ತಾಜಾ ಸುದ್ದಿ

ಗೃಹಲಕ್ಷ್ಮಿಯ 5ನೇ ಕಂತಿನ ಹಣ ಇನ್ನೂ ಬಂದಿಲ್ವ? ಹಾಗಾದ್ರೇ ಹೀಗೆ ಮಾಡಿ!

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಲು ಶುರು ಮಾಡಿದೆ ಎಂದು ತಿಳಿಸಲಾಗಿದೆ. ಫೆಬ್ರವರಿ 15 ನೇ ದಿನಾಂಕದಿಂದ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಪ್ರಾರಂಭಿಸುತ್ತದೆ ಎನ್ನಲಾಗಿದೆ.   ಈ ನಡುವೆ ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್(Gruhalakshmi Pending Money)ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿ ದ ಬಳಿಕ ಆರನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ …

Read More »

ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡಿದ್ದ 2.76 ಲಕ್ಷ ಮೌಲ್ಯದ ಗಾಂಜಾ ನಾಶ

ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000 ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್‌ ಕೆ., ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಮತ್ತು ಪಿ.ಎ.ಹೆಗಡೆ, ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಪೊಲೀಸ್‌ ಉಪಾಧೀಕ್ಷಕರಾದ …

Read More »

ಮಂಗಳೂರು : ಜೆರೋಸಾ ಶಾಲಾ ಶಿಕ್ಷಕಿಯಿಂದ ಅಯೋಧ್ಯ ರಾಮಂದಿರ ಕುರಿತು ಅವಹೇಳನಕಾರಿ ಮಾತು- ಶಾಲೆಗೆ ಹಿಂದೂ ಕಾರ್ಯಕರ್ತರ ಮುತ್ತಿಗೆ

ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿಯಿಂದ ಅಯೋಧ್ಯ ರಾಮಂದಿರ ಮತ್ತು ಶ್ರೀರಾಮ ದೇವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿದ್ದನ್ನು ಖಂಡಿಸಿ ಮಂಗಳೂರಿನಲ್ಲಿ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಖಾಸಾಗಿ ಶಾಲೆಗೆ ಮುತ್ತಿಗೆ ಹಾಕಿದ್ದಾರೆ. ಶಾಲಾ ಶಿಕ್ಷಕಿ ಪ್ರಭಾ ಎಂಬುವರು ಶ್ರೀ ರಾಮ ದೇವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿದ್ದಾರೆ. ಈ ಕುರಿತು ಪೋಷಕಿಯೊಬ್ಬರು ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು ಶಿಕ್ಷಕಿ ಮೇಲೆ ಕ್ರಮ ಕೈಗೊಳ್ಳಲು ವಿಶ್ವ ಹಿಂದೂಪರಿಷತ್ , ಬಜರಂಗದಳ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದಾರೆ. ಶಿಕ್ಷಕಿ ಶಾಲಾ ಮಕ್ಕಳಿಗೆ …

Read More »

ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ಕೋರ್ಟ್ ತಡೆ..!

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರು ನೋಟಿಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಹಾಗೂ ವೇಣೂರು ವಲಯ ಮುಖಂಡ ಯಶೋಧರ ಗಡಿಪಾರು ನೋಟೀಸ್ ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.   ಇಬ್ಬರನ್ನೂ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ …

Read More »

6 ವರ್ಷದ ಮಕ್ಕಳಿಗೂ ಹೆಲ್ಮೆಟ್​​ ಕಡ್ಡಾಯ – ಸಂಚಾರಿ ಪೊಲೀಸರ ಆದೇಶ

ಬೆಂಗಳೂರು: ಪುಟ್ಟ ಮಕ್ಕಳು ಹೆಲ್ಮೆಟ್ ಇಲ್ಲದೆ ಶಾಲೆಗಳ ಬಳಿ ಬರುತ್ತಿದ್ದಹಿನ್ನಲೆ 6 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗೋ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇನ್ನು ಶಾಲಾ ಆಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕ್ಕೆ ಪೊಲೀಸರು …

Read More »

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ – ಇಬ್ಬರ ಬಂಧನ, 57 ಸಾವಿರ ರೂ ಮೌಲ್ಯದ ಮಾದಕದ್ರವ್ಯ ವಶ

ಮಂಗಳೂರು: ನಗರದ ಕಾವೂರಿನ ಬೋಂದೆಲ್ ಬಳಿಯ ಮೈದಾನದಲ್ಲಿ ಬೈಕ್ ನಲ್ಲಿ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 19 ಗ್ರಾಂ ತೂಕದ 57,000 ಮೌಲ್ಯದ ಮೆಥಪಟೈನ್ ಮಾದಕದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಿವಾಸಿ ಹಿಮನೀಶ್ (26), ಕೋಟೆಕಾರು ತಾರಿಪಡ್ಪು ನಿವಾಸಿ ಪವನ್ ರಾಜ್ ಪಿ(28) ಬಂಧಿತ ಆರೋಪಿಗಳು. ಆರೋಪಿಗಳು ಕಾವೂರಿನ ಬೊಂದೆಲ್ ಬಳಿಯ ಮೈದಾನದ ಬಳಿ ಬೈಕ್ ನಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಮೆಥಪಟೈನ್ ಮಾದಕದ್ರವ್ಯವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಾದಕದ್ರವ್ಯವನ್ನು ಸೇರಿದಂತೆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. …

