ಕರಾವಳಿ

ಮಂಗಳೂರು: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ರಹಸ್ಯ ಚಿತ್ರೀಕರಣ; ಅಪ್ರಾಪ್ತ ಬಾಲಕ ವಶಕ್ಕೆ

ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ ಒಂದರಲ್ಲಿ ಮೊಬೈಲ್ ಇಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಗರ ಪೊಲೀಸರು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆದಿದೆ. ಮೇ 06ರಂದು ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ ಲೇಡಿಸ್ ಟಾಯ್ಲೆಟ್‌ ಗೆ ಹೋಗಿ ಮೊಬೈಲ್ ಇಟ್ಟಿದ್ದ. ತದನಂತರ ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆದ ಸದ್ದು ಕೇಳಿಸಿದ್ದು ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ಸಿಕ್ಕ ಬಳಿಕ ಕಾಲೇಜು ಸಿಬ್ಬಂದಿ ಬಂದರು ಪೊಲೀಸ್ ಠಾಣೆಗೆ …

Read More »

ಮಂಗಳೂರು: ಮೆಡಿಕಲ್ ಕಾಲೇಜು ಲೇಡಿಸ್ ಟಾಯ್ಲೆಟ್‌ನಲ್ಲಿ ರಹಸ್ಯ ಮೊಬೈಲ್ ಇಟ್ಟು ಚಿತ್ರೀಕರಣ-ದೂರು ದಾಖಲು

ಮಂಗಳೂರು: ನಗರದ ಬಾವುಟಗುಡ್ಡ ಮುಲ್ಕಿ ಸುಂದರರಾಮ್ ಶೆಟ್ಟಿ ರಸ್ತೆಯ ಕಸ್ತೂರ್ ಬಾ ಮೆಡಿಕಲ್ ಕಾಲೇಜಿನ ಲೇಡೀಸ್ ಟಾಯ್ಲೆಟ್ ನಲ್ಲಿ ರಹಸ್ಯವಾಗಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಲಾಗಿದೆ ಎಂದು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯುರಿಟಿ ಫೀಲ್ಡ್ ಮ್ಯಾನೇಜರ್ ರಾಜು ಅವರಿಗೆ ಮೇ 06ರಂದು ಸಂಜೆ ಸುಮಾರು 3:30ರ ಸುಮಾರಿಗೆ ಒಂದನೇ ಮಹಡಿಯ ಮಹಿಳೆಯರ ಶೌಚಾಲಯದಲ್ಲಿ, ಮೊಬೈಲ್ ಫೋನ್ ರಿಂಗ್ ಆಗುತ್ತಿರುವ ಶಬ್ದ ಕೇಳುತ್ತಿದೆ ಆದರೆ ಯಾರೂ ಇಲ್ಲ ಎಂದು ಮಾಹಿತಿ ಲಭ್ಯವಾಗುತ್ತದೆ. ತಕ್ಷಣ ಅಲ್ಲಿಗೆ ಹೋಗಿ ಅವರು ಪರಿಶೀಲನೆ …

Read More »

ಕುಂದಾಪುರ: ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಅಂಗಡಿಗಳು; ಲಕ್ಷಾಂತರ ರೂ. ನಷ್ಟ

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿಗಳು ಸುಟ್ಟು ಕರಕಲಾದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಕುಂದಾಪುರದ ಸಿದ್ದಾಪುರದಲ್ಲಿ ಸೋಮವಾರ ನಡೆದಿದೆ. ಅಗ್ನಿ ಅವಘಡದಿಂದ ಸ್ಪೇರ್ ಪಾರ್ಟ್ಸ್ ಅಂಗಡಿ ಅದೇ ಕಟ್ಟಡದಲ್ಲಿದ್ದ ಮಿಲ್ಕ್ ಪಾರ್ಲರ್ ಸುಟ್ಟು ಕರಕಲಾಗಿದೆ. ಜೊತೆಗೆ ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿದ್ದ ಬಿಡಿಭಾಗಗಳು, ಟಯರ್, ಆಯಿಲ್ ಡಬ್ಬಗಳು ಸೇರಿ ಹಲವು ವಸ್ತುಗಳ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಮಿಲ್ಕ್ ಪಾರ್ಲರ್ ನಲ್ಲಿದ್ದ ಉತ್ಪನ್ನಗಳು ಫ್ರಿಡ್ಜ್‌ ಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡ …

