ತಾಜಾ ಸುದ್ದಿ

ಹೊಸ ʻAPL, BPLʼ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು …

Read More »

ಬಂಟ್ವಾಳ : ಎರಡು ಲಾರಿಗಳು ಮುಖಾಮುಖಿ ಡಿಕ್ಕಿ- ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿಯ ಡಿಸೆಲ್ ಟ್ಯಾಂಕ್ ಗೆ ಹಾನಿಯಾಗಿ ರಸ್ತೆ ತುಂಬಾ ಡಿಸೆಲ್ ಹರಿದು ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು.</p> ಮಂಗಳೂರಿನಿಂದ ಕಲ್ಲಿದ್ದಲನ್ನು ಹೇರಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ ಹಾಗೂ ಎದುರಿನಿಂದ ಬರುತ್ತಿದ್ದ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಲಾರಿ ನರಹರಿ ಪರ್ವತದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿಯ ಡಿಸೆಲ್ ಟ್ಯಾಂಕ್ ಗೆ ಹಾನಿಯಾಗಿ ರಸ್ತೆ ತುಂಬಾ ಡಿಸೆಲ್ ಹರಡಿದ್ದು, ಒಂದು ಬದಿಯಿಂದ ಮೆಲ್ಕಾರ್ …

Read More »

ಮಂಗಳೂರು ಹೊಸ ವರ್ಷಾಚರಣೆ ಸಂಭ್ರಮ- ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷದ ಮುನ್ನಾ ದಿನದ ಆಚರಣೆಗಳ ಬಗ್ಗೆ ಡಿಸೆಂಬರ್ 28 ರಂದು ಸಂಜೆ 5 ಗಂಟೆಯೊಳಗೆ ನಗರ ಪೊಲೀಸ್‌ ಆಯುಕ್ತರ ಕಚೇರಿಯಿಂದ ಅಗತ್ಯ ಅನುಮತಿಯನ್ನು ಪಡೆಯಬೇಕು ಎಂದು ಪೊಲೀಸ್‌ ಕಮೀಷನರ್‌ ಅಗರ್‌ವಾಲ್‌ ಹೇಳಿದ್ದಾರೆ. ಹಾಗೆಯೇ ಡಿಸೆಂಬರ್ 31 ರ ಮಧ್ಯರಾತ್ರಿಯೊಳಗೆ ಎಲ್ಲಾ ಕಾರ್ಯಕ್ರಮಗಳು ಮುಕ್ತಾಯ ಮಾಡಲು ಸೂಚಿಸಿದ್ದಾರೆ. ಹೋಟೆಲ್‌, ರೆಸ್ಟೋರೆಂಟ್‌, ಕ್ಲಬ್‌, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕ ಹೊಸ ವರ್ಷಾಚರಣೆ ಮಾಡುವ ಸಂದರ್ಭ ಕೆಲವೊಂದು ನಿಯಮಗಳನ್ನು ಅನುಸರಿಸಬೇಕೆಂದು ಪೊಲೀಸ್‌ ಕಮೀಷನರ್‌ ಸೂಚನೆಗಳನ್ನು ಹೊರಡಿಸಿದ್ದಾರೆ. ಕಡಲತೀರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸುವವರಿಗೆ ಯೋಗ್ಯ ವಾತಾವರಣವನ್ನು ಕಾಪಾಡಿಕೊಳ್ಳುವುದು, ಅಶ್ಲೀಲ ನೃತ್ಯ …

Read More »

ಬೆಳ್ತಂಗಡಿ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಬೆಳ್ತಂಗಡಿ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ತಿರುಗುತ್ತಿದ್ದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸುಳ್ಯದ ಐವತ್ತೊಕ್ಲು ಗ್ರಾಮದ ಪಂಜದ ನೆಲ್ಲಿಕಟ್ಟೆ ನಿವಾಸಿ ಮಹಮ್ಮದ್ ಶರೀಫ್(43) ಎಂದು ಗುರುತಿಸಲಾಗಿದೆ.ಈತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ 2016 ರಲ್ಲಿ ದಾಖಲಾದ ಕಳ್ಳತನ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ನ್ಯಾಯಲಯ ಈತನ ವಿರುದ್ದ ವಾರೆಂಟ್ ಹೊರಡಿಸಿದ್ದು, ಕೋರ್ಟ್ ಗೆ ಹಾಜರಾದದೇ ಸುಮಾರು 6 ರಿಂದ 7 ವರ್ಷಗಳಿಂದ ತನ್ನ ಸ್ವಂತ ವಿಳಾಸದಲ್ಲಿ ವಾಸ ಮಾಡದೆ ವಿವಿಧ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ.ಈತನನ್ನು ಪತ್ತೆ ಹಚ್ಚಿದ …

Read More »

ಕುಂದಾಪುರ: ಕಾರು ಡಿಕ್ಕಿ ಹೊಡೆದು ವೃದ್ಧ ಪಾದಚಾರಿ ಸಾವು..!