Read More »

ಗಮನಿಸಿ: ವಾಹನದ HSRP ನಂಬರ್ ಪ್ಲೇಟ್ ನೋಂದಣಿಗೆ 7 ದಿನ ಬಾಕಿ- ಹೇಗೆ ಬದಲಾವಣೆ ಮಾಡುವುದು ಇಲ್ಲಿದೆ ವಿವರ

ಕರ್ನಾಟಕದಲ್ಲಿ ನಿಮ್ಮ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಪಡೆಯುವುದು: ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ (MoRTH) ಆದೇಶದ ಪ್ರಕಾರ, ಕರ್ನಾಟಕದಲ್ಲಿ ನೋಂದಾಯಿಸಲಾದ ಎಲ್ಲಾ ವಾಹನಗಳಿಗೆ **ಫೆಬ್ರವರಿ 17, 2024** ರೊಳಗೆ ಹೈ-ಸೆಕ್ಯುರಿಟಿ ನೋಂದಣಿ ಪ್ಲೇಟ್ (HSRP) ಅಗತ್ಯವಿರುತ್ತದೆ. ಈ ಮಾರ್ಗದರ್ಶಿ, 2000 ಪದಗಳನ್ನು ಮೀರಿದ್ದು, ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ವೆಬ್‌ಸೈಟ್ ಮೂಲಕ HSRP ಬುಕಿಂಗ್ ಪ್ರಕ್ರಿಯೆಯ ವಿವರವಾದ ಸ್ಥಗಿತವನ್ನು ಒದಗಿಸುತ್ತದೆ, ಹೊಸ ಭದ್ರತೆ-ವರ್ಧಿತ ಪ್ಲೇಟ್‌ಗಳಿಗೆ ನಿಮ್ಮ ಪರಿವರ್ತನೆಯನ್ನು ಸರಳಗೊಳಿಸುತ್ತದೆ. ಆರಂಭಿಸುವ ಮೊದಲು: *ಅರ್ಹತೆ: ನಿಮ್ಮ ವಾಹನವು ಕರ್ನಾಟಕದಲ್ಲಿ ನೋಂದಣಿಯಾಗಿದೆಯೇ ಮತ್ತು …

Read More »

ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ- ಮೂವರ ಬಂಧನ

ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್‌ ಕುಮಾರ್ ನಾಯ್ಕ(19) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿವಿಧ ಪತ್ರಿಕೆಗಳಲ್ಲಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಚೇರಿ ಕೆಲಸ ಖಾಲಿ ಇದೆ. ನಿರುದ್ಯೋಗಿಗಳಿಗೆ ಬಂದ ದಿನವೇ ಕೆಲಸ ಸಿಗುತ್ತದೆ ಎಂಬುದಾಗಿ ಬಂದ ಜಾಹೀರಾತು ನೋಡಿದ …

Read More »

ಮಂಗಳೂರು : ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ಆರೋಪ – ಹೆಡ್ ಕಾನ್‌ಸ್ಟೇಬಲ್ ಸಸ್ಪೆಂಡ್

ಮಂಗಳೂರು : ದೂರು ನೀಡಲು ಬಂದಿರುವ ಮಹಿಳೆಯ ಮೊಬೈಲ್ ಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ಆರೋಪದಲ್ಲಿ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬಾತನನ್ನು ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಮಹಿಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಕಾವೂರು ಠಾಣೆಗೆ ಬಂದಿದ್ದ ವೇಳೆ ಹೆಡ್ ಕಾನ್‌ಸ್ಟೇಬಲ್‌ ಸಂತೋಷ್‌ ಆಕೆಯ ಮೊಬೈಲ್ ನಂಬ‌ರ್ ಪಡೆದಿದ್ದ. ಆ ಬಳಿಕದಿಂದ ಆಕೆಗೆ ಅಸಭ್ಯವಾದ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆ. …

Read More »

ಬೆಳ್ತಂಗಡಿ : ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ..!

ಬೆಳ್ತಂಗಡಿ : ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ನಡೆಸಿದ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಇಲ್ಲಿನ ಕಳೆಂಜ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30) ಮೃತ ಯುವತಿಯಾಗಿದ್ದಾಳೆ. ಡೆತ್ ನೋಟ್ ಬರೆದು ಮನೆಯ ಪಕ್ಕಾಸಿಗೆ ನೇಣು ಬಿಗಿದು ವನಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ ಠಾಣೆಯ …

Read More »

You cannot copy content of this page.