ತಾಜಾ ಸುದ್ದಿ

ಮಂಗಳೂರು: ನಾಪತ್ತೆಯಾದ ಪಿಎಚ್‌ಡಿ ವಿದ್ಯಾರ್ಥಿನಿ ಕತಾರ್‌ಗೆ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನ ಮಾಡೂರಿನಲ್ಲಿರುವ ಪಿಜಿಯಿಂದ ಕೆಲದಿನಗಳ ಹಿಂದೆ ಏಕಾಏಕಿ ನಾಪತ್ತೆಯಾದ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಿಸಿಟಿಂಗ್ ವೀಸಾದಲ್ಲಿ ಕತಾರ್‌ಗೆ ತೆರಳಿದ್ದಾಗಿ ಮಾಹಿತಿ ದೊರಕಿದೆ. ದೇರಳಕಟ್ಟೆಯ ಖಾಸಗಿ ವಿಶ್ವವಿದ್ಯಾಲಯಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ಚೈತ್ರಾ ಹೆಬ್ಬಾರ್ ಫೆಬ್ರವರಿ 17ರಂದು ಚೈತ್ರಾ ಹೆಬ್ಬಾರ್ ಪಿಜಿಯಿಂದ ತನ್ನ ದ್ವಿಚಕ್ರ ವಾಹನ ಸಮೇತ ನಾಪತ್ತೆಯಾಗಿದ್ದಳು. ಈ ಬಗ್ಗೆ ನಾಪತ್ತೆ ದೂರು ದಾಖಲಾದ ಬಳಿಕ ಚೈತ್ರಾ ಹೆಬ್ಬಾರ್ ಹಾಗೂ ಪ್ರಿಯಕರ ಶಾರೂಕ್ ಹಿಂದೆ ಬಿದ್ದ ಉಳ್ಳಾಲ ಪೊಲೀಸರು, ಹಿಮಾಚಲ ಪ್ರದೇಶದಲ್ಲಿ ಆಕೆಯ ಪ್ರಿಯಕರನನ್ನು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. …

Read More »

ಉಡುಪಿ: ಗುಂಡಿಕ್ಕಿ ಯುವಕನ ಕೊಲೆ..!

ಉಡುಪಿ: ಬ್ರಹ್ಮಾವರ ತಾ| ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ ಮಾಡಲಾಗಿದೆ. ಕೃಷ್ಣ (36) ಮೃತ ಯುವಕ. ಶನಿವಾರ (ಮಾ.02) ರ ರಾತ್ರಿ ಘಟನೆ ನಡೆದಿದೆ. ಶನಿವಾರ ರಾತ್ರಿ 9:30 ಸುಮಾರಿಗೆ ಫೈರಿಂಗ್ ಶಬ್ದ ಕೇಳಿ ಬಂದಿತ್ತು. ಪಟಾಕಿಯ ಶಬ್ದವೆಂದು ಸುಮ್ಮನಾದೆವು. ಕೃಷ್ಣ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದನು ಎಂದು ನೆರೆಹೊರೆಯವರು ಮಾಹಿತಿ ನೀಡಿದ್ದಾರೆ. ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಶನಿವಾರ ರಾತ್ರಿ ಊಟ ಮಾಡುತ್ತಿರುವ ವೇಳೆ ಶೂಟೌಟ್ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ …

Read More »

