ತಾಜಾ ಸುದ್ದಿ

ಮಂಗಳೂರು: ಪುತ್ತಿಲ ಅವರನ್ನು ಮತ್ತೆ ಬಿಜೆಪಿಗೆ ಕರೆಸಿಕೊಳ್ಳಲು ಪಕ್ಷ ಎಲ್ಲಾ ರೀತಿ ಪ್ರಯತ್ನಪಟ್ಟಿದೆ – ನಳಿನ್ ಪ್ರತಿಕ್ರಿಯೆ

ಮಂಗಳೂರು: ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರು ಬಂಡಾಯ ಅಭ್ಯರ್ಥಿಯಾಗಿ ದ.ಕ.ಜಿಲ್ಲೆಯಿಂದ ಕಣಕ್ಕಿಳಿಯಲಿದ್ದಾರೆ ಎಂಬ ನಿರ್ಧಾರ ಪ್ರಕಟವಾಗಿದೆ. ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಪ್ರತಿಕ್ರಿಯಿಸಿ, ಪುತ್ತಿಲ ಪರಿವಾರ ಸ್ವತಂತ್ರ ಸಂಘಟನೆ. ತಮ್ಮ ಅಭಿಪ್ರಾಯ, ತೀರ್ಮಾನ ಕೈಗೊಳ್ಳಲು ಸ್ವತಂತ್ರರಿದ್ದಾರೆ. ಅವರನ್ನು ಮತ್ತೆ ಬಿಜೆಪಿಗೆ ಕರೆಸಿಕೊಳ್ಳಲು ಪಕ್ಷ ಎಕ್ಲಾ ರೀತಿಯ ಪ್ರಯತ್ನಪಟ್ಟಿದೆ. ಬಿಜೆಪಿ ದೇಶದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಅನ್ನು ಎದುರಿಸಿ ಬಿಜೆಪಿ ಅತೀ ಹೆಚ್ಚು ಶಾಸಕರು, ಸಂಸದರನ್ನು, ತಾಲೂಕು ಪಂಚಾಯತ್ ಸದಸ್ಯರನ್ನು ಪಡೆದಿದೆ. …

Read More »

ಕಾಪು : ನಿಂತಿದ್ದ ಲಾರಿಗೆ ಕಾರು ಡಿಕ್ಕಿ -ಚಾಲಕ ಸಾವು

ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂ ಕಚೇರಿಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ..!- ಪತ್ರಿಕಾಗೋಷ್ಠಿಯಲ್ಲಿ ಪುತ್ತಿಲ ಪತಿವಾರ ಸ್ಪಷ್ಟನೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲ ಸ್ಪರ್ಧಿಸಲಿದ್ದಾರೆಂದು ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ ಘೋಷಿಸಿದ್ದಾರೆ.ಪುತ್ತೂರಿನ‌ ಪುತ್ತಿಲ ಪರಿವಾರದ ಕಛೇರಿಯಲ್ಲಿ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಮುಂದುವರಿದು ಅವರು ಸಂಘಟನೆಯನ್ನು ಜಿಲ್ಲೆಯಾದ್ಯಂತ ವಿಸ್ತರಿಸುವ ಕಾರ್ಯ ನಡೆಯಲಿದೆ. ಜಿಲ್ಲೆಯಲ್ಲಿ ನಡೆಯಲಿರುವಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದರು. ಸೇವಾಕಾರ್ಯದ ಜತೆಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಕಾರ್ಯವನ್ನು ಪುತ್ತಿಲ ಪರಿವಾರ ಮಾಡುವ ಮೂಲಕ ಕಾರ್ಯಕರ್ತರ ಹಾಗೂ ಮತದಾರರ ಕೈ ಬಲಪಡಿಸುವ ಕಾರ್ಯ ಮಾಡಲಿದೆ ಎಂದರು ಮಾರ್ಚ್ 3ರಂದು ಪುತ್ತಿಲ ಪರಿವಾರದದಿಮದ ಅಂಬ್ಯುಲೆನ್ಸ್ ಲೋಕಾರ್ಪಣೆಯಾಗಲಿದೆ ಎಂದು …

Read More »

ಕಾರ್ಕಳ : ಯುವತಿ ಪ್ರಮೀಳಾ ನಾಪತ್ತೆ..!

