ತಾಜಾ ಸುದ್ದಿ

ಬೆಳ್ತಂಗಡಿ: ಮೂರ್ಜೆಯಲ್ಲಿ ವಾಹನ ಅಪಘಾತ – ಗಾಯಾಳು ಮಹಿಳೆ ಮೃತ್ಯು

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲಾ (45) ಮೃತ ಪಟ್ಟವರು. ಇವರು ದ್ವಿಚಕ್ರವಾಹನದಲ್ಲಿ ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ಬಂದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ ಎನ್ನಲಾಗಿದೆ. ಕಮಲಾ ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಕಮಲಾ ಸೋಮವಾರ ಸಂಜೆ …

Read More »

ಉಡುಪಿ: ಕಾಯಿಲೆ ಪೀಡಿತ ಮಹಿಳೆ ಗುಣಮುಖ – ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ಶೂನ್ಯ

ಉಡುಪಿ: ಶಂಕಿತ ಮಂಗನಕಾಯಿಲೆ(ಕೆಎಫ್‌ಡಿ)ಗಾಗಿ ಕಳೆದ ಶನಿವಾರ ಪರೀಕ್ಷೆಗಾಗಿ ಕಳುಹಿಸಲಾದ ಇಬ್ಬರು ಜ್ವರಪೀಡಿತ ವ್ಯಕ್ತಿಗಳ ಸ್ಯಾಂಪಲ್‌ಗಳು ‘ನೆಗೆಟಿವ್’ ಫಲಿತಾಂಶವನ್ನು ತೋರಿಸಿವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ್ ತಿಳಿಸಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಮಂಗನಕಾಯಿಲೆಗಾಗಿ ಒಟ್ಟು ಮೂರು ಮಂದಿ ಶಂಕಿತರ ಸ್ಯಾಂಪಲ್‌ಗಳನ್ನು ಶಿವಮೊಗ್ಗದ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆಂಚನೂರಿನ ಮಹಿಳೆಯೊಬ್ಬರಲ್ಲಿ ಮಾತ್ರ ಸೋಂಕು ಪತ್ತೆಯಾಗಿದ್ದು, ಉಳಿದ ಇಬ್ಬರದು ನೆಗೆಟಿವ್ ಆಗಿದೆ.ಹೀಗಾಗಿ ಸದ್ಯ ಜಿಲ್ಲೆಯಲ್ಲಿ ಯಾವುದೇ ಸಕ್ರಿಯ ಮಂಗನಕಾಯಿಲೆ ಪ್ರಕರಣಗಳು ಇಲ್ಲ.

Read More »

ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

ಮಂಗಳೂರು:  ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಪುರುಷೋತ್ತಮನ‌ ಪ್ರಸಂಗ ಸಿನಿಮಾ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು.   ಮಂಗಳೂರು ಸುತ್ತಮುತ್ತ, ಬಜಪೆ, ಮುರನಗರ, ಕೆಂಜಾರ್ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು,  ದುಬಾಯಿಯಲ್ಲಿ 7 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು.  ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಸಿನಿಮಾದಲ್ಲಿ ಪ್ರತಿಯೊಂದು ಪಾತ್ರವೂ ಇಲ್ಲಿ ಕತೆಗೆ ಪೂರಕವಾಗಿ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ. …

Read More »

