ತಾಜಾ ಸುದ್ದಿ

ಅನಾಥ ಯುವತಿಗೆ ಧಾರೆಯೆರೆದ ಉಡುಪಿ ಜಿಲ್ಲಾಧಿಕಾರಿ..!

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯಾದ ಚಿ.ಸೌ.ಖುಷ್ಬು ಸುಮೇರಾ ಅವರ ವಿವಾಹವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿನೇಶ ಎ.ಪಿ ಅಂಬುತೀರ್ಥ ಅವರ ಮಗನಾದ ಮಧುರಾಜ್ ಎ.ಡಿ ಅವರೊಂದಿಗೆ ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ವಾದ್ಯ, ತಾಳ- ಮೇಳಗಳೊಂದಿಗೆ ನಡೆದ ಶುಭಲಗ್ನ ಸುಮುಹೂರ್ತದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶಾಸ್ತ್ರೋಸ್ತ್ರವಾಗಿ ಧಾರೆ ಎರೆದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ತೀರ್ಥಹಳ್ಳಿಯ ಮೂಲದ 29 ವರ್ಷ …

Read More »

ಬಂಟ್ವಾಳ: ಟ್ರಯಲ್ ನೋಡಲೆಂದು ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋದ ವ್ಯಕ್ತಿ ಪರಾರಿ

ಬಂಟ್ವಾಳ:   ಪಾಣೆಮಂಗಳೂರಿನಲ್ಲಿ ಬೈಕ್ ಮಾರಾಟ ಅಂಗಡಿಯಿಂದ ಟ್ರಯಲ್ ನೋಡಲೆಂದು ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋದ ವ್ಯಕ್ತಿಯೊಬ್ಬ ಹಿಂದಿರುಗದೆ ಪರಾರಿಯಾಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪುದು ಗ್ರಾಮದ ನಿವಾಸಿ ಮಹಮ್ಮದ್ ಶಮೀರ್ ಬಿನ್ ಉಮರಬ್ಬ ಅವರು ಪೊಲೀಸರಿಗೆ ದೂರು ನೀಡಿದ್ದು, ಇವರು ಮೆಲ್ಕಾರ್- ಪಾಣೆಮಂಗಳೂರಿನಲ್ಲಿ ಬೈಕ್‌ ಪಾಯಿಂಟ್ ಎಂಬ ಹೆಸರಿನ ಅಂಗಡಿಯನ್ನು ಹೊಂದಿದ್ದು, ಸುಮಾರು 2 ವರ್ಷಗಳಿಂದ ಬೇರೆಯವರಿಂದ ವಾಹನಗಳನ್ನು ಖರೀದಿಸಿ ಮಾರಾಟ ಮಾಡುವ ವ್ಯವಹಾರ ಮಾಡುತ್ತಿದ್ದಾರೆ. ಇವರು 2 ತಿಂಗಳ ಹಿಂದೆ ಕೆಎ70 …

Read More »

ಕಾರ್ಕಳದಲ್ಲಿ ಗ್ಯಾಂಗ್ ರೇಪ್ : ತುಳುನಾಡ ತುಡರ್ ಕೀರ್ತಿ ಕಾರ್ಕಳ ಅಸಮಾಧಾನ.

