ಕರಾವಳಿ

ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು..!

ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ ಆರತಿ ಎಂದು ಗುರುತಿಸಲಾಗಿದೆ. ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ., ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ನಿನ್ನೆ ಮೃತಪಟ್ಟಿದ್ದಾರೆ. ಆರತಿಯು …

Read More »

ವಿದುಷಿ ಡಾ|| ಶೀತಲ್ ರಾವ್ ರವರಿಂದ ಏಕವ್ಯಕ್ತಿ ಭರತನಾಟ್ಯ

ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಶ್ರೀ ದೇವಳದ ವಸಂತ ಮಂಟಪದಲ್ಲಿ ನಡೆದ ಸಾಪ್ತಾಹಿಕ ನೃತ್ಯಸರಣಿ ನೃತ್ಯ ಶಂಕರದಲ್ಲಿ ವಿದುಷಿ ಡಾ|| ಶೀತಲ್ ರಾವ್ ಮನೋಜ್ಞವಾಗಿ ಅಭಿನಯಿಸಿ ಪೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದಳು. ಈಕೆ ನೃತ್ಯನಿಕೇತನ ಕೊಡವೂರು ಇದರ ಗುರುಗಳಾದ ಸುಧೀರ್ ರಾವ್ ಕೊಡವೂರ್ ಹಾಗು ಮಾನಸಿ ಸುಧೀರ್ ರವರ ಶಿಷ್ಯೆ. ಪ್ರದೀಪ್ ಚಕ್ರಪಾಣಿ ಹಾಗು ಗೀತಾಂಜಲಿ ಪ್ರದೀಪ್ ರವರ ಮುದ್ದಿನ ಕುವರಿ.

Read More »

ಪುತ್ತೂರು : ಅಪಪ್ರಚಾರಕ್ಕೆ ಮನನೊಂದು ಯುವತಿ ಆತ್ಮಹತ್ಯೆ..!!

ಪುತ್ತೂರು : ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾ ಶ್ರೀ(26) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ದಿವ್ಯಾ ಶ್ರೀ ಮೃತಪಟ್ಟರೆನ್ನಲಾಗಿದೆ. ಅಪಪ್ರಚಾರಕ್ಕೆ ಮನನೊಂದು ದಿವ್ಯಾ ಜೀವಾಂತ್ಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು …

Read More »

ಉಡುಪಿ: ನಿಂತಿದ್ದ ಬೊಲೆರೋ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ- ಯುವಕ ಮೃತ್ಯು

ಉಡುಪಿ: ಉದ್ಯಾವರದ ಹಲೀಮಾ ಸಾಬ್ಜು ಆಡಿಟೋರಿಯಂ ಎದುರು ದ್ವಿಚಕ್ರ ವಾಹನವೊಂದು ನಿಂತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡಿದ್ದಾರೆ. ಮೃತ ಯುವಕನನ್ನು ಉಚ್ಚಿಲ ಪೊಲ್ಯ ನಿವಾಸಿ ಅಝೀಜ್ ಎಂಬವರ ಪುತ್ರ ಮುಫ್ರೀನ್ (18 ) ಎಂದು ಗುರುತಿಸಲಾಗಿದ್ದು, ಆತನ ತಾಯಿ ಹಾಜಿರಾ ಭಾನು ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಮಾಡಿಯಿಂದ ಮುಫ್ರೀನ್ ತನ್ನ ತಾಯಿಯನ್ನು ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದ್ವಿಚಕ್ರ ವಾಹನವೊಂದರಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರ ಹಲೀಮಾ ಸಾಬ್ಜು …

Read More »

ಕಡಬ: ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ !

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆಯಸಿಡ್‌ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು(ಮಾ.04) ನಡೆದಿದೆ. ಘಟನೆಯಲ್ಲಿ ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆದಿದ್ದು, ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯವಾಗಿದೆ. ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ರವಾನೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯರು ಎಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಘಟನೆ ನಡೆದಿದೆ. ಇನ್ನು …

Read More »

ತುಳುನಾಡಿನ ಪುರಾಣ ಪ್ರಸಿದ್ಧ ದೈವಸ್ಥಾನದ ನಿರ್ಮಾಣ ಹಂತದ ಕಟ್ಟಡ ಧ್ವಂಸ..!

ಉಳ್ಳಾಲ: ತುಳುನಾಡಿನ ಪುರಾಣ ಪ್ರಸಿದ್ಧ ಕೋಟೆಕಾರು ಗ್ರಾಮದ ಕಾರಣೀಕ ಕೊಂಡಾಣ ಕ್ಷೇತ್ರದಲ್ಲಿ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳಿಗೆ ಕ್ಷೇತ್ರಕ್ಕೆ ತಾಗಿಕೊಂಡೇ ನೂತನ ಭಂಡಾರಮನೆ ನಿರ್ಮಾಣಗೊಳ್ಳುತ್ತಿದ್ದು, ನಿರ್ಮಾಣ ಹಂತದ ಕಟ್ಟಡವನ್ನು ಕಿಡಿಗೇಡಿಗಳು ಭಾನುವಾರ ಬೆಳಿಗ್ಗೆ ಜೆಸಿಬಿಯಲ್ಲಿ ನೆಲಸಮಗೊಳಿಸಿದ ಘಟನೆ ನಡೆದಿದೆ. ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಪುರಾಣದ ಭಂಡಾರಮನೆಯು ಖಾಸಗಿ ಗುತ್ತಿನ ಮನೆ ಒಡೆತನದಲ್ಲಿದ್ದು, ಅದರಲ್ಲಿ ಕ್ಷೇತ್ರದ ದೈವಗಳ ಹದಿನೈದು ಕೋಟಿಗೂ ಮಿಕ್ಕಿ ಬೆಲೆ ಬಾಳುವ ಒಡವೆಗಳಿದ್ದು, ಭಂಡಾರಮನೆಯನ್ನು ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ …

