ತಾಜಾ ಸುದ್ದಿ

ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ

ಕಾರ್ಕಳದ ಖಾಸಗಿ ಪೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಯುವತಿಗೆ ವ್ಯಕ್ತಿಯೊಬ್ಬ ವಿನಾಕಾರಣ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಗುಂಪು ವ್ಯಕ್ತಿಯನ್ನು ಕಾರ್ಕಳ ಬಸ್ ನಿಲ್ದಾಣದಲ್ಲಿ  ಹಿಡಿದು ಮುಖಕ್ಕೆ ಮಂಗಳಾರತಿ ಮಾಡಿದ ಘಟನೆ ಬುಧವಾರ ನಡೆದಿದೆ.ಇರ್ವತ್ತೂರಿನ ಜಗದೀಶ್ ಪೂಜಾರಿ ಎಂಬಾತ ಕಳೆದ ಹಲವು ದಿನಗಳಿಂದ ಕಾರ್ಕಳದ ಫೈನಾನ್ಸ್ ನಲ್ಲಿ ಅಕೌಂಟೆಂಟ್ ಆಗಿದ್ದ ನಂದಳಿಕೆ ಗ್ರಾಮದ ಯುವತಿಯನ್ನು‌ ಪದೇಪದೇ ಹಿಂಬಾಲಿಸಿ ಅಡ್ಡಗಟ್ಟಿ ಮಾತನಾಡಿಸಲು ಯತ್ನಿಸಿ ಕಿರುಕುಳ ನೀಡುತ್ತಿದ್ದ  ಎಂದು ಆರೋಪಿಸಲಾಗಿದೆ.ಬುಧವಾರ ಸಂಜೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದಾಗ …

Read More »

ಉಡುಪಿ: ಡಿ.31ರಂದು ಶ್ರೀಕೃಷ್ಣನಿಗೆ ವಿಷ್ಣು ಸಹಸ್ರ ನಾಮಾವಳಿ ಪಠನೆ ಸಹಿತ “ಕೋಟಿ ತುಳಸಿಯ ಅರ್ಪಣೆ ಅರ್ಚನೆ”

ಜಗದೊಡೆಯ ರುಕ್ಮಿಣೀ ಲೋಲ ಶ್ರೀಮಧ್ವಮುನಿಪ್ರತಿಷ್ಠಿತ ಭಾವಿಸಮೀರ ಶ್ರೀವಾದಿರಾಜಾದಿ ಮುನಿ ಪುಂಗವ ಸಂಸೇವಿತ ಶ್ರೀಕೃಷ್ಣನ ಪರಮ ಪದತಲಗಳಿಗೆ ವಿಪ್ರ ಬಂಧುಗಳಿಂದ ವಿಷ್ಣು ಸಹಸ್ರ ನಾಮಾವಳಿ ಪಠನೆ ಸಹಿತ “ಕೋಟಿ ತುಳಸಿಯ ಅರ್ಪಣೆ …ಅರ್ಚನೆ ” ಯ ದಿವ್ಯ ಸಂಕಲ್ಪವನ್ನು ಪರ್ಯಾಯ ಮಠಾಧೀಶರಾದ ಶ್ರೀ ಕೃಷ್ಣಾಪುರ ಮಠದ ಶ್ರೀಶ್ರೀವಿದ್ಯಾಸಾಗರತೀರ್ಥಶ್ರೀಪಾದರ ಆಶ್ರಯ ಹಾಗೂ ಆಶೀರ್ವಾದದ ಮೇರೆಗೆ “ಮಾಸಾನಾಂ ಮಾರ್ಗಶೀರ್ಷೋ ಹಂ” ಎನ್ನುವ ಗೀತೋಕ್ತಿಯಂತೆ ಮಾರ್ಗಶಿರ ಮಾಸದ ಬಹುಳ ಚತುರ್ಥಿ ದಿನಾಂಕ 31-12-2023 ರವಿವಾರದಂದು ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಮಂಡಲ (ರಿ.) ಅಂಗ ಸಂಸ್ಥೆ ಕಡಿಯಾಳಿ, ಊರ ಪರವೂರ …

Read More »