Read More »

ಉಡುಪಿ ತಾಲೂಕು ಕಸಾಪ ದಿಂದ ಸಂಸ್ಥಾಪನ ದಿನಾಚರಣೆ ಹಾಗೂ ಉಪನ್ಯಾಸ

ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ಮೇ ಏಳರಂದು ಮಂಗಳವಾರ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಲ್ಲಿ ನಡೆಯಿತು. ಸಮಾರಂಭವನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಿದರು. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸ ನೀಡಿದ ಸಾಹಿತಿ ಡಾ. ನಿಕೇತನ, ಕಾರಂತರ ಕೃತಿಗಳು ಓದುಗರನ್ನು ಸಹೃದಯಿಗಳನ್ನಾಗಿ ಮಾಡುತ್ತದೆ. ವೈಚಾರಿಕ ದೃಷ್ಟಿಕೋನ …

Read More »

ಹಿಂ.ಜಾ.ವೇ. ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ

ವಿಟ್ಲ : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ವಿಟ್ಲ ಪೊಲೀಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದು, ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಗಡಿಪಾರಿಗೆ ಹೈಕೋರ್ಟಿನಲ್ಲಿ ತಡೆ ತಂದಿದ್ದಾರೆ.ವಕೀಲರಾದ ಪ್ರಾಂತ ನ್ಯಾಯ ಜಾಗರಣ ಕಿಶೋರ್ ಕುಮಾರ್ ಮಂಗಳೂರು, ಜಿಲ್ಲಾ ನ್ಯಾಯಾ ಜಾಗರಣದ ರಾಜೇಶ್ ಬೊಲ್ಲುಕಲ್ಲು ಸಹಕರಿಸಿದರು.

Read More »

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪೆಕ್ಸ್ ಇಂಡಿಯಾ ಪ್ಲಾಟಿನಂ ಅವಾರ್ಡ್

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಪೆಕ್ಸ್ ಇಂಡಿಯಾ ಫೌಂಡೇಶನ್ ನೀಡುವ 8ನೇ ಅಪೆಕ್ಸ್ ಇಂಡಿಯಾ ಆಕ್ಯುಪೇಶನಲ್ ಹೆಲ್ತ್ ಆ್ಯಂಡ್ ಸೇಫ್ಟಿ ಅವಾರ್ಡ್ಸ್-2023 ಸಮಾರಂಭದಲ್ಲಿ ಪ್ಲಾಟಿನಂ ಪ್ರಶಸ್ತಿ ಪಡೆದುಕೊಂಡಿದೆ. ವಿಮಾನ ನಿಲ್ದಾಣವು ತನ್ನ ಉದ್ಯೋಗಿಗಳಿಗೆ ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆಯ ಅತ್ಯುನ್ನತ ಮಾನದಂಡ ಕಾಪಾಡಿಕೊಳ್ಳುವ ಬದ್ಧತೆಯ ದೃಷ್ಟಿಯಿಂದ ಈ ಪ್ರಶಸ್ತಿಯನ್ನು ನೀಡಲಾಗಿದೆ. ವಾಣಿಜ್ಯ ಕಾರ್ಯಾಚರಣೆಯ ದಿನಾಂಕದಿಂದ ತನ್ನ ಕಾರ್ಯಾಚರಣೆಯ ಪ್ರಯಾಣದುದ್ದಕ್ಕೂ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶೂನ್ಯ ಕೆಲಸದ ಸ್ಥಳಕ್ಕೆ ಸಂಬಂಧಿಸಿದ ಘಟನೆಗಳಿಗೆ ಒತ್ತು ನೀಡುವ ಮೂಲಕ ದೃಢವಾದ ಸುರಕ್ಷತಾ ಕ್ರಮಗಳನ್ನು ನಿರಂತರವಾಗಿ ಜಾರಿಗೆ …

Read More »

ಮಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಂಗಳೂರು : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕಾಸರಗೋಡಿನ ಮಂಜೇಶ್ವರ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತಪಟ್ಟ ಕೈದಿ. 2022ರ ಡಿಸೆಂಬರ್ ಸಂದರ್ಭ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೊಣಾಜೆ ಪೊಲೀಸರಿಂದ ಅರೆಸ್ಟ್ ಆಗಿದ್ದ. ಆ ಬಳಿಕದಿಂದ ಆತ ಮಂಗಳೂರು ಜೈಲಿನಲ್ಲೇ ಇದ್ದನು. ಆತನಿಗೆ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ. ಜೈಲಿನಲ್ಲಿ ಈತ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಹಿನ್ನೆಲೆಯಲ್ಲಿ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಎಪ್ರಿಲ್ 25ರಂದು ದಾಖಲಿಸಲಾಗಿತ್ತು. ಮೇ …

Read More »

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ. ಬಾಲಕಿಯ ಪೋಷಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ನೀಟ್ ಪರೀಕ್ಷೆಯಲ್ಲಿ ಅಂಕ ಬರುವುದಿಲ್ಲ ಎಂಬ ಭಯದಲ್ಲಿದ್ದಳು ಎಂದಿದ್ದಾರೆ. ದಿವ್ಯಾ ಭಾನುವಾರ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಶನಿವಾರ ತಡರಾತ್ರಿಯೇ ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಪೊಲೀಸರು …

Read More »

ಬಂಟ್ವಾಳ: ಕಾರಿಗೆ ಸೈಡ್‌ ನೀಡಿಲ್ಲವೆಂದು ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ

ಬಂಟ್ವಾಳ: ಕಾರಿನ ಚಾಲಕರಿಗೆ ಸೈಡ್ ಕೊಟ್ಟಿಲ್ಲ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕನಿಗೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿ,ಬಸ್ ಗೆ ಹಾನಿಗೊಳಿಸಿದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಆದಿತ್ಯವಾರ ಸಂಜೆ ವೇಳೆ ನಡೆದಿದೆ. ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಅವರು ಬಸ್ ಚಾಲಕನಾಗಿದ್ದು, ಅವರ ಮೇಲೆ ಹಲ್ಲೆ ಯಾಗಿದೆ ಎಂದು ಬಂಟ್ವಾಳ ನಗರ ಪೋಲಿಸ್ ‌ಠಾಣೆಗೆ ದೂರು ನೀಡಿದ್ದಾರೆ. ಘಟನೆಯಿಂದ ಸುಮಾರು 30 ಸಾವಿರ ರೂ ನಷ್ಟ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ.ಗೆ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ …

Read More »

ಪಣೋಲಿಬೈಲು ಕೋಲಸೇವೆ 25ವರ್ಷಕ್ಕೆ ಬುಕ್ಕಿಂಗ್- ನಿತ್ಯವೂ ನಾಲ್ಕರ ಬದಲು 8ಕೋಲಗಳಿಗೆ ಅವಕಾಶ

ಮಂಗಳೂರು: ನಗರದ ಪ್ರಸಿದ್ಧ ಕಲ್ಲುರ್ಟಿ ಕ್ಷೇತ್ರ ಪಣೋಲಿಬೈಲು ದೈವಸ್ಥಾನದಲ್ಲಿ ಭಕ್ತರು ನೀಡುವ ಕೋಲಸೇವೆಯ ಬುಕ್ಕಿಂಗ್ ಹೆಚ್ಚಾಗಿದ್ದು, ಆದ್ದರಿಂದ ಕೋಲ ಸೇವೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಸದ್ಯ ಪಣೋಲಿಬೈಲ್ ಕ್ಷೇತ್ರದಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್‌ ಆಗಿದೆ. ಭಕ್ತರಿಗೆ ಶೀಘ್ರ ಸೇವೆ ಸಂದಾಯದ ಅವಕಾಶದ ಹಿನ್ನೆಲೆಯಲ್ಲಿ ಪ್ರತೀದಿನ ನಡೆಯುತ್ತಿದ್ದ ಕೋಲದಲ್ಲಿ ಬದಲಾವಣೆ ಮಾಡಲಾಗಿದೆ. ಈವರೆಗೆ ಪ್ರತೀದಿನ 4 ಮಂದಿಗೆ ಕೋಲ ಸೇವೆ ಮಾಡಲಾಗುತ್ತಿತ್ತು. ಇದೀಗ ಅದನ್ನು 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ನೀಡಲಾಗಿದೆ. ಮೇ 3ರಿಂದಲೇ ಈ ಅವಕಾಶ ನೀಡಲಾಗಿದೆ. ಪಣೋಲಿಬೈಲು …

Read More »

You cannot copy content of this page.