ಕ್ರೈಮ್

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ, ಇಬ್ಬರ ಬಂಧನ

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಕೊಣಾಜೆ ಬಳಿ ನಡೆದಿದೆ. ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯದ್ದೀನ್ (41),ದೇರಳಕಟ್ಟೆಯ ಆರೀಫ್ (40) ಬಂಧಿತರು. ಕೊಣಾಜೆ ಪೊಲೀಸರಿಗೆ ಇವರು ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಸಿಕ್ಕಿದೆ.ಅದರಂತೆ ಕೊಣಾಜೆ ಪಿಎಸ್ ಐ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 20 ಗ್ರಾಂ ಮೆಥಾಂಪೆಟಾಮೈನ್ ಹಾಗೂ ಒಂದು ಸ್ಕೂಟರ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿದ …

Read More »

ಉಳ್ಳಾಲ ಯುವತಿ ಸಾವಿಗೆ ಟ್ವಿಸ್ಟ್..! 15 ಪುಟದ ಡೆತ್ ನೋಟ್ ನಲ್ಲಿ ಕಾರಣ ಬಯಲು

ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿನಗರ ನಿವಾಸಿ ಅಶ್ವಿನಿ ಬಂಗೇರ (25) ಆತ್ಮಹತ್ಯೆಗೈದ ಯುವತಿ. ದುಬೈನಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಕೆಲ ದಿನಗಳ ಹಿಂದಷ್ಟೇ …

Read More »

ಅಂಡಿಂಜೆ ಗ್ರಾ.ಪಂ. ಸದಸ್ಯ ಜಗದೀಶ್ ಹೆಗ್ಡೆಯ ಸದಸ್ಯತ್ವ ರದ್ದುಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಿ.ಇ.ಒ.ಗೆ ದೂರು

ಅಂಡಿಂಜೆ, ಜೂ. 8: ತನ್ನ ಸಹೋದರನ ಹೆಸರಿನಲ್ಲಿ ಪಂಚಾಯತ್ ಕಾಮಗಾರಿಗಳನ್ನು ಕಾನೂನು ಬಾಹಿರವಾಗಿ ನಡೆಸುತ್ತಿರುವ ಅಂಡಿಂಜೆ ಗ್ರಾ.ಪಂ. ಸದಸ್ಯ ಜಗದೀಶ್ ಹೆಗ್ಡೆಯ ಸದಸ್ಯತ್ವವನ್ನು ರದ್ದುಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಹರೀಶ್ ಕುಮಾರ್ ಎಂಬವರು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದಾರೆ.ಕರ್ನಾಟಕ ಪಂಚಾಯತ್‌ರಾಜ್ ಕಾಯ್ದೆಯಂತೆ ಗ್ರಾ.ಪಂ. ಸದಸ್ಯರಾಗಲಿ ಅವರ ಕುಟುಂಬದವರಾಗಲಿ ತಾವು ಸದಸ್ಯರಾಗಿರುವ ಗ್ರಾ.ಪಂ.ನ ಕಾಮಗಾರಿಗಳನ್ನು ಗುತ್ತಿಗೆ ಪಡೆಯುವಂತಿಲ್ಲ. ಆದರೆ ಇಲ್ಲಿ ಎಲ್ಲಾ ನಿಯಮವನ್ನು ಗಾಳಿಗೆ ತೂರಿ ಸದಸ್ಯ ಜಗದೀಶ್ ಹೆಗ್ಡೆಯವರು ತನ್ನ ಸಹೋದರ ಅಮರೇಶ ಹೆಗ್ಡೆಯವರ …

Read More »

ನಾರಾವಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ ರೂ. 3.30 ಲಕ್ಷ ವಂಚನೆ!

