ತಾಜಾ ಸುದ್ದಿ

ಸುಳ್ಯ: ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಢಿಕ್ಕಿ- ಕಾರು ಜಖಂ

ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಡಿರುವ ಘಟನೆ ಸುಳ್ಯ ಗಾಂಧಿನಗರ ಮಸೀದಿಯ ಮುಂಭಾಗದಲ್ಲಿ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು. ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಹಿಂಬದಿಗೆ ಢಿಕ್ಕಿ ಹೊಡೆಯಿತು. ಢಿಕ್ಕಿಯಾದ ರಭಸಕ್ಕೆ ಕಾರು …

Read More »

ಮಂಗಳೂರು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ – ಪೋಕ್ಸೋ ಕೇಸ್ ದಾಖಲು, ಆರೋಪಿ ವಶಕ್ಕೆ

ಮಂಗಳೂರು : 6ನೇ ತರಗತಿ ವಿದ್ಯಾರ್ಥಿ ನಿಗೆ ಶಿಕ್ಷಕನೊಬ್ಬ ಕಳೆದ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡುತ್ತಿರುವ ಹಿನೆಲೆಯಲ್ಲಿ ಇದೀಗ ಬೆಳ್ತಂಗಡಿ ತಾಲೂಕಿನ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಶಿಕ್ಷಕ ವಿರಾಜ್​ ಜೈನ್​ ಕಳೆದ ಜೂನ್ ನಿಂದ ದೂರು ನೀಡುವ ದಿನದವರೆಗೂ ಕೂಡ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಮಾರ್ಚ್​ 10 ರಂದು ವಿದ್ಯಾರ್ಥಿನಿ …

Read More »

BREAKING : ಸ್ಯಾಂಡಲ್‌ವುಡ್‌ ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

ಬೆಂಗಳೂರು: ಹಿರಿಯ ನಟ ದ್ವಾರಕೀಶ್‌ (81) ವಿಧೀವಶರಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ದ್ವಾರಕೀಶ್ 1942ರ ಆಗಸ್ಟ್ 19ರಂದು ಜನಿಸಿದರು. ಅವರು ಮೈಸೂರಿನ ಇಟ್ಟಿಗೆಗೂಡಿನಲ್ಲಿ ಬೆಳೆದರು. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಶಾರದಾ ವಿಲಾಸ್ ಮತ್ತು ಬನುಮಯ್ಯ ಅವರ ಶಾಲೆಯಲ್ಲಿ ಪಡೆದರು ಮತ್ತು ಅವರು ಸಿಪಿಸಿ ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪಡೆದರುಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ದ್ವಾರಕೀಶ್ ಮತ್ತು ಅವರ ಸಹೋದರ ಮೈಸೂರಿನ ಗಾಂಧಿ ಚೌಕದಲ್ಲಿ “ಭಾರತ್ ಆಟೋ ಸ್ಪೇರ್ಸ್” ಎಂಬ ಆಟೋಮೋಟಿವ್ ಬಿಡಿಭಾಗಗಳ ವ್ಯವಹಾರವನ್ನು ಪ್ರಾರಂಭಿಸಿದರು. ಅವರು ನಟನೆಯತ್ತ ಬಲವಾಗಿ ಆಕರ್ಷಿತರಾದರು ಮತ್ತು …

Read More »

ಮತದಾನದ ದಿನ ರಜೆ ನೀಡದೆ ಇದ್ದರೆ ಕ್ರಮ: ಮುಖ್ಯ ಚುನಾವಣಾಧಿಕಾರಿ

ಕರ್ನಾಟಕದಲ್ಲಿ ಏ.268 & ಮೇ 7ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ 2ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿ ನಾವು IT ವಲಯ ಸೇರಿ ಖಾಸಗಿ ಕಂಪನಿಗಳನ್ನು ಸಂಪರ್ಕ ಮಾಡಿದ್ದು ಅಲ್ಲಿನ CEO ಮತ್ತು ಮ್ಯಾನೇಜ್‌ಮೆಂಟ್‌ಗಳನ್ನು ಭೇಟಿಯಾಗಿ ಮತ ಚಲಾಯಿಸಲು ಸಿಬ್ಬಂದಿಗೆ ಉತ್ತೇಜಿಸುವಂತೆ ಹೇಳಿದ್ದೇವೆ ಎಂದು ತಿಳಿಸಿದರು

Read More »

ಮಂಗಳೂರು : ನಿರ್ಮಲಾ ಟ್ರಾವೆಲ್ಸ್ ಸಂಸ್ಥಾಪಕಿ ನಿಧನ

ಮಂಗಳೂರು: ಮಂಗಳೂರಿನ ಪ್ರವಾಸೋಧ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನರಾಗಿದ್ದಾರೆ. ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದ್ದಾರೆ. ನಿರ್ಮಲಾ ಅವರು ಪತಿ ಸಿ. ಉಪೇಂದ್ರ ಕಾಮತ್ ಹಾಗೂ ಪುತ್ರಿ ವತಿಕಾ ಇಂಟರ್‌ನ್ಯಾಷನಲ್ ಟ್ರಾವೆಲ್ಸ್ ನ ಮಾಲಕರಾದ ವತಿಕಾ ಪೈ ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.

