ಕರಾವಳಿ

ಉಪ್ಪಿನಂಗಡಿ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್- ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ಬೆಂಕಿಗಾಹುತಿ

ಉಪ್ಪಿನಂಗಡಿ : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗಾಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಸಂಭವಿಸಿದೆ. ಅಸ್ಲಂ ಎಂಬವರ ಮನೆಯಲ್ಲಿ ಶನಿವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಮನೆಯ ಮಾಲಕ ವಿದೇಶದಲ್ಲಿದ್ದು, ಅವರ ಪತ್ನಿ ಮನೆಗೆ ಬೀಗ ಹಾಕಿ ತನ್ನ ಮಕ್ಕಳೊಂದಿಗೆ ಪೇಟೆಗೆ ಹೋಗಿದ್ದರು. ಆ ಸಂದರ್ಭದಲ್ಲಿ ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಕಂಡ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಮನೆಯೊಳಗೆ ಬೆಂಕಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು …

Read More »

ಪುತ್ತೂರು: ಧರೆಗುರುಳಿದ ಬೃಹತ್ ಗಾತ್ರದ ಮಾವಿನ ಮರ- ವಾಹನಗಳು ಜಖಂ

ಪುತ್ತೂರು: ಬೃಹತ್ ಗಾತ್ರದ ಮಾವಿನ ಮರವೊಂದು ಏಕಾಏಕಿ ಧರೆಗುರುಳಿ ಬಿದ್ದು ಹಲವು ವಾಹನಗಳು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜುಇಲ್ಲೆಯ ಪುತ್ತೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರಿನ ಬೊಳ್ವಾರ್ ಹರಿಪ್ರಸಾದ್ ಹೊಟೇಲ್ ಬಳಿ ಈ ಘಟನೆ ನಡೆದಿದ್ದು ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದೆ. ಬೃಹತ್ ಮರಬಿದ್ದ ಪರಿಣಾಮ ತಮ್ಮ ವಾಹನವನ್ನ ಹೊರತರಲು ವಾಹನ ಮಾಲಿಕರು ಪರದಾಡಿದರೆ, ಬಿದ್ದ ಮರದ ಮಾವಿನ ಮಿಡಿ ಕೊಯ್ಯಲಯ ಜನ ಮುಗಿಬಿದ್ದಿದ್ದರು. ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ಅವಘಡ ತಪ್ಪಿದ್ದು ಮರದ ಕೊಂಬೆಗಳನ್ನು ಸ್ಥಳೀಯರ ನೆವಿನಿಂದ ತೆರವು …

Read More »

ಮಾಣಿ: ಬಸ್ – ಆಟೋ ನಡುವೆ ಢಿಕ್ಕಿ: ಆಟೋ ಚಾಲಕ ಮೃತ್ಯು

ಮಾಣಿ: ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದಾಗ ಪಾಸ್ ಆಗುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಕ್ರಂಪಾಡಿ ಬಳಿ ನಡೆದಿದೆ. ಮೃತ ಆಟೋ ಚಾಲಕನನ್ನು ಜೈಸನ್ (30)ಎಂದು ಗುರುತಿಸಲಾಗಿದೆ. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ನಸುಕಿನ ಜಾವ ಸುಮಾರು 2 ಗಂಟೆಗೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಜೈಸನ್ …

Read More »

ಪುತ್ತೂರು: ಮತದಾನ ಮಾಡುವ ಫೋಟೋ ಕ್ಲಿಕ್ಕಿಸಿ ವೈರಲ್ – ಯುವಕನ ಮೇಲೆ ಪ್ರಕರಣ ದಾಖಲು

ಪುತ್ತೂರು: ಮತದಾನ ಪ್ರಕ್ರಿಯೆ ಗೌಪ್ಯವಾಗಿ ಆಗಬೇಕಾದದ್ದು ನಿಯಮ. ಆದರೆ ಮತದಾನ ಮಾಡುತ್ತಿರುವ ದೃಶ್ಯವನ್ನು ಮತದಾರನಿಬ್ಬ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಪುತ್ತೂರು ತಾಲೂಕಿನ ಮತಗಟ್ಟೆಯೊಂದರಲ್ಲಿ ತಾನು ಮತದಾನ ಮಾಡುತ್ತಿದ್ದ ಫೋಟೊವನ್ನು ಕ್ಲಿಕ್ಕಿಸಿ ಯುವಕನೋರ್ವನು ವೈರಲ್ ಮಾಡಿದ್ದ. ಮತಗಟ್ಟೆಯೊಳಗೆ ಮೊಬೈಲ್ ಫೋನ್ ಒಯ್ಯುವುದು ನಿಷೇಧವಿದ್ದರೂ, ಈತ ಮೊಬೈಲ್ ಕೊಂಡೊಯ್ದಿದ್ದ. ಮತದಾನ ಮಾಡುವ ದೃಶ್ಯವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾನೆ. ಪುತ್ತೂರು ವಿಧಾನಸಭಾ ಕ್ಷೇತ್ರ – 206ರ ಮತಗಟ್ಟೆ …