ವೇಣೂರು, ಜೂ. 6: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ ರೂ. 3.30 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್ ವಂಚನೆಗೊಳಗಾದವರು. ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನ ಸುಧೀರ್ ಎಂದು ಗುರುತಿಸಲಾಗಿದ್ದು, ಈತ ಈಗಾಗಲೇ ಬಂಟ್ವಾಳ ನಗರ, ಗ್ರಾಮಾಂತರ, ಮೂಡಬಿದಿರೆ, ಮಂಗಳೂರು ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸುಗಳಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ. ಆರೋಪಿಗಳಿಬ್ಬರು ಜ. 18ರಂದು ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ರವರ …

Read More »

ವಿಜಯೋತ್ಸವಕ್ಕೆ ಬರುವಂತೆ ಒತ್ತಡ? ಪೆರಾಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಐವರಿಂದ ಹಲ್ಲೆ

ಮರೋಡಿ, ಮೇ 15: ವಿಜಯೋತ್ಸವಕ್ಕೆ ಬರುವಂತೆ ಒತ್ತಡ ಹಾಕಿ ಬರಲು ನಿರಾಕರಿಸಿದಾಗ ಕಾಂಗ್ರೆಸ್ ಕಾರ್ಯಕರ್ತನ ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಮರೋಡಿ ಗ್ರಾ.ಪಂ. ವ್ಯಾಪ್ತಿಯ ಪೆರಾಡಿ ಬಿಜೆಪಿಯ ವಿಜಯೋತ್ಸವದ ವೇಳೆ ನಡೆದಿದೆ. ಹಲ್ಲೆಗೊಳಗಾದವರು ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂಬವರಾಗಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ವಿಜಯೋತ್ಸವ ಮೆರವಣಿಗೆಯ ವೇಳೆ ಇವರನ್ನು ಎಳೆದುಕೊಂಡು ಹೋಗಿ ರಾಡ್‌ನಿಂದ ಹಲ್ಲೆ ಮಾಡಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ, ರಕ್ಷಿತ್ …

Read More »

ನಾವೂರು : ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸುಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ. ಇಂದಬೆಟ್ಟು ಗ್ರಾಮದ ಬಂಗಾಡಿ ನಿವಾಸಿ ಸುಂದರಿ (50) ಮೃತಪಟ್ಟರು ಎಂದು ಹೇಳಲಾಗುತ್ತಿದೆ ಬೆಳ್ತಂಗಡಿ- ಕಿಲ್ಲೂರು ಲೈನ್‌ನಲ್ಲಿ ಓಡಾಟ ನಡೆಸುತ್ತಿರುವ ಖಾಸಗಿ ಬಸ್ ಎಂಡ್‌ಕಟ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More »

ಬಜಿರೆ ಬಾಡಾರುವಿನಲ್ಲಿ ರಸ್ತೆ ಅಪಘಾತ ಕಾರು-ರಿಕ್ಷಾ ಡಿಕ್ಕಿ: ಐವರಿಗೆ ಗಾಯ

ವೇಣೂರು, ಮೇ 2: ಬಜಿರೆ ಬಾಡಾರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ವೇಣೂರುವಿನಿಂದ ಮೂರ್ಜೆ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಬಜಿರೆ ಗ್ರಾಮದ ಬಾಡಾರು ಬಳಿ ಎದುರುನಿಂದ ಬಂದ ಕಾರು ಡಿಕ್ಕಿಯೊಡೆಯಿತು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ನಾಗೇಶ್ ಆಚಾರ್ಯ (೫೧), ಪ್ರಯಾಣಿಕರಾದ ಸುದರ್ಶನ (೪೦), ಶೋಭಾ (೬೦), ಹರಣಿ (೩೮), ಮುರಳಿ (೩೫) ಗಾಯಗೊಂಡವರು. ನಿರ್ಲಕ್ಷ್ಯವಾಗಿ ಕಾರು ಚಲಾಯಿಸಿ ಅಪಘಾತಕ್ಕೆ ಕಾರಣವಾದ ಚಾಲಕ ಸುಧೀರ್ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಪೆರಿಂಜೆಯಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಗೇರುಕಟ್ಟೆಯ ಬಾಲಕ ಮೃತ್ಯು

ವೇಣೂರು, ಮೇ. 2: ವೇಣೂರು-ಮೂಡಬಿದಿರೆ ರಾಜ್ಯಹೆದ್ದಾರಿ ಪೆರಿಂಜೆ ಬಂಡಸಾಲೆ ಬಳಿ ನಿನ್ನೆ ನಡೆದ ಕಾರು ಮತ್ತು ಆಟೋ ರಿಕ್ಷಾ ಅಪಘಾತದಲ್ಲಿ ತೀವ್ರ ತರಹದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಕಳಿಯ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಇಸಾಮ್ (11) ಇಹಲೋಕ ತ್ಯಜಿಸಿದ್ದಾನೆ. ಆಟೋ ರಿಕ್ಷಾ ಮೂಡಬಿದಿರೆ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ಪೆರಿಂಜೆ ಬಂಡಸಾಲೆ ಬಳಿ ವೇಣೂರು ಕಡೆಯಿಂದ ಬಂದ ಕಾರು ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಆಟೋ ರಿಕ್ಷಾ ಪಲ್ಟಿಯೊಡೆದು ಜಖಂಗೊಂಡಿತ್ತು. ರಿಕ್ಷಾ ಚಾಲಕ ಮತ್ತು …

