ತಾಜಾ ಸುದ್ದಿ

ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದಿಗೆ ಕನ್ನ…!

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತವಾಗಿದ್ದು, ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಇನ್ನೊಂದು ಮನೆಯ ಬೀಗ‌ ಮುರಿಯುವ ವೇಳೆ ಆಟೋ ರಿಕ್ಷಾ ಬರುತ್ತಿರುವುದನ್ನು ನೋಡಿದ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ …

Read More »

BIGG NEWS: ಕ್ಯಾನ್ಸರ್‌, ಜ್ವರ ಸೇರಿ ಅಗತ್ಯ 19 ಔಷಧಗಳ ಬೆಲೆ ಇಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸರ್ಕಾರದ ಔಷಧೀಯ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್ಪಿಪಿಎ) ಜನವರಿ 1, 2024 ರಿಂದ ಜಾರಿಗೆ ಬರುವಂತೆ 19 ಔಷಧಿಗಳ ಚಿಲ್ಲರೆ ಬೆಲೆಗಳನ್ನು ನಿಗದಿಪಡಿಸಿದೆ. ಜ್ವರ, ನೋವು ಮತ್ತು ಸೋಂಕುಗಳಿಗೆ ಚಿಕಿತ್ಸೆ ನೀಡಲು ಬಳಸುವ ಔಷಧಿಗಳು ಸೇರಿದಂತೆ ಔಷಧಿಗಳ ಹೊಸ ದರಗಳು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಯನ್ನು ಹೊರಗಿಡುತ್ತವೆ ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.   ಟ್ರಾಸ್ಟುಜುಮಾಬ್ ಅನ್ನು ಸ್ತನ ಮತ್ತು ಹೊಟ್ಟೆಯ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಹೆಟೆರೊ ಬಯೋಫಾರ್ಮಾ ಲಿಮಿಟೆಡ್ ಮತ್ತು ಮ್ಯಾನ್ಕೈಂಡ್ ಫಾರ್ಮಾ …

Read More »

ಉಡುಪಿ: ರಿಕ್ಷಾ ಚಾಲಕನಿಗೆ ಹಾರ್ಟ್ಅಟ್ಯಾಕ್ – ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋ

ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದು ಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದರೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. …

Read More »

‘ಡ್ರೋನ್ ಪ್ರತಾಪ್’ ಆತ್ಮಹತ್ಯೆಗೆ ಯತ್ನ ವದಂತಿಗೆ ತೆರೆ : ಸ್ಪಷ್ಟನೆ ನೀಡಿದ ವೈದ್ಯರು ಹೇಳಿದ್ದೇನು?

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್’ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಸಂಜೀವಿನಿ ಆಸ್ಪತ್ರೆಯ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ‘ಪ್ರತಾಪ್ ಅವರಿಗೆ ವಾಂತಿ ಮತ್ತು ಬೇಧಿ ಆಗಿತ್ತು. ಅವರಿಗೆ ಫುಡ್ ಪಾಯ್ಸನ್ ಆಗಿತ್ತು, ಸರಿಯಾಗಿ ಊಟ ಮಾಡದೇ ಇರುವುದರಿಂದ ಈ ರೀತಿ ಆಗಿದೆ ಎಂದಿದ್ದಾರೆ. ಅವರಿಗೆ ಎಲ್ಲಾ ರೀತಿಯ ಪರೀಕ್ಷೆ ಮಾಡಲಾಗಿದೆ, ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಸಂಜೀವಿನಿ ಆಸ್ಪತ್ರೆಯ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಹಲವು ಮಂದಿ ಪ್ರತಾಪ್ ಅವರು …

Read More »

ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ ಯಾಕೆ ಗೊತ್ತಾ?

ಮೆಟಾ ಒಡೆತನದ ವಾಟ್ಸ್​ಆ್ಯಪ್ ಕಳೆದ ನವೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕಳೆದ ವರ್ಷ ನವೆಂಬರ್ 1 ಮತ್ತು ನವೆಂಬರ್ 30 ರ ನಡುವೆ 71,96,000 ಖಾತೆಗಳನ್ನು ನಿಷೇಧಿಸಲಾಗಿದ್ದು, ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರಿಂದ ಸ್ವೀಕರಿಸಿದ 8,000 ಕ್ಕೂ ಹೆಚ್ಚು ಕುಂದುಕೊರತೆಗಳ ಮೇಲೆ ಈ ಖಾತೆಗಳನ್ನು ನಿಷೇಧಿಸುವ ನಿರ್ಧಾರವನ್ನು ವಾಟ್ಸ್​ಆ್ಯಪ್ ತೆಗೆದುಕೊಂಡಿದೆ. ಇನ್ನು ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ …

Read More »

ಸಿನಿಮೀಯ ಮಾದರಿಯಲ್ಲಿ ಕಾರಲ್ಲೇ ಮದುವೆಯಾದ ಪ್ರೇಮಿಗಳು..!

