ದಕ್ಷಿಣ ಕನ್ನಡ

ಮಂಗಳೂರು: ಫೆ. 11-15: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಈ ಬಾರಿಯ ವರ್ಷಾವಧಿ ಮಹಾಪೂಜೆಗೆ ಮುಂಚಿತವಾಗಿ ಫೆ. 11ರಿಂದ 15ರ ವರೆಗೆ ಬ್ರಹ್ಮಕಲಶೋತ್ಸವ ನೆರವೇರಲಿದೆ ಎಂದು ಪ್ರಧಾನ ಸಂಚಾಲಕ ಗೌತಮ್‌ ಸಾಲ್ಯಾನ್‌ ಕೋಡಿಕಲ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಫೆ. 11ರಂದು ಬ್ರಹ್ಮಕಲಶೋತ್ಸವ ವಿಧಿ ಆರಂಭವಾಗಲಿದ್ದು, 13ರಂದು ಪುನಃ ಪ್ರತಿಷ್ಠೆ, 15ರಂದು ಬ್ರಹ್ಮಕಲಶೋತ್ಸವ, 16ರಂದು ವರ್ಷಾವಧಿ ಮಹಾಪೂಜೆ ಪ್ರಸಾದ ಹಾರಿಸುವಿಕೆ, 23ರಂದು ಚಂಡಿಕಾಯಾಗ, 26, 27ರಂದು ವರ್ಷಾವಧಿ ಪೂಜೆ ಮತ್ತು ಮಾ. 2ರಂದು ಮಲರಾಯ ನೇಮ ನೆರವೇರಲಿದೆ ಎಂದರು. ಗರ್ಭಗುಡಿಯ ದುರಸ್ತಿ ಸಹಿತ ದೇವಸ್ಥಾನದ ಸುತ್ತು ಪೌಳಿಗಳನ್ನು ನವೀಕರಿಸಲು ನಿರ್ಧರಿಸಲಾಗಿದೆ. …

Read More »

‘ಕುಕ್ಕರ್ ಬಾಂಬ್’ ಆರೋಪಿಗೆ ಕದ್ರಿ ದೇಗುಲವೇ ಟಾರ್ಗೆಟ್: ಕೋರ್ಟ್ ಗೆ ‘NIA’ ಆರೋಪ ಪಟ್ಟಿ ಸಲ್ಲಿಕೆ

ಮಂಗಳೂರು: ವರ್ಷದ ಹಿಂದೆ ಮಂಗಳೂರಿನ ಕಂಕನಾಡಿಯ ನಾಗುರಿಯಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ಅದರಲ್ಲಿ ಇದೊಂದು ಐಸಿಸ್ ಪ್ರೇರಿತ ದಾಳಿ ಎಂಬುದಾಗಿ ಹೇಳಲಾಗಿದೆ. ಮಂಗಳೂರಿನ ಕದ್ರಿ ದೇವಸ್ಥಾನವೇ ಆರೋಪಿಗಳ ಟಾರ್ಗೆಟ್ ಆಗಿತ್ತು. ಷರಿಯತ್ ಕಾನೂನಿಗೆ ಪ್ರಚಾರ ನೀಡುವ ಉದ್ದೇಶ ಆರೋಪಿಗಳಿಗೆ ಇತ್ತು. ದಾಳಿ ಬಳಿಕ ಐಸಿಸ್ ಸೇರುವ ಉದ್ದೇಶ ಬಂಧಿತರಿಗಿತ್ತು ಎಂದು ತನಿಖಾಧಿಕಾರಿಗಳು ಹೇಳಿಕೊಂಡಿದ್ದಾರೆ. ನ.19, 2022ರಂದು ನಗರದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡು ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಮಂಗಳೂರಿನಲ್ಲಿ …

Read More »

