ತಾಜಾ ಸುದ್ದಿ

BREAKING NEWS: ವಾಹನ ಸವಾರರ ಗಮನಕ್ಕೆ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ

ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ …

Read More »

ಕಾಪು: ಸ್ಕೂಟರ್‌ ನಿಲ್ಲಿಸಿ ಮಲಗಿದ್ದ ಸವಾರ – ಸ್ಕೂಟರ್‌, ಮೊಬೈಲ್‌ ಸಹಿತ ಸೊತ್ತುಗಳು ದೋಚಿದ ಕಳ್ಳರು

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿಯಲ್ಲಿ ಸ್ಕೂಟರ್‌ ನಿಲ್ಲಿಸಿ ಸ್ಕೂಟರ್‌ಗೆ ತಲೆ ಇಟ್ಟು ಮಲಗಿ ನಿದ್ರಿಸಿದ್ದ ಯುವಕನಿಗೆ ಗೊತ್ತಾಗದಂತೆ ಸ್ಕೂಟರ್‌ ಸಹಿತ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಕಾರ್ಕಳ ಮುಡಾರು ಗ್ರಾಮದ ಚೇತನ್‌ ವಂಚನೆಗೊಳಗಾದವರು. ಇನ್ನು ಯುವಕನ ಬಳಿಯಿದ್ದ ಸ್ಕೂಟರ್‌ ಸಹಿತ ಮೊಬೈಲ್‌, ಪರ್ಸ್‌, ಪರ್ಸ್‌ನಲ್ಲಿದ್ದ ವೋಟರ್‌ ಐಡಿ, ಡಿಎಲ್‌, ಸ್ಕೂಟರ್‌ನ ದಾಖಳೆ, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಎಟಿಎಂ ಕಾರ್ಡ್‌ ಹಾಗೂ ಢಿಕ್ಕಿಯಲ್ಲಿದ್ದ ಟೂಲ್ಸ್‌ ಕಳವು ಮಾಡಿಕೊಂಡು ಹೋಗಿದ್ದಾರೆ. ಚೇತನ್‌ ಫೆ. 11ರಂದು ಮಧ್ಯರಾತ್ರಿ 12 …

Read More »

ಬಾಯ್​ಫ್ರೆಂಡ್​​ ಜೊತೆ ಮದ್ಯ ಸೇವಿಸಿದ ಯುವತಿ ಬೆಳಗ್ಗೆ ಏಳಲೇ ಇಲ್ಲ – ಆ ರಾತ್ರಿ ನಡೆದಿದ್ದಾದರೂ ಏನು?

ತಿರುವನಂತಪುರಂ: ತನ್ನ ಬಾಯ್​ಫ್ರೆಂಡ್​ ಜೊತೆ ರಾತ್ರಿ ಮದ್ಯ ಸೇವಿಸಿದ ಯುವತಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ಈ ಪ್ರಕರಣದ ಸಂಬಂಧ ಯುವತಿಯ ಗೆಳೆಯನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನೀಲಗಿರಿ ಜಿಲ್ಲೆಯ ಊಟಿಯ ಪಿಂಕರ್ ಪೋಸ್ಟ್ ಮೂಲದ ರಿತಿ ಏಂಜೆಲ್ (19) ಮೃತ ಯುವತಿ. ಊಟಿಯ ಬಾಂಬೆ ಕ್ಯಾಸಲ್ ನಿವಾಸಿ ಆಕಾಶ್ (20) ಬಂಧಿತ ಯುವಕ. ಇವರಿಬ್ಬರು 10ನೇ ತರಗತಿಯಲ್ಲಿ ಒಟ್ಟಿಗೆ ಓದಿದ್ದರಿಂದ ಪರಿಚಯವಾಗಿ ಪ್ರೀತಿಯಲ್ಲಿದ್ದರು. ರಿತಿ ಏಂಜೆಲ್ ಕೊಯಮತ್ತೂರಿನ ಖಾಸಗಿ ನರ್ಸಿಂಗ್ ಕಾಲೇಜಿಗೆ ಮತ್ತು ಆಕಾಶ್ ನೀಲಗಿರಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿಗೆ …

