ತಾಜಾ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಭಾರೀ ಅಸಮಾಧಾನ- ಡಾ.ಮೋಹನ್ ಆಳ್ವರು ಆಯೋಜಿಸಿದ್ದ ಉಪಹಾರ ಕೂಟವನ್ನು ಸಚಿವ ರದ್ದುಪಡಿಸಿದ ಬೈರತಿ ಸುರೇಶ್

ಮೂಡುಬಿದಿರೆ: ಮಂಗಳೂರು ನಗರಕ್ಕೆ ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್‌ ಆಳ್ವ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಶುಕ್ರವಾರದ ಬೆಳಗ್ಗಿನ ಉಪಹಾರ ಕೂಟವನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಭಾರೀ ಅಸಮಾಧಾನದ ಹಿನ್ನೆಲೆಯಲ್ಲಿ ರದ್ದುಪಡಿಸಿದ ವಿದ್ಯಮಾನ ನಡೆದಿದೆ. ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜು‌ಕೊಳ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ್ದರು, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಮುಖ್ಯಸ್ಥ ಮೋಹನ್‌ ಆಳ್ವ ಅವರ ನಿವಾಸದಲ್ಲಿ ಸಚಿವರಿಗೆ ಬೆಳಗ್ಗಿನ ಉಪಾಹಾರ …

Read More »

ಮಂಗಳೂರು : ಡೆತ್ ಸರ್ಟಿಫಿಕೇಟ್ ಗೆ 13 ಸಾವಿರಾ ಲಂಚ ಸ್ವೀಕರಿಸುವಾಗ VA ಲೋಕಾಯುಕ್ತ ಬಲೆಗೆ‌‌

ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವ್ಯಕ್ತಿಯೊಬ್ಬರು ತನ್ನ ತಾಯಿಯ ಹೆಸರಿನಲ್ಲಿ ಜಾಗ ಮಾರಾಟ ಮಾಡಲು ದಾಖಲಾತಿಗಳನ್ನು ತಯಾರು ಮಾಡುವ ವೇಳೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಜ್ಜನ ಮರಣ ಪ್ರಮಾಣ ಪತ್ರ ಮತ್ತು ಸಂತತಿ ನಕ್ಷೆ ಮಾಡಿಕೊಂಡು ಬನ್ನಿ ಎಂದು ತಿಳಿಸಿದ್ದಾರೆ. ಅದರಂತೆ ದೂರುದಾರರು ಸೆಪ್ಟೆಂಬರ್ ತಿಂಗಳಿನಲ್ಲಿ ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ಹೋಗಿ ತನ್ನ ಅಜ್ಜನ ಮರಣದ ದೃಢಪತ್ರಕ್ಕೆ …

Read More »

ಉಡುಪಿ: ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ – ಎಸ್ ಪಿ ಡಾ.ಅರುಣ್ ಜಟಾಪಟಿ

ಉಡುಪಿ: ಇವತ್ತಿನ ಕೆಡಿಪಿ ಸಭೆ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತು ಎಸ್‌ಪಿ ಜಟಾಪಟಿಗೆ ಸಾಕ್ಷಿಯಾಯಿತು. ಲಾರಿ ಮುಷ್ಕರ ಸಂದರ್ಭ ಪ್ರತಿಭಟನಾಕಾರರಿಗೆ ಎಸ್‌ಪಿ ನೋಟಿಸ್ ನೀಡಿದ ವಿಚಾರವಾಗಿ ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ವಿರುದ್ಧ ಕೆಂಡಾಮಂಡಲರಾದರು. ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ. ನಾವು ಮನೆಯಲ್ಲಿ ಕೂತು …

Read More »

ಉಡುಪಿ : ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ಸಾವು

ಉಡುಪಿ : ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸೋಮೇಶ್ವರ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಲಾರಿ ಕಾರ್ಮಿಕ ಶಿವರಾಜ್ ಎಂಬುವವರ ಮೇಲೆ ಟಿಪ್ಪರ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುತ್ತಿದೆ. ಟಿಪ್ಪರ್ ಚಾಲಕ ಪೆಟ್ರೋಲ್ ಹಾಕಿಸಿಕೊಂಡು ಹೋಗುವಾಗ ಪೆಟ್ರೋಲ್ ಬಂಕ್ ಮಲಗಿದ್ದ ಕಾರ್ಮಿಕನ ಮೇಲೆಯೇ ಚಾಲಕ ಟಿಪ್ಪರ್ ಹರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿವಮೊಗ್ಗ ಮೂಲದ ಕಾರ್ಮಿಕ ಶಿವರಾಜ್ ನನ್ನು …