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಸಂಭ್ರಮದ ಕಾರ್ತಿಕ ದೀಪೋತ್ಸವ

ಮಂಗಳೂರು : ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದಲ್ಲಿ ವರ್ಷಂಪ್ರತಿಯಂತೆ ಆಚರಿಸುತ್ತಿರುವ ಕಾರ್ತಿಕ ದೀಪೋತ್ಸವದ ಉತ್ಸವವನ್ನು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನವೆಂಬರ್ 27 ರ ಸೋಮವಾರದಂದು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಗ್ಗೆ 10.00ರಿಂದ ಕಾರ್ತಿಕ ಮಾಸದ ಹುಣ್ಣಿಮೆಯ ಈ ವಿಶೇಷ ದಿನದಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆಯೂ ನಡೆಯಿತು. ನಂತರ ಸಂಜೆ 6 ರಿಂದ ದೇವಳದಲ್ಲಿ ಶ್ರೀ ವೀರನಾರಾಯಣ ಭಜನಾ ಮಂಡಳಿ ಹಾಗೂ ಮಾತೃ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆದು, ಶ್ರೀ ಮಹಾಗಣಪತಿ ಹಾಗೂ ಶ್ರೀ ವೀರನಾರಾಯಣ …

Read More »

ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಜೋಡಿ ಕೇರಳದಲ್ಲಿ ಪತ್ತೆ..!

ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ನವಜೋಡಿಗಳು ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಉದ್ದೋಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ ( 23) ಕಾಣೆಯಾಗಿರುವ ಜೋಡಿಯಾಗಿದ್ದರು.  ಆಸ್ಮಾ ಅವರು ದೇರಳಕಟ್ಟೆ ನಡುಪದವು ಪಿ.ಎ.ಕಾಲೇಜಿನಲ್ಲಿ …

Read More »

ಮಂಗಳೂರು: ಸುಳ್ಳು ಬಾಡಿಗೆ ಕರಾರು ಪತ್ರ ಮಾಡಿ 1.14 ಕೋ.ರೂ. ವಂಚನೆ

ಮಂಗಳೂರು: ಸುಳ್ಳು ಬಾಡಿಗೆ ಕರಾರು ಪತ್ರ ಮಾಡಿ 1,14,10,000 ರೂ. ಪಡೆದು ವಂಚಿಸಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರತೀಶ್‌ ಬಿ.ಎನ್‌. ವಂಚನೆಗೆ ಒಳಗಾದವರು. ರಾಮ್‌ ಮೋಹನ್‌ ರೈ ಆರೋಪಿ. ರತೀಶ್‌ ಬಿ.ಎನ್‌ ರವರು 2020-21 ರಲ್ಲಿ ಮಹೇಶ್‌ ಫೌಂಡೇಶನ್‌ ಎಂಬ ಸಂಸ್ಥೆಯನ್ನು ಪ್ರಾರಂಭಿಸಿದ್ದು ಈ ಸಂಸ್ಥೆಯನ್ನು ಮಂಗಳೂರಿನ ಮಠದಕಣಿಯಲ್ಲಿರುವ ಗ್ಲೋಬಲ್‌ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ ಪ್ರ.ಲಿ ಕಟ್ಟಡದಲ್ಲಿ ತಿಂಗಳಿಗೆ 10 ಲಕ್ಷ ಬಾಡಿಗೆ ಮತ್ತು 40 ಲಕ್ಷ ಮುಂಗಡ ಠೇವಣಿ ಇಟ್ಟು ಪ್ರಾರಂಭಿಸಿದ್ದರು.   ಈ ಕಟ್ಟಡವನ್ನು ರಾಮ್‌ ಮೋಹನ್‌ ರೈ 2021 …

Read More »

ಮಂಗಳೂರು: ಮನೆಗೆ ನುಗ್ಗಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್‌ನ‌ ಸಂಕೈಗುಡ್ಡದಲ್ಲಿ ನಡೆದಿದೆ. ನ.24ರ ರಾತ್ರಿ 11.30ರಿಂದ ನ.25ರ ಬೆಳಗ್ಗೆ 6 ಗಂಟೆಯ ನಡುವೆ  ಈ ಘಟನೆ ನಡೆದಿದ್ದು,  ಮನೆಯ ಬೆಡ್‌ರೂಂನ ಕಿಟಕಿಯ ಗ್ರಿಲ್ಸ್‌ನ್ನು ತುಂಡರಿಸಿ ಕಳ್ಳರು ಮನೆ ಪ್ರವೇಶಿಸಿದ್ದಾರೆ. ಬೆಡ್‌ರೂಂ ಕಪಾಟಿನಲ್ಲಿದ್ದ ಅಂದಾಜು 16 ಗ್ರಾಂ ತೂಕದ ಒಂದು ಜತೆ ಕಿವಿಯ ಓಲೆ, 144 ಗ್ರಾಂ ತೂಕದ 4 ಚಿನ್ನದ ನೆಕ್ಲೆಸ್‌, 40 ಗ್ರಾಂ ತೂಕದ ಚಿನ್ನದ ಸರ, 48 ಗ್ರಾಂ ತೂಕದ …