ಶಾಂತಿಪ್ರಿಯರಿಗೆ ಹೆಸರುವಾದಂತಹ ಕಾರ್ಕಳದ ಊರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಆದಂತಹ ಘಟನೆ ತುಂಬಾ ಬೇಸರದ ಸಂಗತಿಯಾಗಿದೆ. ಕಾರ್ಕಳ. ಬೋವಿ ಸಮುದಾಯದ ಯುವತಿಗೆ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯ ಅತ್ಯಂತ ಖಂಡನೀಯ. ಇದುವರೆಗೆ ಬೇರೆ ಊರಿನಲ್ಲಿ ನಡೆಯುತ್ತಿರುವಂತಹ ಅತ್ಯಾಚಾರ ಪ್ರಕರಣ ಇದೀಗ ಕಾರ್ಕಳಕ್ಕೂ ಪ್ರಸರಿಸಿದೆ. ಇದೊಂದು ಪೂರ್ವಯೋಜಿತ ಕೃತ್ಯ ಎಂದು ತಿಳಿದು ಬರುತ್ತದೆ. ಈ ಕೃತ್ಯದ ಹಿಂದೆ ಯಾರೆಲ್ಲ ಭಾಗಿಯಾಗಿದ್ದಾರೆ ಅವರನ್ನು ಅತಿ ಶೀಘ್ರದಲ್ಲಿ ಬಂಧಿಸಬೇಕು.ಇದರ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ಅಪರಾಧಿಗಳನ್ನು ಅತಿ ಶೀಘ್ರದಲ್ಲಿ ಬಂಧಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ. …

Read More »

ಕಾರ್ಕಳ: ಅನ್ಯಕೋಮಿನ ಮೂವರು ಯುವಕರಿಂದ ಹಿಂದೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..!

ಕಾರ್ಕಳ: ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿ. ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಸಂತ್ರಸ್ತೆ ಯುವತಿ ಕುಕ್ಕುಂದೂರಿನ ಅಯ್ಯಪ್ಪ ನಗರದ ನಿವಾಸಿ. ಮನೆಯ ಪಕ್ಕದ ರಂಗನಪಲ್ಕೆ ಎಂಬ ಸ್ಥಳಕ್ಕೆ ಕರೆದೊಯ್ದು ಹಾಡಿಯಲ್ಲಿ ಕೃತ್ಯ ಎಸಗಲಾಗಿದೆ …

Read More »

ಉಡುಪಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಫ್ಯಾನ್ಸಿ ಸ್ಟೋರ್ ಭಸ್ಮ!

ಕುಂದಾಪುರ: ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ಪ್ಲಾಜಾ ಗ್ರೋ ಕಾಂಪ್ಲೆಕ್ಸ್ ನಲ್ಲಿರುವ ಫ್ಯಾನ್ಸಿ ಸ್ಟೋರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಪ್ರತಿಭಾ ವಿಜೇಂದ್ರ ಅರೆಹೊಳೆ ಎಂಬವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ಐಟಂಗಳು, ಸುಮಾರು 5000 ಹಣ ಇತ್ತು. ಅಂಗಡಿ ಮಾಲಕಿ ಪ್ರತಿಭಾ ವಿಜೇಂದ್ರ ಅವರು ಮಧ್ಯಾಹ್ನ 12.00ರ ವರೆಗೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, …

Read More »

ಕಾಪು: ಸೈಬರ್‌ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಸಾಫ್ಟ್ ವೇರ್‌ ಎಂಜಿನಿಯರ್‌ ಯುವತಿಗೆ 4.80 ಲಕ್ಷ ರೂ. ವಂಚನೆ

ಕಾಪು: ಸಾಫ್ಟ್ ವೇರ್‌ ಎಂಜಿನಿಯರ್‌ ಯುವತಿಗೆ ಮುಂಬಯಿ ಸೈಬರ್‌ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಆಕೆಯ ಖಾತೆಯಿಂದ 4.80 ಲಕ್ಷ ರೂ. ನಗದು ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಘಟನೆ ಸಂಭವಿಸಿದೆ. ಕಾಪು ಕೊಪ್ಪಲಂಗಡಿ ನಿವಾಸಿಯಾಗಿರುವ ಯುವತಿ ಹಣ ಕಳೆದುಕೊಂಡವರು.ಮಂಗಳೂರಿನ ಕಂಪೆನಿಯೊಂದರಲ್ಲಿ ಇವರು ಕೆಲಸ ಮಾಡುತ್ತಿದ್ದಾರೆ. ಆಕೆ ಕರ್ತವ್ಯದಲ್ಲಿರುವಾಗ 9259996764 ನಂಬರ್‌ನಿಂದ ಮುಂಬಯಿ ಸೈಬರ್‌ ಪೊಲೀಸರ ಹೆಸರಿನಲ್ಲಿ ಮಹಿಳೆಯೊಬ್ಬರು ಕರೆ ಮಾಡಿ ನಿಮ್ಮ ಹೆಸರಿನಲ್ಲಿ ಬಂದಿರುವ ಕೊರಿಯರ್‌ನಲ್ಲಿ ನಿಷೇಧಿತ ಡ್ರಗ್ಸ್‌ ಇರುವುದಾಗಿ ತಿಳಿಸಿ, ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು. ಅನಂತರ ಮತ್ತೋರ್ವರಿಗೆ …