ಗುಜರಿ ಬಸ್ ಸಂಚಾರಕ್ಕೆ ಬಳಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ನಿಗದಿತ ಕಿ.ಮೀ. ಗಳಷ್ಟು ಸಂಚರಿಸಿ ಸಾಮರ್ಥ್ಯ ಕಳೆದುಕೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಗುಜರಿಗೆ ಹಾಕಬೇಕು. ಗುಜರಿಗೆ ಹಾಕಿದ ಬಸ್ಗಳನ್ನು ಮತ್ತೆ ಸಂಚಾರಕ್ಕೆ ಬಳಸಲು ಅನುಮತಿ ನೀಡುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಸಾಮರ್ಥ್ಯ ಕಳೆದುಕೊಂಡು ಗುಜರಿಗೆ ಸೇರಬೇಕಾಗಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಅಪಘಾತ ಉಂಟಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣವೊಂದರಲ್ಲಿ ನ್ಯಾ. ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಬಗ್ಗೆ ಮಹತ್ವದ ಆದೇಶ ಹೊರಡಿಸಲಾಗಿದೆ. ’ಬಸ್ಗಳು ಸಂಚಾರಕ್ಕೆ ಅರ್ಹವಾಗಿದೆ ಎಂದು ಪ್ರತಿ ವರ್ಷವೂ ಸಂಬಂಧಿಸಿದ ಪ್ರಾದೇಶಿಕ …

Read More »

ʻಗೃಹಲಕ್ಷ್ಮಿʼ ಕ್ಯಾಂಪ್ ನಲ್ಲಿ ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಬರುತ್ತೆ ಹಣ

ಗೃಹಲಕ್ಷ್ಮಿ’ ಯೋಜನೆಯ ವಿಶೇಷ ಶಿಬಿರ ರಾಜ್ಯಾದ್ಯಂತ ಆರಂಭಗೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣ ಬಾರದೆ ಇರುವವರು ತಪ್ಪದೇ ಪ್ರಮುಖ ಕೆಲಸಗಳನ್ನು ಮಾಡಿದ್ರೆ ಈ ತಿಂಗಳಿನಿಂದಲೇ ಖಾತೆಗೆ ಹಣ ಜಮಾ ಆಗಲಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಈ ಶಿಬಿರ 3 ದಿನಗಳ ಕಾಲ ನಡೆಯಲಿದ್ದು, ಶಿಬಿರದಲ್ಲಿ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇಕೆವೈಸಿ ಅಪ್ಡೆಡ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಮುಂತಾದ ಅಡತಡೆಗಳನ್ನು ನಿವಾರಿಸಿ, ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. …

Read More »

‘ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ತಾಂಡವವಾಡುತ್ತಿದೆ’ ; ಮಾಜಿ ಸಿಎಂ ಸದಾನಂದ ಗೌಡ

ಬೆಂಗಳೂರು:ಕರ್ನಾಟಕ ಬಿಜೆಪಿ ವಿರುದ್ಧ ಹಿರಿಯ ನಾಯಕ, ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಅವರು ಬುಧವಾರ ಮತ್ತೊಂದು ದಾಳಿ ನಡೆಸಿದ್ದು, ‘ಸರ್ವಾಧಿಕಾರಿ ಧೋರಣೆ’ಯಿಂದ ದೂರವಿರುವಂತೆ ರಾಜ್ಯ ಘಟಕಕ್ಕೆ ಸಲಹೆ ನೀಡಿದ್ದಾರೆ ಮತ್ತು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಇತರರ ವಿರುದ್ಧ ಅಶಿಸ್ತಿನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರ, ಪಕ್ಷದ ಶಾಸಕ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ ಹೊಸ ರಾಜ್ಯ ಘಟಕದ ಬಗ್ಗೆ ಕರ್ನಾಟಕದ ಮಾಜಿ …

Read More »

ಕಡಬ: ‘ಆ ಒಂದು ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ’- ಸದಾನಂದ ಗೌಡ

ಕಡಬ: ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನಾನು ಹೇಳಿದ್ದ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನಕ್ಕೆ ಕುತ್ತು ಬಂತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ. ಮಂಗಳವಾರ ಕಡಬದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಸೇರಿ ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗಾಗಿ ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವು. “ನಾನು ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ” ಎಂದು ಹೇಳಿದ್ದೇ ನನ್ನ ಸ್ಥಾನಕ್ಕೆ ಮುಳುವಾಯಿತು ಎಂದು ಬೇಸರ ವ್ಯಕ್ತಪಡಿಸಿದರು ಮುಖ್ಯಮಂತ್ರಿ …

Read More »

ಶೀಘ್ರವೇ ಮತ್ತೊಂದು ‘ಪುಲ್ವಾಮಾ ದಾಳಿ’ ನಡೆಯಲಿದೆ : ದೇಶದ್ರೋಹದ ಪೋಸ್ಟ್ ಹಾಕಿದ್ದ ‘ವಿದ್ಯಾರ್ಥಿ’ ಅರೆಸ್ಟ್