Read More »

ಇಂಜೆಕ್ಷನ್ ನೀಡಿದ ಕೆಲ ಸಮಯದಲ್ಲೇ ಒಂದುವರೆ ತಿಂಗಳ ಮಗು ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಆಸ್ಪತ್ರೆಯಲ್ಲಿ ಇಂಜಕ್ಷನ್ ನೀಡಿದ ಒಂದು ಗಂಟೆಯಲ್ಲೇ ಒಂದುವರೆ ತಿಂಗಳ ಕಂದಮ್ಮ ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ವ್ಯಾಕ್ಸಿನೇಷನ್ ಹಾಕಿಸಲಾಗಿತ್ತು. ಇಂಜಕ್ಷನ್ ಕೊಟ್ಟ ಒಂದು ಗಂಟೆಯಲ್ಲೇ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರೇ ಕಾರಣ ಎಂದು ಆಸ್ಪತ್ರೆ ಮುಂದೆ ಪೋಷಕರು, ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಒಂದುವರೆ ತಿಂಗಳ ಕಂದಮ್ಮನನ್ನು ಕಳೆದುಕೊಂಡಿರುವ ತಂದೆ-ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Read More »

ಮೋದಿ ಕಟೌಟ್ ತಬ್ಬಿಕೊಂಡು ಮಹಿಳೆ ಡ್ಯಾನ್ಸ್, ವಿಡಿಯೋ ವೈರಲ್

ಬೆಂಗಳೂರು : ಇನ್‌ಸ್ಟಾಗ್ರಾಮ್ ರೀಲ್ ಮಾಡುವಾಗ ಮಹಿಳೆಯೊಬ್ಬರು ಸೆಲ್ಫಿ ಪಾಯಿಂಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಟೌಟ್‌ನೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇಡೀ ದೇಶದ ರೈಲ್ವೆ ನಿಲ್ದಾಣಗಳು, ಪಡಿತರ ಅಂಗಡಿಗಳು ಮತ್ತು ವಿವಿಧ ಸ್ಥಳಗಳಲ್ಲಿ ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳೊಂದಿಗೆ ಸೆಲ್ಫಿ ಪಾಯಿಂಟ್‌ಗಳನ್ನು ಹಾಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಚಾರಕ್ಕಾಗಿ ಕಟೌಟ್‌ಗಳನ್ನು ಹಾಕಲಾಗಿದೆ. ಜನರು ಪ್ರಧಾನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಸರ್ಕಾರವು ವಿವಿಧ ಸ್ಥಳಗಳಲ್ಲಿ ಕಟೌಟ್‌ಗಳನ್ನು ಹಾಕಿದೆ. …

Read More »

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಯ ರಕ್ಷಣೆ

ಉಡುಪಿ: ಚಲಿಸುತ್ತಿರುವ ರೈಲಿನಲ್ಲಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ರಕ್ಷಿಸಿರುವ ಘಟನೆ ಸೋಮವಾರ ರಾತ್ರಿ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಡೆದಿದೆ. ದೆಹಲಿಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಯೋರ್ವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಗರ್ಭಿಣಿ ಅಸಹಾಯಕ ಪರಿಸ್ಥಿತಿಯಲ್ಲಿದ್ದರು. ಇಂದ್ರಾಳಿ ನಿಲ್ದಾಣದಲ್ಲಿ ರೈಲು ನಿಲುಗಡೆಯಾದಾಗ ರೈಲ್ವೆ ಮುಖ್ಯ ಆರೋಗ್ಯಾಧಿಕಾರಿ ಸ್ಟಿವನ್ ಜಾರ್ಜ್ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡುವರು ಗರ್ಭಿಣಿಯನ್ನು ಸರಕಾರಿ ಮಹಿಳಾ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲುಪಡಿಸಿದರು. ಮಹಿಳೆಯ ಜೊತೆ ಪತಿ ಇದ್ದರು. ಕೇರಳ …

Read More »

