ದಕ್ಷಿಣ ಕನ್ನಡ

ಮಂಗಳೂರು: ಕಾರುಡಿಕ್ಕಿ ವ್ಯಕ್ತಿ ಸಾವು – ಪೊಲೀಸ್ ಸಿಬ್ಬಂದಿ ಗಾಯ

ಮಂಗಳೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ನಗರದ ಹೊರವಲಯದ ಪಡೀಲ್ ಪೊಲೀಸ್ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಒರಿಸ್ಸಾ ಮೂಲದ ಮಾಲಿಕ್ (48) ಇಂದು ಗುರುತಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಪಡೀಲ್ ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಈ ಸಂದರ್ಭ ಹರೀಶ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಬಿ.ಸಿ.ರೋಡ್ ಕಡೆಯಿಂದ ತೀರಾ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಅಯೋಧ್ಯೆ ರಾಮ ಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ ಮಾಡಿದ ಇಸ್ರೊ

ಬೆಂಗಳೂರು: ಬಾಹ್ಯಾಕಾಶದಲ್ಲಿ ಉಪಗ್ರಹದಿಂದ ಸೆರೆ ಹಿಡಿಯಲಾಗಿರುವ ಅಯೋಧ್ಯೆ ರಾಮ ಮಂದಿರದ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಬಿಡುಗಡೆಗೊಳಿಸಿದೆ. ಹೈದರಾಬಾದ್‍ನ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಕೇಂದ್ರವು ಈ ಚಿತ್ರವನ್ನು ಹಂಚಿಕೊಂಡಿದ್ದು, ಡಿಸೆಂಬರ್ 16ರಂದು ಅಯೋಧ್ಯೆ ರಾಮ ಮಂದಿರದ ಸ್ಯಾಟಲೈಟ್ ಚಿತ್ರವನ್ನು ತೆಗೆಯಲಾಗಿತ್ತು ಎನ್ನಲಾಗಿದೆ. ಜನವರಿ 22ರ ನಾಳೆ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ನಡೆಯಲಿದೆ.

Read More »

ಜ.22 ಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ನೀಡುವಂತೆ ಶಾಸಕ ಭರತ್ ಶೆಟ್ಟಿ ಒತ್ತಾಯ

ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನಲೆ ಜನವರಿ 22 ರಂದು ರಜೆ ಘೋಷಿಸುವಂತೆ ಹಲವಾರು ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದು, ಇದೀಗ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕೂಡ ಶಾಲಾ- ಕಾಲೇಜುಗಳಿಗೆ ರಜೆ ನೀಡುವಂತೆ ಒತ್ತಾಯಿಸಿದ್ದಾರೆ. ತಾನು ಕೂಡ ರಾಮ ಭಕ್ತ ಎಂದು ಹೇಳುಕೊಳ್ಳುವ ಸಿಎಂ ಸಿದ್ಧರಾಮಯ್ಯ ಅವರು ಮಂದಿರ ಉದ್ಘಾಟನೆಯ ದಿನ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕು. ಆ ಮಕ್ಕಳು ಅವರವರ ಮನೆಗಳಲ್ಲಿ ಕುಟುಂಬ ಸಮೇತರಾಗಿ ಸಂಭ್ರಮ, ಪೂಜೆ ನೆರವೇರಿಸಲು ಅವಕಾಶ ಮಾಡಿಕೊಡಬೇಕು. ರಾಮನ ಆದರ್ಶ ಬೋಧಿಸುವಂತಹ ಶಿಕ್ಷಣ ಇಲಾಖೆಯು …

Read More »

ಕಾರ್ಕಳ: ಮುಂಡ್ಲಿ ಡ್ಯಾಂ ಪೂರ್ತಿ ನೀರು ಸಂಗ್ರಹಣೆ – ನೆಮ್ಮದಿಯ ನಿಟ್ಟಿಸಿರು ಬಿಟ್ಟ ನಾಗರಿಕರು

ಕಾರ್ಕಳ: ವರುಷದ ಮೊದಲ ತಿಂಗಳು ಕಳೆಯುತ್ತಾ ಬಂದಿದೆ. ಬಿಸಿಲಿನ ತಾಪ ಏರಿಕೆ ಕಂಡು ಬರುತ್ತಿದೆ. ಆದರೂ ಕಾರ್ಕಳ ಪುರಸಭೆ ವ್ಯಾಪ್ತಿಗೆ ನೀರಿನ ಆಸರೆಯಾಗಿದ್ದ ಮುಂಡ್ಲಿ ಕಿರು ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಹೆಚ್ಚಿನ ಮಟ್ಟದಲ್ಲಿ ಇರುವುದರಿಂದ ಕುಡಿಯುವ ನೀರಿನ ತಾತ್ವಾರ ಎದುರಾಗದೇ ನಾಗರಿಕರು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ. ಕಾರ್ಕಳ ನಗರ ಪ್ರದೇಶಕ್ಕೆ ನೀರಿನ ಆಸರೆಯಾಗಿರುವ ಮುಂಡ್ಲಿಯ ಕಿರುಅಣೆಕಟ್ಟು 12 ಅಡಿ ಎತ್ತರದ ವಿದ್ದು, ಜನವರಿ 18ರಂದು 12 ಅಡಿ ಎತ್ತರ ಅಳತೆಯಲ್ಲಿ ಮುಂಡ್ಲಿ ಡ್ಯಾಂ ಪೂರ್ತಿ ನೀರು ಸಂಗ್ರಹಣೆಗೊಂಡು ಹೆಚ್ಚುವರಿ ನೀರು ಹೊರ ಹರಿಯುತ್ತಿದೆ. ಕಳೆದ ವರ್ಷ …

