ದಕ್ಷಿಣ ಕನ್ನಡ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು, ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು ಅವರು ತೊಕ್ಕೊಟ್ಟುವಿನಿಂದ ದೇರಳಕಟ್ಟೆ ಕಡೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ ನುಗ್ಗಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದೆ. …

Read More »

ಕರಾವಳಿ ಕರಾಟೆಪಟುಗಳಿಗೆ ಕಪ್ಪುಪಟ್ಟಿ

ತಾ 28.04.2024 ರಂದುಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಇದರ ವತಿಯಿಂದ ಕೊಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ (ರಿ) ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಉಡುಪಿ ದೊಡ್ಡಣ್ಣಗುಡ್ಡೆ ಜನತಾ ವ್ಯಾಯಾಮಶಾಲೆ ಇಲ್ಲಿ 2024 ನೇ ಸಾಲಿನ ಕರಾಟೆ ಕಪ್ಪು ಪಟ್ಟಿ ವಿಭಾಗದ ಪರೀಕ್ಷೆಯು ಜರುಗಿತು. ಕಾರ್ಯಕ್ರಮವನ್ನು ಸಂಸ್ಥೆಯ ಗೌರವ ಅಧ್ಯಕ್ಷರಾದ ಡಾ. ಎನ್. ಬಿ. ವಿಜಯ ಬಲ್ಲಾಳ್,ಮುಖ್ಯ ಅತಿಥಿಗಳಾದ ಸ್ಥಳೀಯ ನಗರಸಭಾ ಸದಸ್ಯರಾದ ಶ್ರೀ ಪ್ರಭಾಕರ್ ಪೂಜಾರಿ, ಯಕ್ಷಗಾನ ಕಲಾಕೇಂದ್ರ ಗುಂಡಿಬೈಲು ಇದರ ಅಧ್ಯಕ್ಷರಾದ ಶ್ರೀ ಬಾಬು ಗೌಡ, ವ್ಯಾಯಾಮಶಾಲೆ ಯ ಅಧ್ಯಕ್ಷರಾದ ಶ್ರೀ ರಾಮದಾಸ್ ಶೆಟ್ಟಿ, …

Read More »

ಬಂಟ್ವಾಳ: ಸ್ಕೂಟರ್ ಗೆ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಸಾವು

ಬಂಟ್ವಾಳ: ಟಿಪ್ಪರ್ ಲಾರಿಯೊಂದು ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ನಡೆದಿದೆ. ಮೃತರನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಂಟ್ವಾಳ ‌ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್ – 16 ಲಕ್ಷದ ಸೊತ್ತು ವಶಕ್ಕೆ

ಮಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 16,13,800 ರೂ. ಮೌಲ್ಯದ ಸೊತ್ತು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಪೋಸ್ಟ್ ಆಫೀಸ್ ಮುಂಭಾಗ, ಬಸ್ತಿಪಡ್ಪು ನಿವಾಸಿ ಮೊಹಮ್ಮದ್ ಇಶಾನ್(35), ಉಳ್ಳಾಲ, ಟಿ.ಸಿ. ರೋಡ್, ಅಕ್ಕರೆಕೆರೆ ನಿವಾಸಿ ಜಾಫರ್ ಸಾದಿಕ್(35) ಬಂಧಿತ ಆರೋಪಿಗಳು. ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ಬೃಹತ್ ಪ್ರಮಾಣದ ಎಂಡಿಎಂಎ ಮಾದಕದ್ರವ್ಯವನ್ನು ಅಕ್ರಮವಾಗಿ ದಾಸ್ತಾನಿರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಬಂದ ಖಚಿತ ಮಾಹಿತಿ ಲಭ್ಯವಾಗಿತ್ತು. …

Read More »

ಬೆಳ್ತಂಗಡಿ: ತಂಡದಿಂದ ಮನೆಗೆ ನುಗ್ಗಿ ತಾಯಿ ಮತ್ತು ಮಗನ ಮೇಲೆ ಹಲ್ಲೆ..!

ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ ಎಂಬವರ ಮನೆಯಲ್ಲಿ ಎ.30ರಂದು ರಾತ್ರಿ ಪೂಜಾ ಕಾರ್ಯ ನಡೆಯುತ್ತಿದ್ದ ಸಂದರ್ಭ ಅವರ ಸಂಬಂಧಿಕರೇ ಆದ ಯೋಗೀಶ್, ಆನಂದ ಬೀಜದಡಿ, ಶೇಖ‌ರ್, ಆನಂದ ಕುಲಾಡಿ, ಅಣ್ಣು ಗೌಡ, ಹರೀಶ್ ಹಾಗೂ ಇತರರು ಮನೆ ಬಳಿ ಬಂದು ಸೇಸಮ್ಮ ಅವರ ಮಗ ಹರೀಶ್ ನನ್ನು ಉದ್ದೇಶಿಸಿ ಅವಾಚ್ಯವಾಗಿ ಬೈದಿದ್ದಾರೆ. ಇದಾದ …

Read More »

ಉಳ್ಳಾಲ: ಕೋಮುಗಲಭೆ ವೇಳೆ ಕೊಲೆಯಾದ ರಾಜೇಶ್ ಕೋಟ್ಯಾನ್ ಹತ್ಯೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು:  2016ರಲ್ಲಿ ನಡೆದ ಕೋಮುಗಲಭೆ ವೇಳೆ ಉಳ್ಳಾಲದಲ್ಲಿ ಕೊಲೆಯಾದ ರಾಜೇಶ್ ಕೋಟ್ಯಾನ್ ಅಲಿಯಾಸ್‌ ರಾಜ (44) ಅವರನ್ನು ಹತ್ಯೆ ಮಾಡಿದ ನಾಲ್ವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ತಲಾ ₹ 25 ಸಾವಿರ ದಂಡ ವಿಧಿಸಿದೆ. ಉಳ್ಳಾಲ ಆಲದ ಮರದ ಬಳಿಯ ನಿವಾಸಿ, ಚಾಲಕ ಮೊಹಮ್ಮದ್ ಆಸಿಫ್‌ ಅಲಿಯಾಸ್‌ ಆಚಿ (23), ಉಳ್ಳಾಲ ಕೋಡಿಯ ನಿವಾಸಿ ಲೋಡರ್‌ ಮೊಹಮ್ಮದ್ ಸುಹೈಲ್ ಅಲಿಯಾಸ್‌ ಸುಹೈಲ್ (20), ಕೋಡಿ ಮಸೀದಿಯ ಬಳಿಯ ನಿವಾಸಿ, ಕೂಲಿ ಕಾರ್ಮಿಕ ಅಬ್ದುಲ್ …

Read More »

ಮಂಗಳೂರು: ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ವರದಿ

ಮಂಗಳೂರು: ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ. ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ …

Read More »

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್( ರಿ) ಉಡುಪಿ ಸಂಸ್ಥೆಯ ವತಿಯಿಂದ ಜಿಲ್ಲಾಮಟ್ಟದ ವಿಪ್ರ “ಭಕ್ತಿಸಂಗೀತ ಸ್ಪರ್ಧೆ”

ವಿಪ್ರ ಬಾಂಧವರಿಗಾಗಿ… ಮುಖ್ಯವಾಗಿ ಯುವ ಪೀಳಿಗೆಯನ್ನು ಪ್ರೋತ್ಸಾಹಿಸಿ ಅವರ ಪ್ರತಿಭೆಯನ್ನು ಗುರುತಿಸುವುದಕೋಸ್ಕರ ಜಿಲ್ಲಾ ಮಟ್ಟದ ಭಕ್ತಿ ಗೀತೆ ಸ್ಪರ್ಧೆಯನ್ನು ದಿನಾಂಕ 12.05.2024ನೇ ಭಾನುವಾರ ಬ್ರಾಹ್ಮಿ ಸಭಾಭವನದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಸ್ಪರ್ಧೆಯು ನಾಲ್ಕು ವಯೋಮಾನದ ವಿಭಾಗಗಳಲ್ಲಿ ನಡೆಯಲಿದ್ದು ಪ್ರತಿಯೊಂದು ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಪ್ರಶಸ್ತಿಗಳು ಕ್ರಮವಾಗಿ 5000/-, 3000/- ಮತ್ತು 2000 /- ರೂ.ಗಳ ನಗದು ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಈ ಭಕ್ತಿಗೀತೆಸ್ಪರ್ಧೆಯು 5 ವರ್ಷದಿಂದ 10 ವರ್ಷದವರೆಗೆ, 10 ವರ್ಷ ಮೇಲ್ಪಟ್ಟು 15 , 15 ವರ್ಷ ಮೇಲ್ಪಟ್ಟು …