ಸ್ಪೀಕರ್ ಯು.ಟಿ ಖಾದರ್ ಗೆ ಬಂತು ಐಷಾರಾಮಿ ಕಾರು

ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಇದೀಗ ಹಲವು ವಿಶೇಷತರ ಹೊಂದಿರುವ ಐಷಾರಾಮಿ ಕಾರು ಬಂದಿದೆ. ಸಚಿವಾಲಯದಿಂದ ವಿಶೇಷ ಕಾರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಐಷಾರಾಮಿ ಫಾರ್ಚೂನರ್ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. ಐಶಾರಾಮಿ ಕಾರು, 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್ ಖಾದರ್ ಮುಖಕ್ಕೆ ಬೆಳಕು ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ. ಕಪ್ಪು ಬಣ್ಣದ ಫಾರ್ಚೂನರ್(ಇ) ಕಾರಿನ ದರ 33.43 ಲಕ್ಷ (ಪೆಟ್ರೋಲ್ ಹಾಗೂ ಡೀಸೆಲ್ ಕಾರಿನ ದರ 35.93 ರಿಂದ 51.44 ಲಕ್ಷ …

Read More »

ಉಡುಪಿ: ಪ್ರಸಿದ್ದ ದೈವ ನರ್ತಕ ಸಾಧು ಪಾಣಾರ ನಿಧನ

ಉಡುಪಿ : ಪ್ರಸಿದ್ದ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಸಾಧು ಪಾಣಾರ ಅವರು ಕಳೆದ 45 ವರ್ಷಗಳಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು. ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ದೈವಾರಾಧನೆ ನಡೆಸಿದ್ದ ಅವರು ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳ ಸೇವೆ ಸಲ್ಲಿಸಿದ್ದಾರೆ. ಅವರ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಗೌರವಿಸಿವೆ. ಸಾಧು ಪಾಣಾರ ಅವರು ಪತ್ನಿ …

Read More »

ಬೆಳ್ತಂಗಡಿ: ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ ಶಿಕ್ಷಕ- ಅವಮಾನಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ : ಸಮೀಪದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ ಎಂದು ತಿಳಿಯಲಾಗಿದೆ. ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಇಂದು ಮುಂಜಾನೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆಗೆ ಡ್ರಾಯಿಂಗ್ ಶಿಕ್ಷಕ  ಇಲ್ಲಸಲ್ಲದ ಆರೋಪ …

Read More »

BREAKING: ‘ಹಿಂದೂ ಧರ್ಮ’ದ ಬಗ್ಗೆ ಅವಹೇಳನ ಹೇಳಿಕೆ: ‘ಶಾಲಾ ಶಿಕ್ಷಕಿ’ ಸಿಸ್ಟರ್ ಪ್ರಭಾ ಅಮಾನತು

ಮಂಗಳೂರು: ಶಾಲೆಯೊಂದರ ಶಿಕ್ಷಕಿಯೊಬ್ಬರು ಹಿಂದೂ ಧರ್ಮ, ಶ್ರೀರಾಮ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತುಗೊಳಿಸಿ ಶಾಲಾ ಆಡಳಿತ ಮಂಡಳಿ ಆದೇಶಿಸಿದೆ. ಮಂಗಳೂರಿನ ಸಂತ ಜೆರೋಸಲಾ ಶಾಲೆಯಲ್ಲಿನ 7ನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬುವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು.   ಶಿಕ್ಷಕಿಯ ಹೇಳಿಕೆ ಖಂಡಿಸಿ ಶಾಸಕ ವೇದವ್ಯಾಸ ಕಾಮತ್ ಜೊತೆಗೂಡಿ ಹಿಂದೂ ಕಾರ್ಯಕರ್ತರು ಶಾಲೆಯ ಬಳಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಮುತ್ತಿಗೆಗೂ ಯತ್ನಿಸಿದ್ದರು. ಈ ಘಟನೆಯ ನಂತ್ರ ಸಂತ ಜೆರೋಸಲಾ ಶಾಲೆಯ ಆಡಳಿತ …

Read More »

You cannot copy content of this page.