Read More »

ಬೆಳ್ತಂಗಡಿ – ಮನೆಗೆ ನುಗ್ಗಿದ ಕಾಳಿಂಗ ಸರ್ಪದ ರಕ್ಷಣೆ ವೇಳೆ ಅಟ್ಯಾಕ್

ಬೆಳ್ತಂಗಡಿ: ಮನೆಯೊಂದರ ಒಳಗೆ ನುಗ್ಗಿದ್ದ ಕಾಳಿಂಗ ಸರ್ಪವೊಂದನ್ನು  ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡದ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಬೆಳ್ತಂಗಡಿಯ ಕಕ್ಕಿಂಜೆಯ ಸೋಮಶೇಖರ್ ಎಂಬವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡ ಕಾರ್ಯಾಚರಣೆ ನಡೆಸಿ ಮನೆಯೊಳಗೆ ಅಡಗಿದ್ದ ಕಾಳಿಂಗ ಸರ್ಪ ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಚರಣೆ ವೇಳೆ ರಕ್ಷಿಸಲು ಬಂದವರ ಮೇಲೆಯೇ ಕಾಳಿಂಗ ಸರ್ಪ ಅಟ್ಯಾಕ್ ಮಾಡಲು ಬಂದಿದೆ. ಬಳಿಕ ಹರ ಸಾಹಸದಿಂದ ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್. …

Read More »

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್; ಬಾರ್, ಮದ್ಯದಂಗಡಿ ಬಂದ್

ಮಂಗಳೂರು: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ.  131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.  …

Read More »

ಮಂಗಳೂರು ಸಿಸಿಬಿ ಮಿಂಚಿನ ಕಾರ್ಯಾಚರಣೆ, ಆಟೋದಲ್ಲಿ MDMA ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ @ ತೌಚಿ(23) ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ. ಜನವರಿ 18 ರಂದು ನಗರದ ಪಳ್ನೀರ್ ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು …

Read More »

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರು ವಶಕ್ಕೆ

ಮಂಗಳೂರು : ಕದ್ರಿ ಪಾರ್ಕ್ ಗೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ಇಂದು ಬೆಳಗ್ಗೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಕದ್ರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಪ್ರಾಪ್ತ ಸೇರಿದಂತೆ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳಾದ ಬಂಟ್ವಾಳ ನಿವಾಸಿಗಳಾದ ನಿತಿನ್ ಹರ್ಷ ಸೇರಿದಂತೆ ಪೆರ್ಮುದೆಯ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕನೊಬ್ಬನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತೂರಿನ ಕಾಲೇಜಿನಲ್ಲಿ ಜರ್ನಲಿಸಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಅಖಿಲ್ ಚಾಕೋ ಹಾಗೂ ದೇರಳಕಟ್ಟೆಯ ಕಾಲೇಜೊಂದರಲ್ಲಿ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ತಂಡವೊಂದು ನೈತಿಕ ಪೊಲೀಸ್ ಗಿರಿ …

Read More »

ಬೆಳ್ತಂಗಡಿ: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿ ಅವಾಂತರ- ಉರುಳಿದ ಕಂಬ

ಬೆಳ್ತಂಗಡಿ: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿಯೊಂದು ವಿದ್ಯುತ್‌ ತಂತಿಗಳಿಗೆ ಸಿಲುಕಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎನ್ನುವಲ್ಲಿ ಬುಧವಾರ ತಡರಾತ್ರಿ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ಲಾರಿಯ ಚಾಲಕ ಮೇಲ್ಭಾಗದಲ್ಲಿದ್ದ ವಿದ್ಯುತ್‌ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದೆ ಸಾಗಿದ್ದಾನೆ. ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದವು. ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು. ಕಾರ್ಕಳದ ಗುತ್ತಿಗೆ ಕಂಪೆನಿಯೊಂದರ ಲಾರಿಯಾಗಿದ್ದು, ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ. ಚಾಲಕ …

Read More »

ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಉಡುಪಿ, ಜ. 19: ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ಕೊಡವೂರಿನ ಉಡುಪರತ್ನ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಚತುರ್ಥ ವಿಶ್ವಗೀತಾ ಪರ್ಯಾಯದ ಅಂಗವಾಗಿ “ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ “ಛಾಯಾಚಿತ್ರ ಪ್ರದರ್ಶನವನ್ನು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ದಲ್ಲಿ ಜ. 18 ರಂದು ಉದ್ಘಾಟನೆಗೊಂಡಿತು . ಜಪಾನಿನ ರಿಸ್ಸೋ ಕೊಸೈ ಕೋಯ್ ಸಂಸ್ಥೆಯ ನಿಯೋಜಿತ ಅಧ್ಯಕ್ಷೆ ರೆ. ಕೋಶೊ ನಿವಾನೋ ಪ್ರದರ್ಶನವನ್ನು ಉದ್ಘಾಟಿಸಿದರು. ಆಸ್ಟ್ರೇಲಿಯಾ, ವಿಕ್ಟೋರಿಯಾದ ಮಾಜಿ ಸಚಿವ, ಲ್ಯೂಕ್ ಡನೆಲನ್ , ಮಣಿಪಾಲ …

Read More »

You cannot copy content of this page.