Read More »

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 75 ಸಾವಿರ GD ಕಾನ್ಸ್ ಟೇಬಲ್ ಗಳ ನೇಮಕಾತಿ, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

10 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಬಂಪರ್ ನೇಮಕಾತಿಗೆ ಅವಕಾಶವಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಜಿಡಿ ಕಾನ್ಸ್ಟೇಬಲ್ ನೇಮಕಾತಿ 2023 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದರ ಮೂಲಕ 75768 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಇಂದಿನಿಂದ ನವೆಂಬರ್ 24 ರಿಂದ ಎಸ್‌ಎಸ್ಸಿಯ ಅಧಿಕೃತ ವೆಬ್ಸೈಟ್ ssc.nic.in ಭೇಟಿ ನೀಡುವ ಮೂಲಕ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನವಾಗಿದೆ. ವಿವಿಧ ಭದ್ರತಾ ಪಡೆಗಳಲ್ಲಿ ಜನರಲ್ ಡ್ಯೂಟಿ …

Read More »

ದ.ಕ ಜಿಲ್ಲೆಯತ್ತ ಗಮನ ನೀಡ್ತೇನೆ, ಮತ್ತೆ ಆಶೀರ್ವಾದ ಮಾಡಿ ಎಂದ ಸಂಸದ ನಳಿನ್

ಬಂಟ್ವಾಳ: ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೆ ಲೋಕಸಭೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಂಟ್ವಾಳದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾವುಕ ನುಡಿಗಳನ್ನಾಡಿದ ಅವರು, ನನ್ನ ವಿರುದ್ಧದ ಹಲವು ಟೀಕೆ, ಟಿಪ್ಪಣಿಯನ್ನ ಕೇಳಿದ್ದೇನೆ. ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ.ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ. ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಹಲವು ನೋವನ್ನ ಅನುಭವಿಸಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ. ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ. ನನಗೂ ದುಃಖವಿದೆ. ಸಂಸದನಾದ ಬಳಿಕ ಹಳ್ಳಿ …

Read More »

ಮಂಗಳೂರು: ಅನಂತಪುರದ ಮೊಸಳೆಗೆ ಬಬಿಯಾ ನಾಮಕರಣ

ಮಂಗಳೂರು:ಸರೋವರ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಭ್ರಮ ಕಾಠ್ಯಕ್ರಮ ಮತ್ತು ಮಧ್ಯಾಹ್ನ ಭಕ್ತರ ಸಮಾಲೋಚನೆ ಸಭೆ ಜರುಗಿತು. ಈ ಸಂದರ್ಭ ಶ್ರೀ ಕ್ಷೇತ್ರದ ಪರಮ ಪವಿತ್ರ ಸರೋವರದಲ್ಲಿ ಇತ್ತೀಚೆಗೆ ಪ್ರತ್ಯಕ್ಷಗೊಂಡ ಮೂರನೇ ದೇವರ ಮೊಸಳೆಗೆ ಶಾಸ್ರೋಕ್ತವಾಗಿ ವೇದ ಮಂತ್ರಘೋಷಗಳೊಂದಿಗೆ ‘ಬಬಿಯಾ’ ಎಂದು ನಾಮಕರಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ದೇಗುಲದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ದೀಪ ಬೆಳಗಿಸಿ ವಿಧಿವಿಧಾನಗಳನ್ನು ನೆರವೇರಿಸಿದರು. ಧಾರ್ಮಿಕ ಮುಂದಾಳು, ವಕೀಲ ಹಾಗೂ ಕಲಾರತ್ನ ಶಂನಾಡಿಗ …

Read More »

ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯ– ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ ಎಂದ ಎಸ್ಪಿ