ಉಡುಪಿ: ನಗರದ ಕೋ-ಆಪರೇಟಿವ್ ಸೊಸೈಟಿ ಒಳನುಗ್ಗಿ ಕಳ್ಳತನಕ್ಕೆ ಯತ್ನ

ಉಡುಪಿ: ಉಡುಪಿ ನಗರದ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ನುಗ್ಗಿದ ಕಳ್ಳರು ಕಳವಿಗೆ ಯತ್ನಿಸಿರುವ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳರು ಫೆಬ್ರವರಿ24ರ ಮಧ್ಯಾಹ್ನದಿಂದ ಫೆಬ್ರವರಿ26ರ ಬೆಳಗ್ಗಿನ ನಡುವೆ ಈ ಕಳವಿಗೆ ಯತ್ನ ನಡೆದಿದೆ ಎಂದು ತಿಳಿದುಬಂದಿದೆ. ಬ್ಯಾಂಕಿನ ಮಹಡಿಗೆ ಹೋಗುವ ಮೆಟ್ಟಿಲು ಬಳಿಯ ಗೇಟಿನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಬ್ಯಾಂಕಿನ ಕಿಟಕಿಯ ಒಂದು ಬದಿಯ ಸರಳುಗಳನ್ನು ತುಂಡು ಮಾಡಿ ಒಳ ಪ್ರವೇಶಿಸಿದ್ದಾರೆ. ಬಳಿಕ ಬ್ಯಾಂಕಿನ ಎದುರಿನ ವರಾಂಡದಲ್ಲಿನ ಗೇಟ್‌ನ ಬೀಗ ಮುರಿದು, ಬ್ಯಾಂಕಿನ ಒಳಗೆ ಇದ್ದ ಗೋದ್ರೇಜ್ ಕಪಾಟು, ಕ್ಯಾಶ್ ಕೌಂಟರ್ …

Read More »

ಕಾಲೇಜಿಗೆ ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ – ಮದುವೆಯಾಗಿ ಪತ್ತೆ.!

ಮೂಡುಬಿದಿರೆ : ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದ್ದು, ಸದ್ಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ, ವಿದ್ಯಾರ್ಥಿನಿ ತನ್ನ ಪ್ರಿಯಕರನ ಜೊತೆ ಮದುವೆಯಾಗಿದ್ದಾಳೆ ಎನ್ನಲಾಗಿದೆ.

Read More »

ಕುಂದಾಪುರ : ಡಿವೈಡರ್ ಗೆ ಬೈಕ್ ಡಿಕ್ಕಿ – ಸವಾರ ಸಾವು

ಕುಂದಾಪುರ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಮೂಲತಃ ಬೈಂದೂರು ಸಮೀಪದ ನಾಗೂರಿನ ಹಾಗೂ ಪ್ರಸಕ್ತ ಕುಂದಾಪುರ ನಿವಾಸಿಯಾಗಿದ್ದ ಮುಹಮ್ಮದ್ ಫರ್ವೇಝ್(37) ಎಂದು ಗುರುತಿಸಲಾಗಿದೆ. ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಇವರು, ಉತ್ತಮ ಕ್ರೀಡಾಪಟುವಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ- ಕಣ್ತುಂಬಿಕೊಳ್ಳಲು ಇನ್ನು 4 ದಿನ ಮಾತ್ರ ಅವಕಾಶ

ಮಂಗಳೂರು: ಹಾಲಿನ ಅಭಿಷೇಕವಾದಾಗ ಪೂರ್ಣ ಚಂದಿರ, ಚಂದನದ ಅಭಿಷೇಕವಾದಾಗ ಸ್ವರ್ಣದ ಹೊಳಪು, ಕಷಾಯದ ಅಭಿಷೇಕವಾದಾಗ ಕಡು ಕಂದು ದೇಹ, ಕಲ್ಕಚೂರ್ಣ ಅಭಿಷೇಕವಾದಾಗ ಸಾಕ್ಷಾತ್ ಕಣ್ಣೆದುರೇ ಪ್ರತ್ಯಕ್ಷನಾದ ಅನುಭವ. ಇದು ವೇಣೂರಿನ ವಿರಾಟ್ ವೈರಾಗಿ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕವಾದಾಗ ಕಂಡುಬಂದ ಅದ್ಭುತ ಕ್ಷಣ.ಜಲಾಭಿಷೇಕ ಪಡೆದ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕಕ್ಕೆ ಸಜ್ಜಾದಾಗ ಇಡೀ ಪರಿಸರದ ಜನರ ಕಣ್ಣುಗಳಲ್ಲಿ ಅದ್ಭುತ ವನ್ನು ನೋಡೋ ತವಕದ ದೃಶ್ಯ ಕಂಡುಬಂದಿದ್ದು ವೇಣೂರಿನ ಮಸ್ತಕಾಭಿಷೇಕದ ಸಂದರ್ಭದಲ್ಲಿ ಶಿರದಿಂದ ಪಾದದವರೆಗೆ ಅಭಿಷೇಕದ ದ್ರವ್ಯ ಪಸರಿಸಿದಾಗ ಸುತ್ತಲಿನ ವಾತಾವರಣದಲ್ಲಿ ವಿದ್ಯುತ್ ಸಂಚಾರ ಆರಂಭವಾಗಿದೆ. ಜಲಾಭಿಷೇಕವಾದ …

Read More »

ಪೀಸ್‌ ಪೀಸ್‌ ಆಗಿ ವೃದ್ಧೆಯ ಮೃತದೇಹ ಡ್ರಮ್ ನಲ್ಲಿ ಪತ್ತೆ!

