ತಾಜಾ ಸುದ್ದಿ

ಹಿಂದೂಗಳನ್ನು ನಾಯಿಗಳಿಗೆ ಹೋಲಿಸಿದ್ದ ಮುಸ್ಲಿಂ ಬೋಧಕ ಅಝಾರಿ ಬಂಧನ

ಮುಂಬೈ : ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಗುಜರಾತ್‌ ಭಯೋತ್ಪಾದನೆ ನಿಗ್ರಹ ದಳದ ಅಧಿಕಾರಿಗಳು ಮುಂಬೈನಲ್ಲಿ ಇಸ್ಲಾಮಿಕ್‌ ಬೋಧಕ ಮುಫ್ತಿ ಸಲ್ಮಾನ್‌ ಅಝಾರಿ ಎಂಬುವರನ್ನು ಬಂಧಿಸಿದ್ದಾರೆ. ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂಗಳನ್ನು ನಾಯಿಗೆ ಹೋಲಿಸಿದ ಬಳಿಕ ವಿವಾದ ಉಂಟಾಗಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಟಿಎಸ್‌ ಅಧಿಕಾರಿಗಳು ಮುಫ್ತಿ ಸಲ್ಮಾನ್‌ ಅಝಾರಿ ಅವರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ. ಭಾನುವಾರ ಗುಜರಾತ್‌ ಎಟಿಎಸ್‌ ಅಧಿಕಾರಿಗಳು ಮುಫ್ತಿ ಸಲ್ಮಾನ್‌ ಅಝಾರಿಯನ್ನು ಬಂಧಿಸಿ, ಘಟ್ಕೋಪರ್‌ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಗುಜರಾತ್‌ನಲ್ಲಿ ಕೆಲ ದಿನಗಳ ಹಿಂದೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಅಝಾರಿ, …

Read More »

ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ – ಬಿಜೆಪಿ ಕಛೇರಿಗೆ ಬೀಗ ಜಡಿದ ಕಾರ್ಯಕರ್ತರು..!

ಸುಳ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸುಳ್ಯ ಮಂಡಲ ಅಧ್ಯಕ್ಷ ಪಟ್ಟ ಮತ್ತೆ ವೆಂಕಟ್ ವಳಲಂಬೆಗೆ ದೊರೆತಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದ್ದಿದೆ. ಈ ಹಿನ್ನೆಲೆಯಲ್ಲೆ ಬಿಜೆಪಿ ಕಛೇರಿಗೆನೇ ಕಾರ್ಯಕರ್ತರು ಬೀಗ ಜಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಮರು ನೇಮಕ ಮಾಡಲಾಗಿತ್ತು. ಹಾಲಿ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ವಿಧಾನ ಸಭಾ ಚುನಾವಣೆಯ ವೇಳೆ ಎಸ್. ಅಂಗಾರ ಅವರಿಗೆ ಟಿಕೆಟ್ ನಿರಾಕರಿಸಿದಕ್ಕೂ ಮೊದಲೇ ಅಸಮಾಧಾನ ಇದ್ದ ಬಿಜೆಪಿಯ ಕಾರ್ಯಕರ್ತರು ಪಕ್ಷದ …

Read More »

ಪಾನ್‌ ಮಸಾಲ, ಗುಟ್ಕಾ, ತಂಬಾಕು ಮಾರಾಟಗಾರರಿಗೆ ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ : ನಿಯಮ ಉಲ್ಲಂಘಿಸಿದರೆ 1 ಲಕ್ಷ ರೂಪಾಯಿ ದಂಡ

ಹೊಸದಿಲ್ಲಿ: ಪಾನ್‌ ಮಸಾಲ, ಗುಟ್ಕಾ ಮತ್ತು ತಂಬಾಕು ಉತ್ಪನ್ನಗಳನ್ನು ಪ್ಯಾಕಿಂಗ್ ಮಾಡಿ ಮಾರಾಟ ಮಾಡುವವರಿಗೆ ಕೇಂದ್ರ ಸರಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ತಂಬಾಕು ಉತ್ಪನ್ನಗಳ ಉತ್ಪಾದಕರು ಪ್ಯಾಕಿಂಗ್ ಮಷಿನ್ ಗಳನ್ನು ಜಿಎಸ್‌ಟಿ ಪ್ರಾಧಿಕಾರಗಳ ಬಳಿ ಕಡ್ಡಾಯವಾಗಿ ನೋಂದಣಿ ಮಾಡಬೇಕು. ಇಲ್ಲದಿದ್ದರೆ 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ ಎಂಬ ನಿಯಮವನ್ನು ಜಾರಿಗೆ ತಂದಿದೆ. ತಂಬಾಕು ಉತ್ಪನ್ನಗಳಲ್ಲಿ ಆದಾಯ ಸೋರಿಕೆ ತಡೆಯುವ ಉದ್ದೇಶದಿಂದ ಈ ನಿಯಮ ಜಾರಿಗೆ ತರಲಾಗಿದೆ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಸಂಜಯ್ ಮಲ್ಲೋತ್ರಾ ಮಾಹಿತಿ ನೀಡಿದ್ದಾರೆ. ಪಾನ್ ಮಸಾಲಾ ಗುಟ್ಕಾ …

