ತಾಜಾ ಸುದ್ದಿ

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ- ಐವನ್ ಡಿಸೋಜ ಮನೆಗೆ‌ ಕಲ್ಲು ತೂರಾಟ

ಮಂಗಳೂರು: ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ. ಬೈಕ್ ನಲ್ಲಿ ಬಂದು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ನಗರದ ವೆಲೆನ್ಸಿಯಾದಲ್ಲಿ ಐವಾನ್ ಡಿಸೋಜರ ಮನೆಯಿದ್ದು, ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.ಐವನ್‌ರ ಮನೆಯ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗಿದೆ.

Read More »

ಉಡುಪಿ: ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ಗಣೇಶ ವಿಗ್ರಹಗಳ ತಯಾರಿ ,ಮಾರಾಟಕ್ಕೆ ನಿಷೇಧ

ಉಡುಪಿ: ಪ್ರಸಕ್ತ ಸಾಲಿನ ಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು ಈ ಸಂದರ್ಭ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟಾಗಿ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗು ವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಆಪಾಯ ಉಂಟಾಗುತ್ತದೆ. ಜೊತೆಗೆ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಆದ್ದರಿಂದ …

Read More »

ಕಾರ್ಕಳ: ಪರಶುರಾಮ ಪ್ರತಿಮೆ ಪ್ರಕರಣ- ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್‌ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ಕ್ರಿಷ್‌ ಆರ್ಟ್‌ ವರ್ಲ್ಡ್ ಮುಖ್ಯಸ್ಥ ಕೃಷ್ಣ ನಾಯಕ್‌ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ. ಪ್ರಕರಣದ ಸಂಬಂಧ ಕಾರ್ಕಳ ಟೌನ್‌ ಪೊಲೀಸರು ದಾಖಲಿಸಿರುವ ಎಫ್ಐಆರ್‌ ಹಾಗೂ ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಕೃಷ್ಣ ನಾಯಕ್‌ ಸಲ್ಲಿಸಿದ್ದ ಅರ್ಜಿಯು ನ್ಯಾಯ ಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ …

Read More »

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತçಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭಿಸಿಲ್ಲ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು …

Read More »

ಬೆಳ್ತಂಗಡಿ: ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ; ರಕ್ಷಿತ್‌ ಶಿವರಾಂ ವಿರುದ್ಧ ಕೇಸ್ ದಾಖಲು

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸುವಂತೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಯಿತು. ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು. …

Read More »

ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ : ಸಂಘಟನೆಗಳಿಂದ ಉಪನ್ಯಾಸಕಿ ವಿರುದ್ಧ ಆಕ್ರೋಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿಯೋರ್ವ ಬ್ಲೇಡ್‌ನಿಂದ ಗೀರಿರುವ  ಆರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಇಬ್ಬರೂ ಭಿನ್ನ ಸಮುದಾಯಕ್ಕೆ ಸೇರಿದವರಾದ ಹಿನ್ನೆಲೆಯಲ್ಲಿ ಎರಡೂ ಕಡೆಯ ಮುಖಂಡರು ಆಸ್ಪತ್ರೆ ಮುಂಭಾಗ ಜಮಾಯಿಸಿದ ಪರಿಣಾಮ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದೆ. ಇವರಿಬ್ಬರು ಕೊಂಬೆಟ್ಟು ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳು. ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳಾಗಿದ್ದು ಇತಿಹಾಸ ವಿಷಯ ದಲ್ಲಿ ಒಂದೇ ತರಗತಿಯ ಸಹಪಾಠಿ ಗಳಾಗಿದ್ದರು. ವಿದ್ಯಾರ್ಥಿನಿ …

Read More »

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ..!

ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಿಡಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿ ನಿವಾಸಿ ಪ್ರಥಮೇಶ್ (16) ಎಂದು ಗುರುತಿಸಲಾಗಿದೆ. ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ …

Read More »

ಮುರಳೀಧರ್ ಭಟ್ ರವರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ      

ಛಾಯಾಚಿತ್ರ ಕಲಾವಿದ ಮುರಳೀಧರ್ ಭಟ್ ಕೊಡವೂರು ಇವರಿಗೆ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ “ವಿಪ್ರ ಛಾಯಾ ಸಾಧಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.  ಕಳೆದ ಹಲವಾರು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ವಲಯ ಬ್ರಾಹ್ಮಣ ಮಹಾಸಭಾದ ಎಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಛಾಯಾಗ್ರಹಣ ಮಾಡಿತ್ತಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಶ್ರೀನಿವಾಸ ತೋಡತ್ತಿಲ್ಲಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ವಿಪ್ರ ಸೇನಾನಿ ಶ್ರೀ ಗಣೇಶ್ ಅಡಿಗ, ದಿನಕರ ರಾವ್  ಸಂಘದ ಅಧ್ಯಕ್ಷ ಸುರೇಂದ್ರ ಉಪಾಧ್ಯಾಯ, ಗೌರವಾಧ್ಯಕ್ಷರುಗಳಾದ ಗೋವಿಂದ ಐತಾಳ್, ಗುರುರಾಜ್ ರಾವ್, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್ , …

Read More »

ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ

ಮಂಗಳೂರು: ”ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರೋಳಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ”ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ …

Read More »

ಮಂಗಳೂರಿನಲ್ಲಿ 500ರ ಖೋಟಾ ನೋಟು ಚಲಾವಣೆ- 4 ಮಂದಿಯ ಬಂಧನ

ಮಂಗಳೂರು :ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟು …

Read More »

You cannot copy content of this page.