ಬೆಂಗಳೂರು : ದಿನೇ ದಿನೇ ಬೆಂಗಳೂರಿನಲ್ಲಿ ಕೊಲೆ ಪ್ರಕರಣಗಳು ಹೆಚ್ಚುತ್ತಲೆ ಇವೆ ಅದರಲ್ಲೂ ಶವಗಳು ವಿಚಿತ್ರ ಸ್ಥಿತಿಗಳಲ್ಲಿ ಪತ್ತೆಯಾಗುತ್ತಿವೆ ಇದೀಗ ಅದೇ ರೀತಿ ನಗರದಲ್ಲಿ ವೃದ್ಧೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.ಶವವನ್ನು ಐದು ತಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ತುಂಬಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸುಶೀಲಮ್ಮ (65) ಎಂದು ಗುರುತಿಸಲಾಗಿದೆ. 5 ಗಂಟೆ ಸುಮಾರಿಗೆ ಡ್ರಮ್‌ನಿಂದ ದುರ್ವಾಸನೆ ಬರಲಾರಂಭಿಸಿದೆ.ಈ ಹಿನ್ನೆಲೆ ಸಮೀಪದ ನಿವಾಸಿಗಳು ಇದನ್ನು ಪರಿಶೀಲಿಸಿ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಈ ವೇಳೆ ಡ್ರಮ್‌ನಲ್ಲಿ ದೇಹದ ಮೇಲ್ಭಾಗವು ಹಾಗೇ ಇದ್ದು, ಕೈಗಳು ಮತ್ತು ಕಾಲುಗಳನ್ನು ನಿಖರವಾಗಿ …

Read More »

ಒಂದನೇ ತರಗತಿಗೆ ದಾಖಲಾಗಲು 6ವರ್ಷ ಪೂರ್ತಿಗೊಳ್ಳುವುದು‌ ಕಡ್ಡಾಯ|

ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ, 2009 ಕ್ಕೆ ಅನುಗುಣವಾಗಿ 1ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸನ್ನು ಆರು ವರ್ಷಗಳಾಗಿ ನಿಗದಿಪಡಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ.ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಬರೆದ ಪತ್ರದಲ್ಲಿ, ಶಿಕ್ಷಣ ಸಚಿವಾಲಯದ (ಎಂಒಇ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2020 ರಲ್ಲಿ ಎನ್‌ಇಪಿ ಪ್ರಾರಂಭವಾದಾಗಿನಿಂದ ಹಲವಾರು ಬಾರಿ ಹೊರಡಿಸಿದ ನಿರ್ದೇಶನಗಳನ್ನು ಪುನರುಚ್ಚರಿಸಿದೆ. ಕಳೆದ ವರ್ಷವೂ ಇದೇ …

Read More »

ಒಂದೇ ಮನೆಯಲ್ಲಿ ಮೂವರು ಮಹಿಳಾ ನ್ಯಾಯಾಧೀಶರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ಮನೆಯ ಮೂವರು ಮಹಿಳೆಯರು ನ್ಯಾಯಾಧೀಶರಾಗಿದ್ದಾರೆ. ಹೈಕೋರ್ಟ್ ಅಧಿಸೂಚನೆಗೊಳಿಸಿದ 33 ಸಿವಿಲ್ ನ್ಯಾಯಾಧೀಶರ ಆಯ್ಕೆ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಹೆಚ್.ಜೆ. ಶ್ರೇಯಾ ಅವರು ಆಯ್ಕೆಯಾಗಿದ್ದಾರೆ. ಶ್ರೇಯಾ ಮೂಲತಃ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕು ಹೆಗಡೆ ಗ್ರಾಮದವರು. ಅವರ ತಂದೆ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜೆ. ನಾಯ್ಕ, ತಾಯಿ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರೂಪಾ ನಾಯ್ಕ. ಶ್ರೇಯಾ ಅವರ ಸಹೋದರಿ ಹೆಚ್.ಜೆ. ಶಿಲ್ಪಾ 2019ರ ಬ್ಯಾಚ್ …

Read More »

You cannot copy content of this page.