ಕುಂದಾಪುರ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾವುಂದದ ಮಸ್ಕಿ ನಡೆದಿದೆ.ಮೃತ ದುರ್ದೈವಿ ಗೋವಿಂದ ಖಾರ್ವಿ(70)  ಎಂದು ಗುರುತಿಸಲಾಗಿದೆ. ಕಾರು ಕುಂದಾಪುರ ಕಡೆಯಿಯಿಂದ ಬೈಂದೂರು ಕಡೆಗೆ ಚಲಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ದಾಟುತ್ತಿದ್ದ ವೃದ್ದನಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಗಂಗೊಳ್ಳಿಯ ಆಪದ್ಭಾಂಧವ ಇಬ್ರಾಹಿಂ ಗಂಗೊಳ್ಳಿ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ …

Read More »

ಕೋವಿಡ್ ಉಲ್ಭಣ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ-ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.‌ ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ …

Read More »

‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ..!

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ. 2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲಿಕರು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ …

Read More »

ಪರ್ಯಾಯ ಶ್ರೀಪಾದರಿಂದ “ಕೋಟಿ ತುಳಸಿ ಅರ್ಚನೆ”ಯ ಕರಪತ್ರ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯ ಹಾಗೂ ಅನುಜ್ಞೆಯ ಮೇರೆಗೆ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಸಭಾ ಕಡಿಯಾಳಿ ಶಾಖೆಯ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಬ್ರಾಹ್ಮಣ ಸಮುದಾಯದ ಸಹಾಯ ಸಹಕಾರದೊಂದಿಗೆ ಉಡುಪಿಯ ರಾಜಾಂಗಣದಲ್ಲಿ ಡಿಸೆಂಬರ್ 31, 2023 ರವಿವಾರದಂದು ನಡೆಯಲಿರುವ ಋಕ್ಮಿಣೀಕರಾರ್ಚಿತ ಶ್ರೀಕೃಷ್ಣನಿಗೆ ಶ್ರೀ ವಿಷ್ಣು ಸಹಸ್ರ ನಾಮಾವಳೀ ಸಹಿತ “ಕೋಟಿ ತುಳಸಿ ಅರ್ಚನೆ” ಯ ಆಮಂತ್ರಣ ಪತ್ರಿಕೆ ಹಾಗೂ ಈ ಬಗ್ಗೆ ಶ್ರೀಮಠದಿಂದ ಪ್ರಕಟಿತ ಮನವಿಯ ಕರಪತ್ರವನ್ನು ಪರ್ಯಾಯ ಮಠದ ಪರಮ ಪೂಜ್ಯ ಶ್ರೀ ಶ್ರೀ …

Read More »

ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ: ಸಾಕು ಮಗಳು ನಾಪತ್ತೆ ಪ್ರಕರಣ-ಮಗಳ ಸ್ನೇಹಿತ ಸಹಿತ ನಾಲ್ವರ ಬಂಧನ

ಉಡುಪಿ: ರಂಗಕರ್ಮಿ, ಸಮಾಜಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20) , ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ಈ ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಲೀಲಾಧರ ಶೆಟ್ಟಿ ದಂಪತಿ …

Read More »

RSS ದಕ್ಷಿಣ ಪ್ರಾಂತ ಸಂಘ ಚಾಲಕರಾಗಿ ಜಿ.ಎಸ್ ಉಮಾಪತಿ ನೇಮಕ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಆಡನೂರು ಗ್ರಾಮದವರಾದ ಉಮಾಪತಿ, ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರೈಸಿದ್ದರು. ಬಳಿಕ ಮಂಗಳೂರಿನ ಎನ್‌ಐಟಿಕೆಯಲ್ಲಿ ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಪಿಡಬ್ಲ್ಯುಡಿ ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದ ಅವರು 2018ರಲ್ಲಿ ನಿವೃತ್ತಿ ಹೊಂದಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂ ಸೇವಕರಾಗಿ ನಂತರ ವಿವಿಧ ಜವಾಬ್ದಾರಿಗಳನ್ನು …

Read More »

You cannot copy content of this page.