ತಾಜಾ ಸುದ್ದಿ

ಸುಳ್ಯ: ಚಿಕಿತ್ಸೆಗಾಗಿ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.7ರ ಬುಧವಾರ ಬೆಳಿಗ್ಗೆ ಸುಳ್ಯದಲ್ಲಿ ಸಂಭವಿಸಿದೆ. ಪುತ್ತೂರು ತಿಂಗಳಾಡಿ ನಿವಾಸಿ ವಸಂತ ಎಂಬವರು ಇಂದು ಮುಂಜಾನೆ ಸುಮಾರು 6 ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡವರು.   ವಸಂತ ಕಳೆದ ಮೂರು ದಿನಗಳ ಹಿಂದೆ ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗುತ್ತಿದ್ದರು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಒರ್ವ …

Read More »

ಉಡುಪಿ: ಮಂಗನ ಕಾಯಿಲೆ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಫ್‌ಡಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆರೆ ಜಿಲ್ಲೆಯಾದ ಶಿವಮೊಗ್ಗದಲ್ಲಿ 47, ಉತ್ತರ ಕನ್ನಡ ಜಿಲ್ಲೆಯಲ್ಲಿ 22 ಪ್ರಕರಣಗಳು ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಮಂಗನ …

Read More »

ವಿಟ್ಲ: ಅನ್ಯಮತೀಯ ಯುವಕನ ಮುಂದೆ ಧರಣಿ ಕೂತ ಯುವತಿ

ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ಮಂಗಳವಾರ ನಡೆದಿದೆ. ಯುವತಿಯನ್ನು ಮನವೂಲಿಸಲು ವಿಫಲರಾದ ವಿಟ್ಲ ಪೊಲೀಸರು ರಾತ್ರಿ ಆಕೆಯನ್ನು ಠಾಣೆಗೆ ಕರೆದೊಯಿದ್ದಾರೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮ ಬೆಳೆದು, ಹಣಕಾಸಿನ ವ್ಯವಹಾರಗಳೂ ನಡೆದಿದೆ ಎನ್ನಲಾಗಿದೆ. ಮಂಗಳವಾರ ಸಾಯಂಕಾಲ ಅಡ್ಯನಡ್ಕದ ಮನೆ ಬಳಿಗೆ ಬಂದ ಸಂತ್ರಸ್ತ ಯುವತಿಗೆ ಪ್ರೀತಿ ಮಾಡುವುದಾಗಿ ಹೇಳಿದ …

Read More »

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ- ನ್ಯಾಯಾಲಯಕ್ಕೆ ಹಾಜರಾಗಲು ಹೈಕೋರ್ಟ್ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ.ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 11 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆರ್ ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಭಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಜರಾಗುವಂತೆ ಸೂಚಿಸಲಾಗಿದೆ. 2022 ರಲ್ಲಿ ಅಂದಿನ …

Read More »

ಉಡುಪಿ:  ಅಯೋಧ್ಯೆ ಬಾಲರಾಮನಿಗೆ ತೊಟ್ಟಿಲು ಸೇವೆ – ರಘುಪತಿ ಭಟ್ ಕೊಡುಗೆ

ಉಡುಪಿ: ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯಾ ರಾಮನ ಸನ್ನಿಧಿಯಲ್ಲಿ ನಡೆಯುತ್ತಿರುವ ಮಂಡಲೋತ್ಸವದ ವೈಭವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶ್ರೀಗಳ ಮಾರ್ಗದರ್ಶನದಂತೆ ಶ್ರೀಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ರಜತ ಪಲ್ಲಕ್ಕಿಯನ್ನು ಅರ್ಪಿಸಲು ಸಿದ್ದರಾಗುತ್ತಿರುವಂತೆ ಇತ್ತ ಕಡೆ ಮಂಡಲೋತ್ಸವದಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಂಡಿರುವ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್‌ ಅವರು ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲು ಉತ್ಸುಕರಾಗಿದ್ದಾರೆ. ರಾಜಸ್ಥಾನದಲ್ಲಿ ಬೀಟಿಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಲಾಗಿದ್ದು, ಇದೀಗ ಅಯೋಧ್ಯೆಯತ್ತ ಹೊರಟಿದೆ. ಫೆ. 6 ರ ಸಂಜೆ ತೊಟ್ಟಿಲು …