Read More »

ಉಜಿರೆ: ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ, ದೂರು- ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಉಜಿರೆಯ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿಗೆ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ. ಆರೋಪಿಯನ್ನು ಶಿಕ್ಷಕ ವಿರಾಜ್ ಜೈನ್ ಎಂದು ಗುರುತಿಸಲಾಗಿದೆ. ಬಾಲಕಿ ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಮನೆಯವರು ವಿಚಾರಿಸಿದಾಗ ಶಿಕ್ಷಕ ವಿರಾಜ್ ಜೈನ್ ಕೆಲವು ತಿಂಗಳಿನಿಂದ ಅಶ್ಲೀಲವಾಗಿ ವರ್ತಿಸುತ್ತಾ ಅಶ್ಲೀಲ ವೀಡಿಯೊಗಳನ್ನು ತೋರಿಸಿತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಇದರಿಂದಾಗಿ ತಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾಳೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನೆಯವರು ಬಾಲಕಿಯನ್ನು ಪೊಲೀಸ್ ಠಾಣೆಗೆ …

Read More »

ವಿಟ್ಲ : ನಿರ್ಮಾಣ ಹಂತದ ಸೇತುವೆ ಕುಸಿದು 7ಮಂದಿಗೆ ಗಾಯ

ವಿಟ್ಲ: ಪುಣಚ ಗ್ರಾಮದ ಬರೆಂಜ – ಕುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7ಮಂದಿಗೆ ಗಾಯವಾಗಿದೆ. ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಕುಸಿದು ಬಿದ್ದಿದೆ. ಸೇತುವೆ ಸಾಮಾಗ್ರಿಯ ನಡುವಿನಲ್ಲಿ ಓರ್ವ ವ್ಯಕ್ತಿ ಸಿಕ್ಕಿ ಹಾಕಿಕೊಂಡಿದ್ದು, ಆರು ಮಂದಿಯನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. . ಸ್ಥಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ.

Read More »

ಮೋದಿ ಇರುವವರೆಗೂ ಸನಾತನ ಧರ್ಮದ ನಾಶ ಅಸಾಧ್ಯ-ನರೇಂದ್ರ ಮೋದಿ

ಮೈಸೂರು: ಎಲ್ಲಿಯವರೆಗೆ ಮೋದಿ ಇರುತ್ತಾರೋ ಅಲ್ಲಿಯವರೆಗೆ ಹಿಂದೂ ಧರ್ಮ ಹಾಗೂ ಸನಾತನ ಧರ್ಮದ ನಾಶ ಅಸಾಧ್ಯ. ಇದು ಕೂಡ ಮೋದಿ ಗ್ಯಾರಂಟಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮೈಸೂರು ನಗರದಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆಲ್ಲಾ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಹೇಳಿದರು. ಮೈಸೂರು ಸಾಂಸ್ಕೃತಿಕ ರಾಜಧಾನಿ. ಇಲ್ಲಿನ ದಸರಾ ಇಡೀ ದೇಶಕ್ಕೆ ಪ್ರಖ್ಯಾತಿ. ತಾಯಿ ಚಾಮುಂಡಿ, ತಾಯಿ ಭುವನೇಶ್ವರಿ, ತಾಯಿ ಕಾವೇರಿ ಪಾದಕ್ಕೆ ನನ್ನ ಪ್ರಣಾಮಗಳು. ಸಂಸದೀಯ ಕ್ಷೇತ್ರದಲ್ಲಿ ದೇವೇಗೌಡರದ್ದು ಬಹಳ ದೊಡ್ಡ ಹೆಸರು. ಅವರಿಗೆ ನನ್ನ …

Read More »

ಮಂಗಳೂರು: ಮೋದಿ ರೋಡ್ ಶೋ ಬಳಿಕ ಯುವಕನೋರ್ವನಿಗೆ ಬಿತ್ತು ಏಟು!

ಮಂಗಳೂರು: ನಗರದಲ್ಲಿ ರವಿವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಏಟು ಬಿದ್ದ ಘಟನೆ ವರದಿಯಾಗಿದೆ. ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್ ನಂಬರ್ ನೀಡಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಮಹಿಳೆಗೆ ಯುವಕನೋರ್ವ ಚೀಟಿಯಲ್ಲಿ ತನ್ನ ಮೊಬೈಲ್ ನಂಬರ್ ಬರೆದು ನೀಡಿದ್ದ. ಈ ವಿಷಯ ಗೊತ್ತಾಗಿ ಆರೋಪಿ ಯುವಕನನ್ನು ಹಿಡಿದ ಮಹಿಳೆಯ ಪತಿ ಆತನ ಮೊಬೈಲ್ ಕಿತ್ತುಕೊಂಡು ಎರಡೇಟು ಬಿಗಿದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಯುವಕರ ತಂಡವೂ ಆರೋಪಿ …

Read More »

ಬಂಟ್ವಾಳ; ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ ರಾತ್ರಿ ನಡೆದಿದೆ.ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿ ರವಿ ಚೂರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು …

Read More »

You cannot copy content of this page.