Read More »

ಪೆರಿಂಜೆಯಲ್ಲಿ ಭೀಕರ ರಸ್ತೆ ಅಪಘಾತರಿಕ್ಷಾ-ಕಾರು ಮುಖಾಮುಖಿ: ಪ್ರಯಾಣಿಕರು ಗಂಭೀರ

ವೇಣೂರು, ಮೇ. 1: ವೇಣೂರು-ಮೂಡಬಿದಿರೆ ರಾಜ್ಯಹೆದ್ದಾರಿ ಪೆರಿಂಜೆ ಬಂಡಸಾಲೆ ಬಳಿ ಇಂದು ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯೊಡೆದು ರಿಕ್ಷಾದಲ್ಲಿದ್ದ ಚಾಲಕ ಸೇರಿದಂತೆ ಐವರು ಗಂಭೀರ ಗಾಯಗೊಂಡಿದ್ದಾರೆ. ಆಟೋ ರಿಕ್ಷಾ (ಕೆಎ ೨೦, ಎಎ೭೯೫೬) ಮೂಡಬಿದಿರೆ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ಪೆರಿಂಜೆ ಬಂಡಸಾಲೆ ಬಳಿ ವೇಣೂರು ಕಡೆಯಿಂದ ಬಂದ ಕಾರು ಡಿಕ್ಕಿಯೊಡೆಯಿತು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಆಟೋ ರಿಕ್ಷಾ ಪಲ್ಟಿಯೊಡೆದು ಜಖಂಗೊಂಡಿದೆ. ರಿಕ್ಷಾ ಚಾಲಕ ಮತ್ತು ಅದರಲ್ಲಿ ಪ್ರಯಾಣಿಸಿದ್ದ ಮಹಿಳೆ ಮತ್ತು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ …

Read More »

ಬಜಿರೆಯಲ್ಲಿ ಅಕ್ರಮ ಗಾಂಜಾ ಸಾಗಾಟ ಪತ್ತೆ ಪೊಲೀಸರ ಬಲೆಗೆ ಬಿದ್ದ ಆರೋಪಿ ರೌಡಿಶೀಟರ್!

ವೇಣೂರು, ಎ. 30: ದ್ವಿಚಕ್ರ ವಾಹನದಲ್ಲಿ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಕಡಬ ತಾಲೂಕಿನ ಸವಣೂರು ಹಿದ್ಯಾಡಿ ನಿವಾಸಿ ಪ್ರಸಾದ್ ಯಾನೆ ಪಚ್ಚು ಬೆಳ್ತಂಗಡಿ ವೃತ್ತ ನಿರೀಕ್ಷಕರ ಪೊಲೀಸರ ತಂಡದ ಬಲೆಗೆ ಬಿದ್ದಿದ್ದಾನೆ.ಬಜಿರೆ ಗ್ರಾಮದ ಹಂದೇವು ಮೂರು ಮಾರ್ಗದ ಬಳಿ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ., ಹೆಡ್ ಕಾನ್ಸ್‌ಸ್ಟೇಬಲ್‌ಗಳಾದ ಇಬ್ರಾಹಿಂ, ಅಭಿಜಿತ್ ಕುಮಾರ್, ವಿಜಯ ಕುಮಾರ್, ಕಾನ್ಸ್‌ಸ್ಟೇಬಲ್ ಚೌಡಪ್ಪ ಅವರಿದ್ದ ತಂಡ ವಾಹನ ತಪಾಷಣೆ ಮಾಡುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಮಾರಾಟ ಮಾಡುವ ಉದ್ದೇಶದಿಂದ 500 ಗ್ರಾಂ. ಗಾಂಜಾವನ್ನು ಸಾಗಾಟ ಮಾಡುತ್ತಿದ್ದ …

Read More »

You cannot copy content of this page.