Read More »

ರಸ್ತೆ ಅಪಘಾತ; ಗಗನ ಸಖಿ ಮೃತ್ಯು..!

ಬೆಳಗಾವಿ: ಬೆಳಗಾವಿಯಲ್ಲಿ ನಡೆದ  ಭೀಕರ ರಸ್ತೆ ಅಪಘಾತದಲ್ಲಿ ಗಗನ ಸಖೀ ಯೋರ್ವಳು ದಾರುಣ ಅಂತ್ಯ ಕಂಡಿದ್ದಾಳೆ.ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.  ಮೃತರನ್ನು ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಎಂದು ಗುರುತ್ತಿಸಲಾಗಿದೆ. ದುರ್ಘಟನೆಯಲ್ಲಿ ರೀತು ಪಾಟೀಲ ಎಂಬ ಯುವತಿ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕಾರಿನಲ್ಲಿ ಐದು ಜನ‌ ಬೆಳಗಾವಿ ಏರ್​ಪೋರ್ಟ್ನಿಂದ  ಉದ್ಯೋಗಿಗಳು ಪ್ರಯಾಣ ಬೆಳೆಸಿದ್ದರು. ಊಟ ಮುಗಿಸಿ ಮನೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ …

Read More »

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ : ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ

ಮಂಗಳೂರು: ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಶೇಷ ಮಕ್ಕಳ ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್‌ ರಾವ್‌ ಅವರನ್ನು 2023ರ ಜೂನ್‌ 16ರಂದು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ …

Read More »

ಬೆಳ್ತಂಗಡಿ : ನಿಗೂಢ ಕೆಲಸಕ್ಕೆಂದು ಬೆಂಗಳೂರಿಗೆ ಹೊರಟಿದ್ದ ಯುವಕರ ಗುಂಪು ಅರೆಸ್ಟ್..!

ಬೆಳ್ತಂಗಡಿ :  ಕೆಲಸವನ್ನು ಹುಡುಕಿಕೊಂಡು ದಕ್ಷಿಣ ಕನ್ನಡದ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ಗುಂಪನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಿಗೂಢ ಕೆಲಸಕ್ಕೆಂದು ಯುವಕರ ತಂಡ ಬೆಂಗಳೂರಿಗೆ ಹೊರಟಿತ್ತು. ಯುವಕರ ನಡೆ ಬಗ್ಗೆ ಅನುಮಾನ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸರು ಯುವಕರ ಗುಂಪನ್ನು ಬಂಧಿಸಿದ್ದಾರೆ.   ಬಂಧಿತ ಯುವಕರನ್ನು ವಿಚಾರಣೆ ನಡೆಸಿದ ಪೊಲೀಸರಿಗೆ ಅಕ್ರಮ ಸಿಮ್ ಕಾರ್ಡ್ ಸಾಗಾಟ ಮಾಡುತ್ತಿರುವ ಬಗ್ಗೆ ಬಯಲಿಗೆ ಬಂದಿದೆ. ಐದು ಯುವಕರು 42 ಅಕ್ರಮ ಸಿಮ್ ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದರು. ದಕ್ಷಿಣ ಕನ್ನಡದ …

Read More »

ಕಲ್ಲಡ್ಕ: ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಕಸಾಯಿಖಾನೆಗೆ ಪೊಲೀಸ್‌ ದಾಳಿ- ಇಬ್ಬರ ಬಂಧನ

ಕಲ್ಲಡ್ಕ: ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದ ಆರೋಪಿಗಳನ್ನು ಮತ್ತು ಗೋಮಾಂಸವನ್ನು ಬಿ.ಸಿ ರೋಡ್ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, 1 ಆಟೋ ರಿಕ್ಷಾ ಮತ್ತು ಎರಡು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದಲ್ಲಿ ಪೊಲೀಸರಿಗೆ ಸೆರೆ ಸಿಕ್ಕ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು …

Read More »

ಬೆಳ್ತಂಗಡಿ: ಕುಕ್ಕೇಡಿ ಸ್ಫೋಟ ಪ್ರಕರಣ- ಹಲವು ಆಯಾಮಗಳಲ್ಲಿ ವಿಚಾರಣೆ

ಬೆಳ್ತಂಗಡಿ: ವೇಣೂರಿನ ಸಮೀಪದ ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯ ಕಡ್ತಾರು ಎಂಬಲ್ಲಿ ಸುಡುಮದ್ದು ಘಟಕದಲ್ಲಿ ಉಂಟಾದ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಿಬ್ಬರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಯಿಂದ ಮೂವರು ಕಾರ್ಮಿಕರು ಸಾವಿಗೀಡಾಗಿದ್ದರು. ಈಗಾಗಲೆ ಅವರ ಮೃತದೇಹ ಡಿಎನ್‌ಎ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ಬಂದ ಬಳಿಕ ಕುಟುಂಬಕ್ಕೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಉಳಿದಂತೆ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಇತರ ಇಲಾಖೆಗಳಿಂದ ಸ್ಥಳದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಬಂಧಿತರಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದ ಘಟಕದ ಮಾಲಕ ಸೈಯದ್‌ ಬಶೀರ್‌ ಹಾಗೂ ಘಟಕಕ್ಕೆ ಕಾರ್ಮಿಕರನ್ನು …

Read More »

ಉಪ್ಪಿನಂಗಡಿ:ನಕಲಿ ಚಿನ್ನಾಭರಣ ಅಡಮಾನವಿರಿಸಿ ಸಾಲ ಪಡೆದು ವಂಚನೆ – ದೂರು

ಉಪ್ಪಿನಂಗಡಿ: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಮಹಿಳಾ ಸಹಕಾರಿ ಸಂಘದಿಂದ ಹಣವನ್ನು ಸಾಲವಾಗಿ ಪಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕಿ ಚೈತನ್ಯಾ ಸಿ.ಎಚ್. ಎಂಬವರು ಈ ಬಗ್ಗೆ ದೂರು ನೀಡಿದ್ದು, ಜ.27ರಂದು ಮಧ್ಯಾಹ್ನ ಆರೋಪಿಗಳಾದ ನೆಲ್ಯಾಡಿ ಗ್ರಾಮದ ಸೆಬಾಸ್ಟಿಯನ್ ಮತ್ತು ಡಾನಿಶ್ ಎಂಬವರು ಸಂಘಕ್ಕೆ ಬಂದಿದ್ದು, ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಾರದಂತಹ ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, ಸಂಘದಿಂದ 1.40 ಲಕ್ಷ ರೂ.ವನ್ನು ಸಾಲವಾಗಿ ಪಡೆದು …

Read More »

ಉಡುಪಿ ವಿಶಾಲ ಗಾಣಿಗ ಕೊಲೆ ಪ್ರಕರಣದ 4 ನೇ ಆರೋಪಿ ಉತ್ತರ ಪ್ರದೇಶದಲ್ಲಿ ಅರೆಸ್ಟ್..!

ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಮಿಲನ ರೆಸಿಡೆನ್ಸಿ ಫ್ಲ್ಯಾಟ್‌ನಲ್ಲಿ  ಮೂರು ವರ್ಷಗಳ ಹಿಂದೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಉತ್ತರ ಪ್ರದೇಶದ ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಗೋರಖ್ ಪುರ ನಿವಾಸಿ ಧರ್ಮೇಂದ್ರ ಕುಮಾರ್ ಸುಹಾನಿ (40) ಬಂಧಿತ ಆರೋಪಿ. ಈ ಹಿಂದೆ ಪ್ರಕರಣದ ಆರೋಪಿಗಳಾದ ವಿಶಾಲ ಗಾಣಿಗರ ಪತಿ ರಾಮಕೃಷ್ಣ ಗಾಣಿಗ ಹಾಗೂ ಸುಪಾರಿ ಕಿಲ್ಲರ್‌ಗಳಾದ ಗೋರಖ್ ಪುರದ ಸ್ವಾಮಿನಾಥನ್ ನಿಶಾದ್ ಮತ್ತು ರೋಹಿತ್ …

Read More »

You cannot copy content of this page.