Read More »

ಪುತ್ತೂರು: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನಕ್ಕೆ ಮೂರು ದಿನಗಳ ಗಡುವು

ಪುತ್ತೂರು: ದ.ಕ.ಜಿಲ್ಲೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆದ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ ಮಾಡುವ ಕುರಿತು ಮಹತ್ವದ ಸಮಾಲೋಚನಾ ಸಭೆ ಪುತ್ತೂರಿನಲ್ಲಿ ನಡೆದಿದೆ. ಪುತ್ತಿಲ ಪರಿವಾರದ ನಾಯಕರು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಮತ್ತೆ ಬಿಜೆಪಿಯೊಂದಿಗೆ ಸೇರ್ಪಡೆಗೆ ಮೂರು ದಿನಗಳ ಗಡುವು ನೀಡಿದ್ದಾರೆ. ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಒಟ್ಟು ಸೇರಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ಪ್ರಮುಖ ಬೇಡಿಕೆಯನ್ನು ಇಟ್ಟಿದೆ. ಸಭೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅರುಣ್ ಪುತ್ತಿಲ, ಸಭೆಯ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಕಾರ್ಯಕರ್ತರ ಭಾವನೆಗಳಿಗೆ ಮನ್ನಣೆ ಕೊಡುವ ಸಲುವಾಗಿ ಮಾತೃಪಕ್ಷ ಸೂಕ್ತ ನಿರ್ಧಾರ …

Read More »

ಮಂಗಳೂರು: ಸಂವಿಧಾನ ಜಾಗೃತಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಮೂಲಕ ಎಲ್ಲಾ ಕಡೆ ಸಾರ್ವಜನಿಕರಿಗೆ ಸಂವಿಧಾನದ ಮಹತ್ವದ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆ ಅವರು ಜಂಟಿಯಾಗಿ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿದರು.ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಡಿ ವಿವಿಧ ತಂಡಗಳನ್ನು ರಚಿಸಿಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿನಾಟಕಗಳ ಮೂಲಕ …

Read More »

ಬಂಟ್ವಾಳ: ಬಸ್‌ ಟಯರ್ ಬ್ಲಾಸ್ಟ್‌- ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ಡಿಕ್ಕಿ..!

ಬಂಟ್ವಾಳ : ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾ ಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದು ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಬಂಟ್ವಾಳ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಎನ್.ಸಿ.ರೋಡ್ ಎಂಬಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ಧ ಕೆ‌ಎಸ್.ಆರ್.ಟಿಸಿ ಬಸ್ ನ ಟಯರ್ ಕಾವಳಮೂಡೂರು ಎನ್.ಸಿ.ರೋಡ್ ತಲುಪುತ್ತಿದ್ಧಂತೆ ಸ್ಪೋಟಗೊಂಡಿದೆ. ಟಯರ್ ಒಡೆದು ಹೋದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿ ನಿಲ್ಲಿಸಲಾಗಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ …

Read More »

ಕಾಪು : ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

ಕಾಪು : ಜ.30ರಿಂದ ಮೀನುಗಾರರೊಬ್ಬರು ನಾಪತ್ತೆಯಾಗಿರುವ ಘಟನೆ ಕಟಪಾಡಿ ಮಟ್ಟು ಗ್ರಾಮದ ದುಗ್ಗುಪಾಡಿ ಎಂಬಲ್ಲಿ ನಡೆದಿದೆ. ದುಗ್ಗುಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್(45) ನಾಪತ್ತೆಯಾದ ಮೀನುಗಾರ ಎಂದು ತಿಳಿದು ಬಂದಿದೆ.ದೋಣಿಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಮನೆಯ ಹತ್ತಿರದವರಲ್ಲಿ ಕಟಪಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

Job Alert: ‘ಭಾರತೀಯ ಸೇನೆ’ ಸೇರೋ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ‘381 ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ 381 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಭಾರತೀಯ ಸೇನೆ ಸೇರೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಹೌದು ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ರಾಷ್ಟ್ರ ಸೇವೆಗೆ ಸಿದ್ಧವಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ. ವಯೋಮಿತಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಟ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಟೆಕ್ ಮತ್ತು ನಾನ್ ಟೆಕ್ …

Read More »

You cannot copy content of this page.