5 ವರ್ಷ ದೊಳಗಿನ ಮಕ್ಕಳಿಗೆ ಇಂದು ಪಲ್ಸ್‌ ಪೋಲಿಯೋ ಲಸಿಕೆ

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದಾದ್ಯಂ ತ ಭಾನುವಾರ (ಮಾ.3) ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯು ಹಮ್ಮಿಕೊಂಡಿದೆ. 5 ವರ್ಷ ದೊಳಗಿನ 62.85 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ದೇಶವು ಪೋಲಿಯೊಮುಕ್ತ ರಾಷ್ಟ್ರವಾಗಿದೆ. ಇದು ಮಹತ್ತರವಾದ ಸಾಧನೆಯಾದರೂ ಈ ಸಮಸ್ಯೆ ಜಗತ್ತಿನ ವಿವಿಧೆಡೆ ಮಕ್ಕಳನ್ನು ಬಾಧಿಸುತ್ತಿದೆ. ಇದು ಭಾರತದ ಆತಂಕಕ್ಕೆ ಕಾರಣವಾಗಿದೆ. ವೈದ್ಯಕೀಯ ತಜ್ಞರ ಶಿಫಾರಸಿನ ಅನ್ವಯ ದೇಶದಲ್ಲಿ ಐದು ವರ್ಷ ದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋ ಲಿಯೊ ಹನಿ ಹಾಕಲಾಗುತ್ತಿದೆ.ರಾಜ್ಯದಲ್ಲಿ ಪೋಲಿಯೊ ಹನಿ ವಿತರಣೆಗೆ 33,712 ಬೂತ್‌ಗಳನ್ನು ಗುರುತಿಸಲಾಗಿದೆ. 963 ಸಂಚಾರಿ …

Read More »

ಬಂಟ್ವಾಳ: ಸ್ಕೂಟರ್‌- ಕಾರು ಡಿಕ್ಕಿ- ಸವಾರನಿಗೆ ಗಾಯ

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಸವಾರ ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ನಲ್ಕೆಮಾರ್ ಎಂಬಲ್ಲಿ ನಡೆದಿದೆ.ಬೆಂಜನಪದವು ನಿವಾಸಿ ಪುರುಷೋತ್ತಮ ಆಚಾರ್ಯ ಎಂಬವರಿಗೆ ಕಾರು ಅಪಘಾತ ವಾಗಿ ಗಾಯವಾಗಿದ್ದು, ಅಮ್ಟಾಡಿ ಗ್ರಾಮದ ನಲ್ಕೆಮಾರ್ ದ್ವಾರದ ಬಳಿ ಅಪಘಾತ ಸಂಭವಿಸಿದೆ. ಪುರುಷೋತ್ತಮ ಅವರು ತಮ್ಮ ದ್ವಿಚಕ್ರವಾಹನದಲ್ಲಿ ಬೆಂಜನಪದವುವಿನಿಂದ ಬಿಸಿರೋಡು ಕಡೆಗೆ ಬರುತ್ತಿರುವ ವೇಳೆ ಕೈಕಂಬ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗಾಯಗೊಂಡ ಪುರುಷೋತ್ತಮ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ‌ಬೇಟಿ …

Read More »

ಪಾಕ್​ ಪರ ಘೋಷಣೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; FSL ವರದಿಯಲ್ಲಿ ಸತ್ಯ ಬಹಿರಂಗ

ಬೆಂಗಳೂರು: ರಾಜ್ಯಸಭೆ ಚುನಾವಣೆ ಸಮಯದಲ್ಲಿ ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು FSL ವರದಿಯಲ್ಲಿ ದೃಢಪಟ್ಟಿದೆ. ದುಷ್ಕರ್ಮಿಗಳು ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪೊಲೀಸರು ಕೆಲ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಶಂಕಿತ ವ್ಯಕ್ತಿಗಳ ಧ್ವನಿಯನ್ನು ಪೊಲೀಸರು FSLಗೆ ರವಾನೆ …

Read More »

ಶೋಭಾ ಕರಂದ್ಲಾಜೆ ವಿರುದ್ದ ಒಂದು ಲಕ್ಷ ನೋಟಾ ಎಚ್ಚರಿಕೆ- ಮುಂದುವರಿದ ಗೋ ಬ್ಯಾಕ್ ಶೋಭಕ್ಕ ಅಭಿಯಾನ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ನಡೆಯುತ್ತಿರುವ ಗೋಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೋಭಕರಂದ್ಲಾಜೆ ವಿರುದ್ದ ಆಕ್ರೋಶ ಕೇಳಿ ಬರುತ್ತಿದೆ. ಇತ್ತೀಚೆಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿರುವ ಶೋಭಾಕರಂದ್ಲಾಜೆ ಗೆ ಸ್ವತಃ ಬಿಎಸ್ ವೈ ಯಡಿಯೂರಪ್ಪ ಅವರು ಸಪೋರ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರೆದಿದ್ದು, ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿದರೆ ಒಂದು ಲಕ್ಷ ನೋಟಾ ವೋಟ್ ಹಾಕಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಸಲಾಗಿದೆ. …

Read More »

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿ ಸಾವು

ಕಾಪು: ಕಾಪುವಿನ ಪೊಲಿಪು ಕಡಲಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಬಲೆಗೆ ಸಿಲುಕಿಕೊಂಡು ಸಾವನ್ನಪಿದ ಘಟನೆ ಮಾ.01ರ ಇಂದು ಮುಂಜಾನೆ ನಡೆದಿದೆ. ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಇವರು ದಿನನಿತ್ಯ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆ ಮಾಡುತ್ತಿದ್ದರು. ಇಂದು ಮುಂಜಾನೆಯೂ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕಾ ಬಲೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಬೇರೆ ಮೀನುಗಾರಿಕಾ ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಕಯಾಕ್ ಹಾಗು ಮೃತದೇಹವನ್ನು ತಂದಿದ್ದಾರೆ. ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯ …

Read More »

ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಶಾಕ್; ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಮತ್ತೆ ದುಬಾರಿ

ಬೆಂಗಳೂರು : ಹೊಸ ವರ್ಷದ 3ನೇ ತಿಂಗಳು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಹೌದು, ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಸಿಲಿಂಡರ್ ದರದ ಬೆಲೆ ಏರಿಕೆಯಾಗಿದೆ. ಮಾರ್ಚ್ 1 ರ ಶುಕ್ರವಾರದಿಂದಲೇ ಜಾರಿಗೆ ಬರುವಂತೆ 19 ಕೆ.ಜಿ,ಯ ವಾಣಿಜ್ಯ ಸಿಲಿಂಡರ್ ಗಳ ಬೆಲೆ 25 ರೂ. ಏರಿಕೆ ಮಾಡಲಾಗಿದೆ. ಆದರೆ, ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಪ್ರತಿ ತಿಂಗಳ ಮೊದಲ ದಿನವೇ ಸಿಲಿಂಡರ್ ಬೆಲೆಯಲ್ಲಿ ಏರಿಳಿತ ಆಗುತ್ತದೆ. ಈ ಬಾರಿ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ ಏರಿಕೆಯಾಗಿದೆ. ಅಲ್ಲದೇ,ಈ ಆದೇಶ …

Read More »

ಉಡುಪಿ: ಹಿರಿಯ ಪತ್ರಕರ್ತ‌ ಮನೋಹರ ಪ್ರಸಾದ್ ಇನ್ನಿಲ್ಲ

ಉಡುಪಿ :  ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಮುಗಿಸಿ “ನವ ಭಾರತ’ ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಸೇರ್ಪಡೆಗೊಂಡ ಅವರು ಸುದೀರ್ಘ ಕಾಲ ಮುಖ್ಯ ವರದಿಗಾರರಾಗಿ, ಸಹಾಯಕ ಸಂಪಾದಕರಾಗಿ, ಮಂಗಳೂರು ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಓರ್ವ ಸಾಹಿತಿಯೂ ಆಗಿದ್ದ ಮನೋಹರ ಪ್ರಸಾದ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಅನೇಕ ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿ …

Read More »

ಉಳ್ಳಾಲ : ಹೃದಯಾಘಾತದಿಂದ ಪತ್ನಿ ನಿಧನ: ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಆತ್ಮಹತ್ಯೆ

ಉಳ್ಳಾಲ : ಹೃದಯಾಘಾತದಿಂದ ಪತ್ನಿ ನಿಧನರಾದ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ. ಮೃತರನ್ನು ಗ್ರಾಮ ಚಾವಡಿ ನಿವಾಸಿ ಮೀನಾಕ್ಷಿ ಪೂಜಾರಿ(59) ಮತ್ತು ಅವರ ಪತಿ ಶೇಷಪ್ಪ ಪೂಜಾರಿ(63) ಎಂದು ಗುರುತಿಸಲಾಗಿದೆ. ಮೀನಾಕ್ಷಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಮೀನಾಕ್ಷಿ ಆವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮೀನಾಕ್ಷಿ ಅವರ ಸ್ಥಿತಿ ಗಂಭಿರವಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. …

Read More »

You cannot copy content of this page.