ಶೀಘ್ರವೇ ಮತ್ತೊಂದು ‘ಪುಲ್ವಾಮಾ ದಾಳಿ’ ನಡೆಯಲಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ‘ವಿದ್ಯಾರ್ಥಿ’ ಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ದಾರುಲ್ ಉಲೂಮ್ ದೇವಬಂದ್ ನ ಮುಸ್ಲಿಂ ವಿದ್ಯಾರ್ಥಿಯೊಬ್ಬ ಮತ್ತೊಂದು ಪುಲ್ವಾಮಾ ದಾಳಿಯ ಬೆದರಿಕೆ ಹಾಕಿದ್ದಾನೆ.   ಯುವಕ ತನ್ನ ಎಕ್ಸ್ ಖಾತೆಯಲ್ಲಿ “ಬಹುತ್ ಜಲ್ದ್ ಇನ್ ಶಾ ಅಲ್ಲಾಹ್ ದುಸ್ರಾ ಪುಲ್ವಾಮಾ ಭಿ ಹೋಗಾ” (ಇನ್ಶಾ ಅಲ್ಲಾಹ್, ಶೀಘ್ರದಲ್ಲೇ ಮತ್ತೊಂದು ಪುಲ್ವಾಮಾ ದಾಳಿ ನಡೆಯಲಿದೆ ) ಎಂದು ಬರೆದುಕೊಂಡಿದ್ದಾನೆ. 2019 ರಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಹುತಾತ್ಮರಾಗಿದ್ದರು.ಈತ ಮಾಡಿರುವ ಟ್ವೀಟ್ …

Read More »

ಉಡುಪಿ : ರಿಕ್ಷಾ ಚಾಲಕನಿಗೆ ಐವರ ತಂಡದಿಂದ ಹಲ್ಲೆ ,ಬೆದರಿಕೆ..!

ಉಡುಪಿ : ರಿಕ್ಷಾ ಚಾಲಕರೊಬ್ಬರಿಗೆ ಐದು ಮಂದಿಯ ತಂಡವೊಂದು ಹಲ್ಲೆ ನಡೆಸಿರುವ ಘಟನೆ ರಾತ್ರಿ ವೇಳೆ ಕಲ್ಸಂಕ ಬಳಿ ಸಂಭವಿಸಿದೆ. ಪುತ್ತೂರು ಅಡ್ಕದಕಟ್ಟೆಯ ಮಂಜುನಾಥ(40) ಎಂಬವರು ತಮ್ಮ ರಿಕ್ಷಾ ಚಲಾಯಿಸಿಕೊಂಡು ಬರುತ್ತಿರುವಾಗ ರಸ್ತೆ ಬದಿ ಎರಡು ಬೈಕ್ ಗಳಲ್ಲಿ ಬಂದ 5 ಮಂದಿ ಯುವಕರು ಬಾಟಲಿಯನ್ನು ರಸ್ತೆಯ ಮೇಲೆ ಹಾಕಿದ್ದರು. ಇದನ್ನು ಪ್ರಶ್ನಿಸಿದಕ್ಕಾಗಿ ಚಾಲಕ ಮಂಜುನಾಥ್ ಅವರಿಗೆ ಐವರ ತಂಡ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ನಡೆಸಿ ಆರೋಪಿಗಳು ತಮ್ಮ ಎರಡು ಬೈಕಿನಲ್ಲಿ ಪರಾರಿಯಾದರು ಎಂದು ತಿಳಿದುಬಂದಿದೆ. ಈ …

Read More »

ಡಿಸೆಂಬರ್ 30. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30 ಶನಿವಾರ ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾ ಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ. ಬೆಳಗ್ಗೆ 8:15 ರಿಂದ ರಾತ್ರಿ 8:15 ರವರೆಗೆ ನಿರಂತರ 12 ಗಂಟೆಗಳ ಕಾರ್ಯಕ್ರಮದಲ್ಲಿ ಮಣಿಪಾಲದ ಎಂ ಐ ಟಿ ಬಸ್ ನಿಲ್ದಾಣದಿಂದ ಮೆರವಣಿಗೆಯೊಂದಿಗೆ ಸಮ್ಮೇಳನಾಧ್ಯಕ್ಷರಾದ ಎಚ್ ಶಾಂತರಾಜ್ ಐತಾಳ್ ಅವರನ್ನು ಸ್ವಾಗತಿಸಲಾಗುವುದು.   9:25ಕ್ಕೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್ ಧ್ವಜಾರೋಹಣ, ಹಾಗೂ ಜಿಲ್ಲಾಧ್ಯಕ್ಷ …

Read More »

‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭ

ಯೋಜನೆ ಸಂಬಂಧ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿರುತ್ತದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಗಮನಕ್ಕೆ ಬಂದಿರುತ್ತದೆ. ಹಾಗೆಯೇ, ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ …

Read More »

You cannot copy content of this page.