ತಾಜಾ ಸುದ್ದಿ

ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ..!

ಉಡುಪಿ: ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡವೊಂದು ಚೂರಿ ಇಂದ ಇರಿದ ಘಟನೆ ಬನ್ನಂಜೆಯಲ್ಲಿ ನಡೆದಿದೆ. ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಈ ಕಾರಣಕ್ಕೆ ಈ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.ಜೆಎಮ್‌ಟಿ ಬಸ್‌ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ರಾತ್ರಿ ಮೂವರಿದ್ದ ತಂಡವು ಈ …

Read More »

ಮಂಗಳೂರು ಸಿಸಿಬಿ ಮಿಂಚಿನ ಕಾರ್ಯಾಚರಣೆ, ಆಟೋದಲ್ಲಿ MDMA ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ @ ತೌಚಿ(23) ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ. ಜನವರಿ 18 ರಂದು ನಗರದ ಪಳ್ನೀರ್ ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು …

Read More »

‘ರಾಮ ಮಂದಿರ’ದ ಬಗ್ಗೆ ಟೀಕಿಸುತ್ತಿದ್ದಾಗಲೇ ಕುಸಿದ ಬೃಹತ್ ವೇದಿಕೆ : ಹಲವು ಮುಖಂಡರಿಗೆ ಗಾಯ

ಬಿಹಾರದ ದಿಹುರಿ ಗ್ರಾಮದಲ್ಲಿ ಅಯೋಧ್ಯೆಯ ರಾಮ ದೇವಾಲಯದ ‘ಪ್ರಾಣ್ ಪ್ರತಿಷ್ಠೆ’ಯನ್ನು ಸ್ಪೀಕರ್ ಒಬ್ಬರು ಟೀಕಿಸಲು ಪ್ರಾರಂಭಿಸಿದಾಗಲೇ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯು ಶುಕ್ರವಾರ ಇದ್ದಕ್ಕಿದ್ದಂತೆ ಕುಸಿದುಬಿದ್ದು ಹಲವರು ಗಾಯಗೊಂಡ ಘಟನೆ ನಡೆದಿದೆ.   ಗಯಾದಲ್ಲಿ ಪಸ್ಮಾಂಡ ದರ್ಶಿತ್ ಮಹಾಸಂಗನದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖಂಡರು ಸ್ವಾತಂತ್ರ್ಯ ಹೋರಾಟಗಾರ ಅಬ್ದುಲ್ ಕ್ವಾಮ್ ಅನ್ಸಾರಿ ಅವರ 51ನೇ ಪುಣ್ಯಸ್ಮರಣೆಯನ್ನೂ ಆಚರಿಸಿದರು. ಮಹಾಸಂಗನ ಕಾರ್ಯಕ್ರಮಕ್ಕೆ ಸಂಘಟಕರು ದೊಡ್ಡ ವೇದಿಕೆ ಸಜ್ಜುಗೊಳಿಸಿದ್ದರು. ಸಭೆಯಲ್ಲಿ ಮಾಜಿ ಸಂಸದ ಅಲಿ ಅನ್ವರ್ ಕೂಡ ಒಬ್ಬರು. ಆರಂಭದಲ್ಲಿ, ಕಾರ್ಯಕ್ರಮವು ಸುಗಮವಾಗಿ ನಡೆಯುತ್ತಿತ್ತು, ಆದರೆ, …

Read More »

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರು ವಶಕ್ಕೆ

ಮಂಗಳೂರು : ಕದ್ರಿ ಪಾರ್ಕ್ ಗೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ಇಂದು ಬೆಳಗ್ಗೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಕದ್ರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಪ್ರಾಪ್ತ ಸೇರಿದಂತೆ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳಾದ ಬಂಟ್ವಾಳ ನಿವಾಸಿಗಳಾದ ನಿತಿನ್ ಹರ್ಷ ಸೇರಿದಂತೆ ಪೆರ್ಮುದೆಯ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕನೊಬ್ಬನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತೂರಿನ ಕಾಲೇಜಿನಲ್ಲಿ ಜರ್ನಲಿಸಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಅಖಿಲ್ ಚಾಕೋ ಹಾಗೂ ದೇರಳಕಟ್ಟೆಯ ಕಾಲೇಜೊಂದರಲ್ಲಿ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ತಂಡವೊಂದು ನೈತಿಕ ಪೊಲೀಸ್ ಗಿರಿ …

Read More »

ಬೆಳ್ತಂಗಡಿ: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿ ಅವಾಂತರ- ಉರುಳಿದ ಕಂಬ

ಬೆಳ್ತಂಗಡಿ: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿಯೊಂದು ವಿದ್ಯುತ್‌ ತಂತಿಗಳಿಗೆ ಸಿಲುಕಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎನ್ನುವಲ್ಲಿ ಬುಧವಾರ ತಡರಾತ್ರಿ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ಲಾರಿಯ ಚಾಲಕ ಮೇಲ್ಭಾಗದಲ್ಲಿದ್ದ ವಿದ್ಯುತ್‌ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದೆ ಸಾಗಿದ್ದಾನೆ. ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದವು. ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು. ಕಾರ್ಕಳದ ಗುತ್ತಿಗೆ ಕಂಪೆನಿಯೊಂದರ ಲಾರಿಯಾಗಿದ್ದು, ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ. ಚಾಲಕ …