Read More »

ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಬಂಧನ,ಹಾವೇರಿಗೆ ಜಿಲ್ಲೆಗೆ ಗಡಿಪಾರು

ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡೀಪಾರು ನಡೆಸುವ ಸಿದ್ದತೆ ನಡೆಸಿದ್ದು ಇದು ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಇದನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಂತರ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ.

Read More »

ಉಡುಪಿ : ವಿದ್ಯುತ್‌ ಕಂಬಕ್ಕೆ ಢಿಕ್ಕಿ – ಮಹಿಳೆ ಸಾವು..!

ಪಡುಬಿದ್ರಿ: ನಗರ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್‌ ಬಳಿ ಬೆಳಗ್ಗೆ ಕೆಂಪು ಬಣ್ಣದ ವ್ಯಾಗನರ್‌ ಕಾರು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್‌. ಆಭ್ಯಂಕರ್‌ ಅವರ ಪತ್ನಿ ಸುಮಂಗಲಾ ಎಂ. (55) ಎಂದು ತಿಳಿದು ಬಂದಿದೆ. ರಾಜ್ಯ ಹೆದ್ದಾರಿ-1ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಅಪಘಾತ ಸಂಭವಿಸಿದೆ. ಈ ದಂಪತಿ ಕಾರ್ಕಳ ಮಾಳದಲ್ಲಿನ ಉಪನಯನ ಕಾರ್ಯಕ್ರಮಕ್ಕೆ ಮಂಗಳೂರು ಕಾವೂರಿನಿಂದ ಹೊರಟು ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ. ರಾಜ್ಯ …

Read More »

ಕಡಬ: ತಾಳಿ ಕಟ್ಟಿಸಿಕೊಳ್ಳುವ ವೇಳೆ ಮಧುವೆ ನಿರಾಕರಿಸಿದ ವಧು-ಮುರಿದು ಬಿದ್ದ ಮದುವೆ

ನೆಲ್ಯಾಡಿ: ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕೊಣಾಲು ಗ್ರಾಮದ ಕೋಲ್ಪೆ ದಿ. ಬಾಬು ಗೌಡರ ಪುತ್ರ ಉಮೇಶ ಅವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ. ಕೊರಗಪ್ಪ ಗೌಡರವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಬೆಳಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಡೆದು ಮಧ್ಯಾಹ್ನ 1 ಗಂಟೆಗೆ ಕೊಲ್ಪೆಯ ವರನ ಮನೆಯಲ್ಲಿ ಸತ್ಕಾರ ಕೂಟ ನಿಗದಿಯಾಗಿತ್ತು. ಅದರಂತೆ ವರ …

Read More »

 ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 77.44% ಮತದಾನ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ 77.44% ರಷ್ಟು ಮತದಾನವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು 77.44% ಮತದಾನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ನಿಖರ ಶೇಕಡಾವಾರು ಮತದಾನದ ವಿವರ ಮತಗಟ್ಟೆ ಅಧಿಕಾರಿಗಳು ನೀಡುವ ಕೊನೆಯ ಹಂತದ ಮತದಾನದ ಪ್ರಮಾಣದ ಬಳಿಕ ತಿಳಿದುಬರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಂತಿಯುತ ಚುನಾವಣೆ ನಡೆದಿದೆ. ಸೂಕ್ಷ್ಮ ಮತಗಟ್ಟೆಗಳಲ್ಲೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂಜಾನೆಯಿಂದಲೇ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

Read More »

ಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಚೂರಿ ಇರಿತ..!

ಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ. ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್​ಗೆ ಗಾಂಜಾ ವ್ಯಸನಿಯಾಗಿರುವ ಆರೋಪಿ ಚರಣ್ ಚಾಕು ಇರಿದಿದ್ದಾನೆ. ಕೂಡಲೇ ಪವನ್​ನನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ …

Read More »

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್‌ ದಾಖಲು

2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 30.96% ದಾಖಲಾಗಿದೆ.

Read More »

You cannot copy content of this page.