ಉಡುಪಿ: ಇಲ್ಲಿನ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡಿದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್ ನೆಸ್ ನಿಂದ ಕೊಲೆ ಮಾಡಬೇಕೆಂದು …

Read More »

ಇಸ್ರೇಲ್‌ನಲ್ಲಿ ಮಹಿಳೆಯರ ಮೇಲೆ ಹಮಾಸ್‌ ನಡೆಸಿದ ಕ್ರೌರ್ಯದಿಂದ ಬೇಸರ: ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ

ಇಸ್ರೇಲ್‌ನಲ್ಲಿ ಹಮಾಸ್ ಭಯೋತ್ಪಾದಕರು ನಡೆಸುತ್ತಿರುವ ದೌರ್ಜನ್ಯವನ್ನು ಟಿವಿಯಲ್ಲಿ ನೋಡಿ ಮುಸ್ಕಾನ್ ಸಿದ್ದಿಕಿ ಎಂಬ ಯುವತಿ ಇಸ್ಲಾಂ ಧರ್ಮವನ್ನು ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಮುಸ್ಕಾನ್ ಹದಿನೈದು ದಿನಗಳ ಹಿಂದೆ ಹಿಂದೂ ಧರ್ಮಕ್ಕೆ ಮತಾಂತರಗೊಂಡು, ಹಿಂದೂ ಶಿಶುಪಾಲ್ ಮೌರ್ಯ ಅವರನ್ನು ವಿವಾಹವಾದರು. ರಾಷ್ಟ್ರೀಯ ಹಿಂದೂ ಶೇರ್ ಸೇನಾ ಮುಖ್ಯಸ್ಥ ವಿಕಾರ್ ಹಿಂದೂ ಅವರ ಸಮ್ಮುಖದಲ್ಲಿ ಹಿಂದೂ ಸಂಪ್ರದಾಯದಂತೆ ಇಬ್ಬರೂ ವಿವಾಹವಾದರು. 23 ವರ್ಷದ ಮುಸ್ಕಾನ್ ಶಹಜಹಾನ್‌ಪುರದ ಕತ್ರಾದಲ್ಲಿ ವಾಸಿಸುತ್ತಿದ್ದರೆ, ಆಕೆಯ ಪತಿ ಮಹೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹೋಲಿ ಚಾಡಿಯಾ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಕಾರ್ಖಾನೆಯೊಂದರಲ್ಲಿ ಕೆಲಸ …

Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಚಾರ್ಚ್‌ ಶೀಟ್‌ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಮಂಗಳೂರು: ದೇಶದಲ್ಲಿ ಭಾರಿ ಸದ್ದು ಮಾಡಿದ್ದ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿ ಒಂದು ವರ್ಷ ಸಂದಿದೆ. 2022ರ ನವೆಂಬರ್ 19 ರಂದು ಮಂಗಳೂರಿನಲ್ಲಿ ಬಾಂಬ್ ಸ್ಫೋಟವಾಗಿತ್ತು. ಪ್ರಕರಣದಲ್ಲಿ ಬಂಧಿತನಾಗಿದ್ದ ಶಾರೀಕ್ ಕುಕ್ಕರ್​​ ತೆಗೆದುಕೊಂಡು ಸ್ಫೋಟಿಸಲು ರಿಕ್ಷಾದಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಏಕಾಏಕಿ ಸಿಡಿದಿತ್ತು. ಈ ನಡುವೆ ಮಂಗಳೂರು ಕದ್ರಿ ಮಂಜುನಾಥ ದೇಗುಲ ಸಮೀಪ ಬಾಂಬ್ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂದು ವರ್ಷದ ನಂತರ NIA ಚಾರ್ಚ್‌ ಶೀಟ್‌ ಅನ್ನು ಸಲ್ಲಿಸುವುದಕ್ಕೆ ಮುಂದಾಗಿದೆ. ಈ ನಡುವೆ NIA ಚಾರ್ಚ್‌ ಶೀಟ್‌ನಲ್ಲಿ ಆರೋಪಿಗಳು ಮುಂದಿನ ಕಾರ್ಯಗಳ ಬಗ್ಗೆ …

Read More »

You cannot copy content of this page.