆದ ಘಟನೆ ದೆಹಲಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಮಗು ಸಾವನಪ್ಪಿದೆ. ನೋಯ್ಡಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಯುವತಿ, ಸೋಮವಾರ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮದುವೆಯಾಗದೇ ಮಗು ಹೆತ್ತ ಹಿನ್ನಲೆ ಸಾಮಾಜಿಕ ಕಳಂಕಕ್ಕೆ ಹೆದರಿ ಮಗುವನ್ನು ತಾನು ವಾಸಿಸುತ್ತಿದ್ದ ಜೈ ಅಂಬೆ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಎಸೆದು ಕೊಂದಿದ್ದಾಳೆ. ಮಗು ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಸ್ಥಳೀಯರು ನೋಯ್ಡಾದ ಮೆಟ್ರೋ …

Read More »

SHOCKING NEWS: ಕುರುಕ್ಷೇತ್ರದಲ್ಲಿ ಭಯಾನಕ ಕೃತ್ಯ: ವ್ಯಕ್ತಿಯ ಎರಡೂ ಕೈಗಳನ್ನು ಕತ್ತರಿಸಿ ಕೊಂಡೊಯ್ದ ದುಷ್ಕರ್ಮಿಗಳು

ಕುರುಕ್ಷೇತ್ರ (ಹರಿಯಾಣ): ವ್ಯಕ್ತಿಯೊಬ್ಬನ ಕೈಯನ್ನು ದುಷ್ಕರ್ಮಿಗಳು ಕತ್ತರಿಸಿ, ಅದನ್ನು ಕೊಂಡೊಯ್ದಿರುವ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಕ್ಷೇತ್ರ ಹವೇಲಿಯಲ್ಲಿ ಘಟನೆ ನಡೆದಿದ್ದು, ಘಟನೆಯ ಕುರಿತು ತನಿಖೆ ನಡೆಯುತ್ತಿದೆ.   ಜುಗ್ನು(30) ಎಂದು ಗುರುತಿಸಲಾದ ವ್ಯಕ್ತಿ ಕುರುಕ್ಷೇತ್ರ ಹವೇಲಿಯ ಹೊರಗೆ ಕುಳಿತಿದ್ದಾಗ 10-12 ಮಂದಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ನಂತ್ರ, ಆತನ ಕೈಯನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ. ಈ ಏಳೆ ರಕ್ತದ ಮಡುವುನಲ್ಲಿ ಬಿದ್ದಿದ್ದ ಜುಗ್ನುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜುಗ್ನುವನ್ನು ಲೋಕನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, …

Read More »

ಭ್ರಷ್ಟಾಚಾರ ಆರೋಪ ಹಿನ್ನೆಲೆ-ಪಂಜಾಬ್ ಸಚಿವ ಸರಾರಿ ರಾಜೀನಾಮೆ

ಚಂಡೀಗಢ: ಕಳೆದ ನಾಲ್ಕು ತಿಂಗಳಿನಿಂದ ಕೇಳಿ ಬರುತ್ತಿದ್ದ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಕೊನೆಗೂ ಪಂಜಾಬ್ ಸಚಿವ ಫೌಜಾ ಸಿಂ ಸರಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್‌ ತೋಟಗಾರಿಕೆ, ಆಹಾರ ಸಂಸ್ಕರಣೆ ಹಾಗೂ ರಕ್ಷಣಾ ಸೇವೆಗಳ ಕಲ್ಯಾಣ ಸಚಿವರಾಗಿದ್ದ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮುಖ್ಯಮಂತ್ರಿಯವರು ಇದಕ್ಕೆ ಅನುಮೋದನೆ ನೀಡಿದ್ದಾರೆ. ಅಲ್ಲದೆ, ಸರಾರಿ ರಾಜೀನಾಮೆಯಿಂದ ತೆರವಾದ ಖಾತೆಯ ಜವಾಬ್ದಾರಿಯನ್ನು ಪಟಿಯಾಲ ಗ್ರಾಮೀಣ ಶಾಸಕ ಡಾ. ಬಲಬೀರ್‌ ಸಿಂಗ್‌ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಸರ್ಕಾರಿ ಅಧಿಕಾರಿಗಳ ಮೂಲಕ …

Read More »

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದವನನ್ನು ಹುಡುಕಿ ಬೆಂಗಳೂರಿಗೆ ಬಂದ ದೆಹಲಿ ಪೊಲೀಸ್​

ನವ ದೆಹಲಿ: ನ್ಯೂಯಾರ್ಕ್​​ನಿಂದ ದೆಹಲಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಶಂಕರ್ ಮಿಶ್ರಾ ವಿರುದ್ಧ ಕೇಸ್ ದಾಖಲಾಗಿದೆ. ಈತ ಮುಂಬಯಿ ಮೂಲದವನಾಗಿದ್ದು, ನವೆಂಬರ್​ 26ರಂದು ವಿಮಾನದಲ್ಲಿ, ಕುಡಿದ ಮತ್ತಿನಲ್ಲಿ ತನ್ನ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜಿಸಿದ್ದ. ಅಷ್ಟೇ ಅಲ್ಲ, ಕೆಲ ಕಾಲ ಖಾಸಗಿ ಅಂಗವನ್ನೂ ಪ್ರದರ್ಶಿಸಿದ್ದ. ಆ ಮಹಿಳೆ ತನಗಾದ ಕೆಟ್ಟ ಅನುಭವವನ್ನು ಏರ್​ ಇಂಡಿಯಾ ಅಧ್ಯಕ್ಷ ಎನ್.ಚಂದ್ರಶೇಖರನ್​ ಅವರಿಗೆ ಪತ್ರ ಬರೆದು ತಿಳಿಸಿದಾಗಲೇ, ಈ ವಿಷಯ ಬೆಳಕಿಗೆ ಬಂದಿತ್ತು. ಈಗ ಶಂಕರ್​ ಮಿಶ್ರಾನನ್ನು ಆತ …

Read More »

ಚೆಕ್‌ ಡ್ಯಾಮ್‌ಗೆ ಪ್ರಧಾನಿ ತಾಯಿ ಹೀರಾಬೆನ್‌ ಹೆಸರು ನಾಮಕರಣ

ಗುಜರಾತ್‌: ಚೆಕ್‌ಡ್ಯಾಮ್‌ವೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿ ಹೀರಾಬೆನ್‌ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಗಿರ್‌ ಗಂಗಾ ಪರಿವಾರ್ ಟ್ರಸ್ಟ್‌ ವತಿಯಿಂದ ರಾಜ್‌ಕೋಟ್‌–ಕಲವಾಡ ರಸ್ತೆಯ ವಗುಡಾಡ್‌ ಗ್ರಾಮದ ಬಳಿ ನ್ಯಾರಿ ನದಿಗೆ ₹15 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಿಸಲಾಗುತ್ತಿದೆ. ತಾಯಿ ನೆನಪಿಗಾಗಿ ಹಾಗೂ ಗೌರವ ಸಲ್ಲಿಸುವ ಸದುದ್ದೇಶದಿಂದ ಚೆಕ್‌ ಡ್ಯಾಮ್‌ಗೆ ಹೀರಾಬಾ ಸ್ಮೃತಿ ಸರೋವರ ಎಂದು ಹೆಸರಿಸಲು ನಿರ್ಧರಿಸಿದ್ದೇವೆ. ಇದು ಇತರರಿಗೂ ಪ್ರೇರಣೆ ನೀಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ದಿಲೀಪ್ ಸಖಿಯಾ ತಿಳಿಸಿದ್ದಾರೆ.

Read More »

You cannot copy content of this page.