Read More »

ಅಯೋಧ್ಯಾ ರಾಮಮಂದಿರ ಉದ್ಘಾಟನೆ ಹೆಸರಿನಲ್ಲಿ ನಿಮ್ಮ ಮೊಬೈಲ್‌ಗೆ ಈ ಸಂದೇಶ ಬಂದ್ರೆ ಹುಷಾರ್..! click👉

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿವೆ ಮತ್ತು ಪರಿಸ್ಥಿತಿಯ ಲಾಭವನ್ನು ಪಡೆಯಲು, ಹ್ಯಾಕರ್ಗಳು ಬಲೆಗಳನ್ನು ಹಾಕಲು ಪ್ರಾರಂಭಿಸಿದ್ದಾರೆ. ರಾಮ ಮಂದಿರದಲ್ಲಿ ಉಚಿತ ವಿಐಪಿ ಪ್ರವೇಶದ ಭರವಸೆ ನೀಡಿ ವಂಚಕರು ವಾಟ್ಸಾಪ್ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ಹಲವಾರು ಬಳಕೆದಾರರು ವರದಿ ಮಾಡಿದ್ದಾರೆ. ಹಲವು ಮಾಧ್ಯಮಗಳ ವರದಿಯ ಪ್ರಕಾರ, ಜನವರಿ 22 ರಂದು ರಾಮ ಮಂದಿರಕ್ಕೆ ವಿಐಪಿ ಪ್ರವೇಶವನ್ನು ನೀಡುವ ನಕಲಿ ವಾಟ್ಸಾಪ್ ಸಂದೇಶವು ಬಳಕೆದಾರರಿಗೆ ಎಪಿಕೆ ಫೈಲ್ ಅನ್ನು ಡೌನ್ಲೋಡ್ ಮಾಡಲು ಕೇಳುತ್ತದೆ, ಅದು ಸಾಧನದಲ್ಲಿ ಸ್ಪೈವೇರ್ ಅಥವಾ …

Read More »

ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಉಡುಪಿ, ಜ. 19: ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ಕೊಡವೂರಿನ ಉಡುಪರತ್ನ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಚತುರ್ಥ ವಿಶ್ವಗೀತಾ ಪರ್ಯಾಯದ ಅಂಗವಾಗಿ “ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ “ಛಾಯಾಚಿತ್ರ ಪ್ರದರ್ಶನವನ್ನು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ದಲ್ಲಿ ಜ. 18 ರಂದು ಉದ್ಘಾಟನೆಗೊಂಡಿತು . ಜಪಾನಿನ ರಿಸ್ಸೋ ಕೊಸೈ ಕೋಯ್ ಸಂಸ್ಥೆಯ ನಿಯೋಜಿತ ಅಧ್ಯಕ್ಷೆ ರೆ. ಕೋಶೊ ನಿವಾನೋ ಪ್ರದರ್ಶನವನ್ನು ಉದ್ಘಾಟಿಸಿದರು. ಆಸ್ಟ್ರೇಲಿಯಾ, ವಿಕ್ಟೋರಿಯಾದ ಮಾಜಿ ಸಚಿವ, ಲ್ಯೂಕ್ ಡನೆಲನ್ , ಮಣಿಪಾಲ …

Read More »

ಬೆಳ್ತಂಗಡಿ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಅಕ್ರಮ ದನ ಸಾಗಾಟ ಪ್ರಕರಣದ ಆರೋಪಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಹೈಯರ್ ನಗರ ನಿವಾಸಿ ವಾಜೀದ್ ಪಾಷಾ(54) ಬಂಧಿತ ಆರೋಪಿ. ವಾಜೀದ್ ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ಸುಮಾರು 8 ವರ್ಷದಿಂದ ತಲೆಮರೆಸಿಕೊಂಡು ಬೇರೆ ಕಡೆ ವ್ಯಾಪಾರ ಮಾಡಿಕೊಂಡಿದ್ದ. ಈತನನ್ನು ಹಾಸನ ಹೊಳೆನರಸೀಪುರದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಕೋರ್ಟ್ ಈತನಿಗೆ ದಂಡ ವಿಧಿಸಿದೆ.

Read More »

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಕಾಲುಜಾರಿ ಬಿದ್ದು ಬಾಲಕ ಮೃತ್ಯು..!

ಬಂಟ್ವಾಳ: ಬಾಲಕನೋರ್ವನು ಕಾಲುಜಾರಿ ನೇತ್ರಾವತಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರೊಂದಿಗೆ ನದಿಯ ಬದಿಗೆ ಪ್ರಜ್ವಲ್ ನಾಯಕ್ ಹೋಗಿದ್ದ‌. ಈ ವೇಳೆ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿದ್ದರೂ ಅದಾಗಲೇ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಕೆರೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಶವವಾಗಿ ಪತ್ತೆ..!

ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವವಾಗಿ ಪತ್ತೆಯಾಗಿದ್ದು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ಮೂವರು ಶವವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದ್ದು, ಮೃತ ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ತಿಳಿದುಬಂದಿದೆ. ಮಕ್ಕಳನ್ನು 4 ವರ್ಷದ ಮಗಳು ಪೂರ್ವಿತಾ ಎಂದು ಗುರುತಿಸಲಾಗಿದ್ದು, ಒಂದೂವರೆ …

Read More »

You cannot copy content of this page.