ತಾಜಾ ಸುದ್ದಿ

ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ : ಸಂಘಟನೆಗಳಿಂದ ಉಪನ್ಯಾಸಕಿ ವಿರುದ್ಧ ಆಕ್ರೋಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿಯೋರ್ವ ಬ್ಲೇಡ್‌ನಿಂದ ಗೀರಿರುವ  ಆರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಇಬ್ಬರೂ ಭಿನ್ನ ಸಮುದಾಯಕ್ಕೆ ಸೇರಿದವರಾದ ಹಿನ್ನೆಲೆಯಲ್ಲಿ ಎರಡೂ ಕಡೆಯ ಮುಖಂಡರು ಆಸ್ಪತ್ರೆ ಮುಂಭಾಗ ಜಮಾಯಿಸಿದ ಪರಿಣಾಮ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದೆ. ಇವರಿಬ್ಬರು ಕೊಂಬೆಟ್ಟು ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳು. ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳಾಗಿದ್ದು ಇತಿಹಾಸ ವಿಷಯ ದಲ್ಲಿ ಒಂದೇ ತರಗತಿಯ ಸಹಪಾಠಿ ಗಳಾಗಿದ್ದರು. ವಿದ್ಯಾರ್ಥಿನಿ …

Read More »

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ..!

ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಿಡಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿ ನಿವಾಸಿ ಪ್ರಥಮೇಶ್ (16) ಎಂದು ಗುರುತಿಸಲಾಗಿದೆ. ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ …

Read More »

ಮುರಳೀಧರ್ ಭಟ್ ರವರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ      

ಛಾಯಾಚಿತ್ರ ಕಲಾವಿದ ಮುರಳೀಧರ್ ಭಟ್ ಕೊಡವೂರು ಇವರಿಗೆ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ “ವಿಪ್ರ ಛಾಯಾ ಸಾಧಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.  ಕಳೆದ ಹಲವಾರು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ವಲಯ ಬ್ರಾಹ್ಮಣ ಮಹಾಸಭಾದ ಎಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಛಾಯಾಗ್ರಹಣ ಮಾಡಿತ್ತಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಶ್ರೀನಿವಾಸ ತೋಡತ್ತಿಲ್ಲಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ವಿಪ್ರ ಸೇನಾನಿ ಶ್ರೀ ಗಣೇಶ್ ಅಡಿಗ, ದಿನಕರ ರಾವ್  ಸಂಘದ ಅಧ್ಯಕ್ಷ ಸುರೇಂದ್ರ ಉಪಾಧ್ಯಾಯ, ಗೌರವಾಧ್ಯಕ್ಷರುಗಳಾದ ಗೋವಿಂದ ಐತಾಳ್, ಗುರುರಾಜ್ ರಾವ್, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್ , …

Read More »

ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ

ಮಂಗಳೂರು: ”ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರೋಳಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ”ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ …

Read More »

ಮಂಗಳೂರಿನಲ್ಲಿ 500ರ ಖೋಟಾ ನೋಟು ಚಲಾವಣೆ- 4 ಮಂದಿಯ ಬಂಧನ

ಮಂಗಳೂರು :ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟು …

Read More »

ಉಡುಪಿ: ಮೆಹೆಂದಿ ದಿನ ವರ ನಾಪತ್ತೆ..! ಮದುವೆ ರದ್ದು|

ಉಡುಪಿ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು …

Read More »

ಮಂಗಳೂರು: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದೆಂದ ಐವನ್ ಡಿಸೋಜಾ ಹೇಳಿಕೆಗೆ ಶರಣ್ ಪಂಪ್‌ವೆಲ್ ತೀವ್ರ ಖಂಡನೆ..!

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ವಿಹೆಚ್‌ಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಐವನ್ ಡಿಸೋಜಾ ಹೇಳಿಕೆ ಖಂಡನೀಯ, ಇದು ದೇಶದ್ರೋಹದ ಹೇಳಿಕೆಯಾಗಿದೆ. ಇದು ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನವಾಗಿದ್ದು ಪೊಲೀಸ್ ಇಲಾಖೆ …

Read More »

ಮಂಗಳೂರಿನಲ್ಲಿ ಹಿಂಸಾರೂಪ ಕಾಂಗ್ರೆಸ್ ಪ್ರತಿಭಟನೆ-ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಶಾಹುಲ್ ಹಮೀದ್, ಅನ್ವರ್, ಕಿಶೋರ್ ಶೆಟ್ಟಿ ಬಂಧಿತರು. ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.19 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ನಗರ ಪಾಲಿಕೆಯ ಮುಂಭಾಗ ಪ್ರತಿಭಟನೆ ಮಾಡುತಿದ್ದ ಸಂದರ್ಭದಲ್ಲಿ ಮಂಗಳೂರು …

Read More »

ಉಡುಪಿ : ತಂಡದಿಂದ ತಲವಾರು ದಾಳಿ: ಇಬ್ಬರು ಗಂಭೀರ..!

ಉಡುಪಿ :  ತಂಡವೊಂದು  ತಲವಾರು ಬೀಸಿ, ಬಿಯರ್ ಬಾಟಲಿ ಹಾಗೂ ಬ್ಯಾಟ್‌, ವಿಕೆಟ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ‌ ವಕ್ವಾಡಿಯಲ್ಲಿ ನಡೆದಿದೆ.   ವಕ್ವಾಡಿಯ ಚಂದ್ರಶೇಖರ್(27) ಹಾಗೂ ಅಶೋಕ್ (45) ಗಂಭೀರ ಗಾಯಗೊಂಡು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್, ಶಶಿಕಾಂತ, ಇಲಿಯಾಸ್‌, ಪುನೀತ್, ತರುಣ್, ಸುಶಾಂತ್, ಹರ್ಷ, ವಿಘ್ನೇಶ್ ಆರೋಪಿಗಳು. ಈ ಪೈಕಿ ಆದರ್ಶ ಸಹಿತ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದು ಪರಾರಿಯಾದವರ ಪತ್ತೆಗೆ …

Read More »

ಹಿಂಸಾರೂಪ ಪಡೆದ ಕೈ ಕಾರ್ಯಕರ್ತರ ಪ್ರತಿಭಟನೆ- ಮಂಗಳೂರಿನಲ್ಲಿ ಕಲ್ಲು ತೂರಾಟ

ಮಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆಗೆ ಕರೆ ಕೊಟ್ಟಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿದ್ದು, ಮಂಗಳೂರಿನಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.   ಮಂಗಳೂರಿನ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೆಲವರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಬಸ್ ಗಾಜುಗಳು ಸಂಪೂರ್ಣ ಪುಡಿ ಪುಡಿಯಾಗಿದೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ …

Read More »

You cannot copy content of this page.