Read More »

ಕೋಟ: ಬೆಳ್ಳಂಬೆಳಿಗ್ಗೆ ವಿವಾಹಿತ ಮಹಿಳೆಯ ಕೊಲೆ – ಪತಿಯಿಂದಲೇ ಕೃತ್ಯ ಶಂಕೆ

ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು ಇವರು ಕೊಪ್ಪಳ ಮೂಲದವರಾಗಿದ್ದಾರೆ. 8 ತಿಂಗಳ ಹಿಂದೆಯಷ್ಟೇ ಮದುವೆಯಾಗಿ ಕಾರ್ಕಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಎಂದು ತಿಳಿದು ಬಂದಿದೆ. ಶಂಕೆಯ ಮೇರೆಗೆ ಮೃತಳ ಪತಿ ಕಿರಣ್ ಉಪಾಧ್ಯ …

Read More »

ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ

ಪುತ್ತೂರು: ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು. ವಿದ್ಯಾರ್ಥಿನಿಯನ್ನು ಸಂಸ್ಥೆಯಿಂದ ವಜಾಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಪಿ ಎಂದು ಬಾಲಕನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ. ಪುತ್ತೂರು ಕಾಲೇಜಿನ ವಿದ್ಯಾರ್ಥಿಗಳು ಸಭೆ ನಡೆಸಿದ್ದು, ಕೊಂಬೆಟ್ಟು ಸರ್ಕಾರಿ ಪಿಯು …

Read More »

ಉಡುಪಿ: ಆನ್ ಲೈನ್ ಟ್ರೇಡಿಂಗ್ ವಂಚನೆ- ಪುತ್ತೂರು ಮೂಲದ ಮುಸ್ತಫಾ ಸಹಿತ ನಾಲ್ವರ ಬಂಧನ

ಉಡುಪಿ: ಆನ್‌ಲೈನ್‌  ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪೇಂದ್ರ ಭಟ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್‌ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್‌ ಗೆ ಸೇರಿಸಿದ್ದು, ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್‌ ನೀಡಿದ್ದಾರೆ. ವಾಟ್ಸ್ಯಾಪ್‌ ನಲ್ಲಿ ಟ್ರೇಡಿಂಗ್  ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ …

Read More »

ಮಂಗಳೂರು ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಮಯದಲ್ಲಿ ಆದಲು – ಬದಲು ಆರೋಪ – ದೂರು ದಾಖಲು

ಮಂಗಳೂರು: ನವಜಾತ ಶಿಶುವಿನ ಹೆರಿಗೆ ಸಂದರ್ಭದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ಲೇಡಿ ಗೊಸ್ಚೆನ್ ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಮಗುವಿನ ತಾಯಿಯ ಚಿಕ್ಕಪ್ಪ ನೀಡಿದ ದೂರಿನ ಪ್ರಕಾರ, ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಅವರ ತಂಗಿಯನ್ನು ಆಗಸ್ಟ್ 17 ರಂದು ರಾತ್ರಿ ಲೇಡಿ ಗೊಸ್ಚೆನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರು ಆಗಸ್ಟ್ 18 ರಂದು ಬೆಳಿಗ್ಗೆ 10:30 ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. .ಆರಂಭದಲ್ಲಿ ಮಗು ಆರೋಗ್ಯವಾಗಿದೆ ಎಂದು ವೈದ್ಯರು ಕುಟುಂಬಕ್ಕೆ …

Read More »

You cannot copy content of this page.