ಪೋಷಕರ ವಿರೋಧದ ನಡುವೆಯೂ ಇಬ್ಬರು ಪ್ರೇಮಿಗಳು ಕಾರಿನಲ್ಲಿ ಸಿನಿಮೀಯ ಮಾದರಿಯಲ್ಲಿ ಮದುವೆ ಮಾಡಿಕೊಂಡಿರುವ ಘಟನೆ  ಬಳ್ಳಾರಿಯಲ್ಲಿ ನಡೆದಿದೆ. ಆಗಾಗೆ ತೆಕ್ಕಲಕೋಟೆಯ ಸೋದರ ಮಾವನ ಮನೆಗೆ ರಜೆ ದಿನಗಳಲ್ಲಿ ಬರುತ್ತಿದ್ದಾ ಅಮೃತ, ಮಾವನ ಮನೆಯಲ್ಲಿ ಹಲವಾರು ದಿನಗಳು ಇರುತ್ತಿದ್ದಳು. 2017 ರಲ್ಲಿ ಯಾವುದೋ ಕಾರ್ಯಕ್ರಮದಲ್ಲಿ ಅಧ್ಯಾವಾಗ ಶಿವಪ್ರಸಾದ್ ಎನ್ನು ಯುವಕ ಆ ಹುಡಿಗಿಯನ್ನು ನೋಡಿದ್ದಾನೋ, ಆಗ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಆಗಾ ಪ್ರಾರಂಭವಾದ ಪ್ರೀತಿ ಮುಂದುವರೆದು ಮದುವೆ ಮಾಡಿಕೊಳ್ಳವ ಹಂತಕ್ಕೆ ಬಂದು ತಲುಪಿದೆ. ಈ ಕುರಿತು ಇಬ್ಬರ ಮನೆಯಲ್ಲಿ ವಿಷಯ ಗೊತ್ತಾದ ಕೂಡಲೇ ಅಮೃತಳನ್ನು ಅವಳ …

Read More »

ಉಡುಪಿ: ಬಿಜೆಪಿ ಮುಖಂಡ, ಹೋಟೆಲ್ ಉದ್ಯಮಿ ಬಿ.ಸುಧಾಕರ ಶೆಟ್ಟಿ ನಿಧನ

ಉಡುಪಿ: ಬಿಜೆಪಿ ಮುಖಂಡ ಮತ್ತು ಕರಾವಳಿ ಬೈಪಾಸ್ ರೋಡ್ ನ ಶಾರದಾ ಇಂಟರ್‌ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ಶೆಟ್ಟಿ ಅವರು ಜ.04 ರ ಗುರುವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸುಧಾಕರ ಶೆಟ್ಟಿ 2013ರಲ್ಲಿ ಬಿಜೆಪಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಪ್ರಗತಿಪರ ಕೃಷಿಕ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸುಧಾಕರ ಶೆಟ್ಟಿ , ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿಯೂ …

Read More »

ಜ.17ರಂದು ರಾಮಲಲ್ಲಾ ಮೂರ್ತಿ ಘೋಷಣೆ: ಪೇಜಾವರ ಶ್ರೀ

ಉಡುಪಿ:ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಿರುವ ರಾಮಲಲ್ಲನ ವಿಗ್ರಹವನ್ನು ಜನವರಿ 17ರಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿ ಹಾಗೂ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.   “ಎರಡು ಕಪ್ಪು ಕಲ್ಲುಗಳು ಮತ್ತು ಒಂದು ಗ್ರಾನೈಟ್ ಕಲ್ಲಿನ ರಾಮ್ ಲಲ್ಲಾ ವಿಗ್ರಹವನ್ನು ಸುಂದರವಾಗಿ ಕೆತ್ತಲಾಗಿದೆ. ಟ್ರಸ್ಟ್‌ನ ಎಲ್ಲಾ ಸದಸ್ಯರು ಮತ ಚಲಾಯಿಸಿದ್ದಾರೆ. ಸರಯೂ ನದಿಯ ನೀರಿನಿಂದ ವಿಗ್ರಹಕ್ಕೆ ಅಭಿಷೇಕ ದಿನದಂದು ವಿಗ್ರಹವನ್ನು ಅಂತಿಮಗೊಳಿಸಲಾಗುವುದು” ಎಂದು ಅವರು ಹೇಳಿದರು. ದೇವಾಲಯದ ಉದ್ಘಾಟನೆಗೆ ಆಹ್ವಾನಿತರನ್ನು ಪ್ರಾತಿನಿಧ್ಯದ ಆಧಾರದ ಮೇಲೆ ಆಯ್ಕೆ …

Read More »

ಉಡುಪಿ: ಪಿಜಿಯಿಂದ ಹೊರ ಹೋಗಿದ್ದ ಯೋಗಿತಾ ವಾಪಾಸ್ ಬಾರದೆ ನಾಪತ್ತೆ

ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More »

ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ಐಸಿಯುಗೆ ದಾಖಲಿಸುವಂತಿಲ್ಲ: ಕೇಂದ್ರ ಸೂಚನೆ

ನವದೆಹಲಿ: ರೋಗಿ ಹಾಗೂ ಆತನ ಸಂಬಂಧಿಕರು ಒಪ್ಪಿಗೆ ಸೂಚಿಸಿದರೆ ಮಾತ್ರ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಕೊಡಿಸಬಹುದು. ಒಂದು ವೇಳೆ ಅವರು ವಿರೋಧಿಸಿದರೆ ಐಸಿಯುಗೆ ದಾಖಲಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆಸ್ಪತ್ರೆಗಳಲ್ಲಿ ರೋಗಿಗಳನ್ನು ಐಸಿಯುಗೆ ದಾಖಲಿಸುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯನ್ನು 24 ಮಂದಿ ತಜ್ಞರು ಚರ್ಚಿಸಿ ಬಿಡುಗಡೆ ಮಾಡಿದ್ದಾರೆ. ಮಾರ್ಗಸೂಚಿಯ ಪ್ರಕಾರ ಯಾವುದೇ ರೋಗಿಗೆ ಬಲವಂತವಾಗಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸುವಂತಿಲ್ಲ. ರೋಗಿಗೆ ಹೆಚ್ಚಿನ ಚಿಕಿತ್ಸೆ ಪ್ರಯೋಜನವಿಲ್ಲದೇ ಇದ್ದಲ್ಲಿ ಅಥವಾ ಯಾವುದೇ ಚಿಕಿತ್ಸೆ …

Read More »

You cannot copy content of this page.