Read More »

ಮಂಗಳೂರು: ಸಾಕು ನಾಯಿಗಳಿಗೆ ಪಾಲಿಕೆಯಿಂದ ಡಾಗ್ ಲೆಸೆನ್ಸ್ ಪಡೆಯಲು ಸೂಚನೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ ಪರಿಣಾಮಗಳು ಬೀರುತ್ತಿದೆ ಹಾಗೂ ನಗರದಲ್ಲಿ ರೇಬಿಸ್ ಕಾಯಿಲೆಗಳು ಹರಡುವ ಸಂಭವ ಹೆಚ್ಚಾಗಿರುತ್ತದೆ. ಈ ಎಲ್ಲ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆಯು ಈಗಾಗಲೇ ನಗರದಲ್ಲಿ ಸಾಕು ನಾಯಿಗಳಿಗೆ (Dog licence) ಪರವಾನಿಗೆಯನ್ನು ಪಡೆಯುವಂತೆ ಕ್ರಮಕೈಗೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಪಾಲಿಕೆಯಿಂದ (Dog licence) ಪರವಾನಿಗೆ ಪಡೆಯಲು ಅರ್ಜಿ ಪ್ರತಿ ಪಡೆದುಕೊಳ್ಳಬೇಕು. ಸಾಕು ನಾಯಿಗೆ …

Read More »

ಪುತ್ತೂರು: ಕ್ರೀಡಾಕೂಟದಲ್ಲಿ ಬಹುಮಾನ ಸಿಗದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ..!

ಪುತ್ತೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಿಯುತ್ತಿದ್ದ ನಿಶಾ(17) ಎಂದು ಗುರುತಿಸಲಾಗಿದೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಆದರೆ ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ, ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದರು. ಈ ವೇಳೆ ತೀವ್ರ …

Read More »

ವಿಟ್ಲ: ಮಹಿಳೆಗೆ ಚಾಕು ತೋರಿಸಿ ಚಿನ್ನ ಕಳ್ಳತನಕ್ಕೆ ಯತ್ನಿಸಿ ಪರಾರಿ

ವಿಟ್ಲ: ಕುಳ ಗ್ರಾಮದ ನೀರಪಳಿಕೆಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಗೆ ಚಾಕು ತೋರಿಸಿ, ಕಿವಿಯಲ್ಲಿರುವ ಚಿನ್ನ ಕೊಡುವಂತೆ ಕೇಳಿದ್ದಾನೆ.ಇನ್ನು ಬೆದರಿದ ಮಹಿಳೆ ಹಿಂದಿನ ಬಾಗಿಲು ಮೂಲಕ ಹತ್ತಿರದ ಮನೆಯವರನ್ನು ಕೂಗಿ ಕರೆದಾಗ ಆತ ಹಿಂಬದಿಯ ತೋಟದ ದಾರಿಯಾಗಿ ಪರಾರಿಯಾಗಿದ್ದಾನೆ.112ಕ್ಕೆ …

Read More »

ಬೆಳ್ತಂಗಡಿ: ಮನೆಯ ಶೆಡ್‌ ನಲ್ಲಿ ನಿಲ್ಲಿಸಿದ್ದ ಕಾರು ಕಳವು- ನಾಲ್ವರ ಬಂಧನ

ಬೆಳ್ತಂಗಡಿ: ಮನೆಯ ಶೆಡ್‌ನ‌ಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ನಡೆದಿದೆ. ಕಿನ್ನಿಗೋಳಿಯ ತಾಳಿಪಾಡಿ ಗ್ರಾಮದ ಉಮಾ ಅಜಯ್‌ ಶೆಟ್ಟಿ(32), ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ಸೂರಜ್‌ ಶೆಟ್ಟಿ(23), ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ (30) ಮತ್ತು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಪರೆಕಲ್‌ ನಿವಾಸಿ ಕಿಶೋರ್‌ ಟಿ.(32) ಬಂಧಿತ ಆರೋಪಿಗಳು.ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಇಸಾಕ್‌ ಅವರ ಅಕ್ಕನ ಮಗ ನೌಫಾಲ್‌ ತನ್ನ ಕಾರ್‌ಶೆಡ್ಡಿನಲ್ಲಿ …

Read More »

You cannot copy content of this page.