Read More »

ಪಣಂಬೂರು ಬೀಚ್‌ನಲ್ಲಿ ನೀರುಪಾಲಾದ ಮೂವರು ಯುವಕರು

ಮಂಗಳೂರಿನ ಹೊರವಲಯದ ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಮೃತರನ್ನು ಮಿಲನ್(20), ಲಿಖಿತ್(18), ನಾಗರಾಜ್(24) ಎಂದು ತಿಳಿದುಬಂದಿದೆ. ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ , ಲಿಖಿತ್ ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗೂ ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ ಎನ್ನಲಾಗಿದೆ. ಶೋಧ ಕಾರ್ಯ ನಡೆಯುತ್ತಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಂಗಳೂರು: ನಾಪತ್ತೆಯಾದ ಪಿಎಚ್‌ಡಿ ವಿದ್ಯಾರ್ಥಿನಿ ಕತಾರ್‌ಗೆ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನ ಮಾಡೂರಿನಲ್ಲಿರುವ ಪಿಜಿಯಿಂದ ಕೆಲದಿನಗಳ ಹಿಂದೆ ಏಕಾಏಕಿ ನಾಪತ್ತೆಯಾದ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಿಸಿಟಿಂಗ್ ವೀಸಾದಲ್ಲಿ ಕತಾರ್‌ಗೆ ತೆರಳಿದ್ದಾಗಿ ಮಾಹಿತಿ ದೊರಕಿದೆ. ದೇರಳಕಟ್ಟೆಯ ಖಾಸಗಿ ವಿಶ್ವವಿದ್ಯಾಲಯಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ಚೈತ್ರಾ ಹೆಬ್ಬಾರ್ ಫೆಬ್ರವರಿ 17ರಂದು ಚೈತ್ರಾ ಹೆಬ್ಬಾರ್ ಪಿಜಿಯಿಂದ ತನ್ನ ದ್ವಿಚಕ್ರ ವಾಹನ ಸಮೇತ ನಾಪತ್ತೆಯಾಗಿದ್ದಳು. ಈ ಬಗ್ಗೆ ನಾಪತ್ತೆ ದೂರು ದಾಖಲಾದ ಬಳಿಕ ಚೈತ್ರಾ ಹೆಬ್ಬಾರ್ ಹಾಗೂ ಪ್ರಿಯಕರ ಶಾರೂಕ್ ಹಿಂದೆ ಬಿದ್ದ ಉಳ್ಳಾಲ ಪೊಲೀಸರು, ಹಿಮಾಚಲ ಪ್ರದೇಶದಲ್ಲಿ ಆಕೆಯ ಪ್ರಿಯಕರನನ್ನು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. …

Read More »

ಉಡುಪಿ: ಗುಂಡಿಕ್ಕಿ ಯುವಕನ ಕೊಲೆ..!

ಉಡುಪಿ: ಬ್ರಹ್ಮಾವರ ತಾ| ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ ಮಾಡಲಾಗಿದೆ. ಕೃಷ್ಣ (36) ಮೃತ ಯುವಕ. ಶನಿವಾರ (ಮಾ.02) ರ ರಾತ್ರಿ ಘಟನೆ ನಡೆದಿದೆ. ಶನಿವಾರ ರಾತ್ರಿ 9:30 ಸುಮಾರಿಗೆ ಫೈರಿಂಗ್ ಶಬ್ದ ಕೇಳಿ ಬಂದಿತ್ತು. ಪಟಾಕಿಯ ಶಬ್ದವೆಂದು ಸುಮ್ಮನಾದೆವು. ಕೃಷ್ಣ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದನು ಎಂದು ನೆರೆಹೊರೆಯವರು ಮಾಹಿತಿ ನೀಡಿದ್ದಾರೆ. ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಶನಿವಾರ ರಾತ್ರಿ ಊಟ ಮಾಡುತ್ತಿರುವ ವೇಳೆ ಶೂಟೌಟ್ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ …

Read More »

ಬಂಟ್ವಾಳ: ಸ್ಕೂಟರ್‌- ಕಾರು ಡಿಕ್ಕಿ- ಸವಾರನಿಗೆ ಗಾಯ

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಸವಾರ ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ನಲ್ಕೆಮಾರ್ ಎಂಬಲ್ಲಿ ನಡೆದಿದೆ.ಬೆಂಜನಪದವು ನಿವಾಸಿ ಪುರುಷೋತ್ತಮ ಆಚಾರ್ಯ ಎಂಬವರಿಗೆ ಕಾರು ಅಪಘಾತ ವಾಗಿ ಗಾಯವಾಗಿದ್ದು, ಅಮ್ಟಾಡಿ ಗ್ರಾಮದ ನಲ್ಕೆಮಾರ್ ದ್ವಾರದ ಬಳಿ ಅಪಘಾತ ಸಂಭವಿಸಿದೆ. ಪುರುಷೋತ್ತಮ ಅವರು ತಮ್ಮ ದ್ವಿಚಕ್ರವಾಹನದಲ್ಲಿ ಬೆಂಜನಪದವುವಿನಿಂದ ಬಿಸಿರೋಡು ಕಡೆಗೆ ಬರುತ್ತಿರುವ ವೇಳೆ ಕೈಕಂಬ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗಾಯಗೊಂಡ ಪುರುಷೋತ್ತಮ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ‌ಬೇಟಿ …

Read More »

You cannot copy content of this page.