Read More »

ಮಂಗಳೂರು: ವ್ಯಕ್ತಿಯ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು..!

ಮಂಗಳೂರು: ದಾರಿ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಆಗಮಿಸಿದ ಅಪರಿಚಿತ ವ್ಯಕ್ತಿಗಳು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಕತ್ತಿನಲ್ಲಿದ್ದ ಸುಮಾರು ಎರಡೂವರೆ ಪವನ್‌ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆ ಪೋಲಿಸ್ ಠಾಣಾ ವ್ಯಾಪ್ತಿಯ ಪೈವಳಿಕೆ-ಚೇವಾರ್ ರಸ್ತೆಯ ಕಟ್ಟದಪಮನೆ ಎಂಬಲ್ಲಿ ನಡೆದಿದೆ. ಕಟ್ಟದಮನೆ ಗೋಪಾಲ ಕೃಷ್ಣ ಭಟ್ ಚಿನ್ನದ ಸರ ಕಳೆದುಕೊಂಡವರು. ಇವರು ಬೆಳಗ್ಗೆ ಮನೆ ಸಮೀಪದ ತೋಟಕ್ಕೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಹೆಲ್ಮೆಟ್ ಧಾರಿಯಾಗಿ ಆಗಮಿಸಿದ ಇಬ್ಬರು ಅಪರಿಚಿತ ವ್ಯಕ್ತಿಗಳು ದಾರಿ …

Read More »

ಮಂಗಳೂರು : ಮತದಾರರ ಪಟ್ಟಿಯಲ್ಲಿ ಅಬ್ದುಲ್ ನಾಯಿ ಹಾಗೂ ಗಡಸ್ ಹೆಸರು ಸೇರ್ಪಡೆ

ಮಂಗಳೂರು: ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವಾಗ ಎಷ್ಟು ಎಚ್ಚರವಹಿಸಿದರೂ ಕೂಡ ಕೆಲವೊಂದು ಎಡವಟ್ಟುಗಳು ನಡೆಯುತ್ತಲೇ ಇರುತ್ತದೆ.ಆದರೆ ಇಲ್ಲಿ ಮತದಾರರ ಪಟ್ಟಿಯಲ್ಲಿ ಎರಡು ವಿಚಿತ್ರ ಹೆಸರುಗಳು ಸೇರ್ಪಡೆಯಾಗಿದೆ. ಇದಕ್ಕಿಂತ ಒಂದು ಹೆಜ್ಜೆ ಹೋಗಿ ನಾಯಿ-ಹಸುಗಳೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡಿದೆ ಎನ್ನವಂತೆ ಎರಡು ಮತ ಚೀಟಿಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಹೆಸರುಗಳು ಹೊಟ್ಟೆ ಹುಣ್ಣಾಗುವಂತೆ ನಗು ತರಿಸಿದರೂ ಮತದಾರರ ಪಟ್ಟಿಯಲ್ಲಿ ಪ್ರಾಣಿಗಳೂ ಸ್ಥಾನ ಪಡೆದಿರುವುದನ್ನು ಕಂಡ ಸಾರ್ವಜನಿಕರು ಈ ರೀತಿಯ ಪ್ರಮಾದ ಎಸಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪುತ್ತೂರು …

Read More »

You cannot copy content of this page.