ಉಡುಪಿ : ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08258-231083, ಮೊ.ನಂ: …

Read More »

ಮಂಗಳೂರು: ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ

ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು …

Read More »

ಪುತ್ತೂರು : ಮಾದಕ ದ್ರವ್ಯ ಸೇವನೆ – ನಾಲ್ವರು ವಶಕ್ಕೆ

ಉಪ್ಪಿನಂಗಡಿ: ಮಾದಕ ದ್ರವ್ಯ ಸೇವನೆಯ ಎರಡು ಪ್ರತ್ಯೇಕ – ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಫೆ.26ರಂದು ಬೆಳಗ್ಗೆ 34 ನೆಕ್ಕಿಲಾಡಿ ಜಂಕ್ಷನ್ ಬಳಿ ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಸವಣೂರು ಗ್ರಾಮದ ಪಿ. ಹನೀಫ್ (45) ಹಾಗೂ ಮುಹಮ್ಮದ್ ಶಾಫಿ (27) ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಇವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವೆನೆ ಮಾಡಿರುವುದು ದೃಢಪಟ್ಟಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ …

Read More »

ಮಲ್ಪೆ: 25 ಮಂದಿಯ ತಂಡದಿಂದ ಬೋಟ್ ಅಪಹರಣ : ಲಕ್ಷಾಂತರ ರೂ. ಮೌಲ್ಯದ ಮೀನುಗಳ ದರೋಡೆ

ಮಲ್ಪೆ: ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆಯ ಬೋಟ್ ಒಂದನ್ನು 25 ಮಂದಿಯ ತಂಡವೊಂದು ಅಪಹರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳನ್ನು ದೋಚಿದ ಘಟನೆ ನಡೆದಿದೆ. ಬೋಟ್ ನ 7 ಮಂದಿ ಮೀನುಗಾರರನ್ನು ಒತ್ತೆಯಾಳಾಗಿ ಇರಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವಿವರ: ಮಲ್ಪೆ:ಪಿರ್ಯಾದಿ ಚೇತನ್‌ ಸಾಲಿಯಾನ್‌ (42) ಕೊಡವೂರು ಗ್ರಾಮ ಮಲ್ಪೆ ಉಡುಪಿ ಇವರು IND KA 02 MM 5572 ನಂಬ್ರ ಕೃಷ್ಣನಂದನ ಎಂಬ ಲೈಲಾನ್‌ …

Read More »

ಉಡುಪಿ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ಉಡುಪಿ:  ನಗರದ ಹಿರಣ್ಯ ಫೈನಾನ್ಸ್ ಹಿಂಭಾಗದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಶಂಕಿಸಲಾಗಿದೆ. ಮರಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿದ್ದು ಎಸ್ಐ ಪುನೀತ್ ಕುಮಾರ್, ತನಿಖಾ ಸಹಾಯಕಿ ನೇತ್ರಾವತಿ, ಹೆಡ್ ಕಾನ್ಸ್ಟೇಬಲ್ ಆಶಾಲತಾ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ನೆರವಾದರು.

Read More »

ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು

ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾ‌ರ್ ಕುಂದಾಪುರ ಹಾಗೂ ಉಡುಪಿ ಶಾಸಕ ಯಶ್ವಾಲ್ ಸುವರ್ಣರವರ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯತ್ನಿಸಿದೆ.ಇದನ್ನು ತಡೆಯಲು …

Read More »

ಸುರತ್ಕಲ್‌ : ನದಿಯಲ್ಲಿ ಮುಳುಗಿ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಸಾವು

ಸುರತ್ಕಲ್‌ : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್  ಖಾಸಗಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟಿನ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಮಗ ಯಶ್ಚಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ ಮಗ ರಾಘವೇಂದ್ರ (15), ಸುರತ್ಕಲ್ ಗುಡ್ಡೆಕೊಪ್ಪ, ನಿವಾಸಿ ವಿಶ್ವನಾಥ ಎಂಬವರ ಮಗ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್‌ (15) ಎಂದು ಗುರುತಿಸಲಾಗಿದೆ.  ಮೃತರೆಲ್ಲರೂ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ಎಸ್ಸೆಸ್ಸೆಲ್ಸಿ …

Read More »

You cannot copy content of this page.