ತಾಜಾ ಸುದ್ದಿ

ಬೆಳ್ತಂಗಡಿ: ಜಾಗದ ವಿಚಾರವಾಗಿ ಅಣ್ಣನ ಮಗನಿಂದಲೇ ಮಾರಣಾಂತಿಕ ಹಲ್ಲೆ..!

ಬೆಳ್ತಂಗಡಿ: ಜಾಗದ ವಿಚಾರಕ್ಕೆ ಸಂಬಂದಿಸಿದಂತೆ ವ್ಯಕ್ತಿಯೋರ್ವರಿಗೆ ಅಣ್ಣನ ಮಗ ಮಾರಣಾಂತಿಕ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಘಟನೆ ಮಲವಂತಿಗೆ ಗ್ರಾಮ ಬೆಳ್ತಂಗಡಿಯಲ್ಲಿ ನಡೆದಿದೆ. ಮಲವಂತಿಗೆ ಗ್ರಾಮ ಬೆಳ್ತಂಗಡಿ ನಿವಾಸಿ ಚಿನ್ನೇಗೌಡರಿಗೆ ಮತ್ತು ಅಣ್ಣನ ಮಗನಾದ ಆರೋಪಿ ಮಹೇಶ್ ಎಂಬಾತನಿಗೆ ಜಾಗದ ವಿಚಾರಕ್ಕೆ ಸಂಬಂದಿಸಿದಂತೆ ತಕರಾರಿದ್ದು, ದಿನಾಂಕ: 18.11.2023 ರಂದು ಬೆಳಿಗ್ಗೆ ಚಿನ್ನೇಗೌಡರು ಮಲವಂತಿಗೆ ಗ್ರಾಮದ ನಿಡ್ಲೇರಿ ಎಂಬಲ್ಲಿದ್ದಾಗ, ಆರೋಪಿ ಮಹೇಶ್ ಜೀಪಿನಲ್ಲಿ ಬಂದು ಜೀಪು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು ಅಲ್ಲೇ ಹತ್ತಿರದಲ್ಲಿದ್ದ ಕೋಲಿನಿಂದ ಬೆನ್ನಿಗೆ, ತೋಡೆ, ಕಾಲು, ಕೈಗಳಿಗೆ ತಲೆಗೆ ಹೊಡೆದುದಲ್ಲದೇ ಕೈಯಿಂದ ಕೆನ್ನೆಗೆ …

Read More »

ಸುರತ್ಕಲ್: ಅಪಘಾತ ತಪ್ಪಿಸಲು ಯತ್ನಿಸಿ ಕಾರು ಟೆಲಿಫೋನ್ ಕಂಬಕ್ಕೆ ಡಿಕ್ಕಿ..!

ಸುರತ್ಕಲ್: ಅಪಘಾತ ತಪ್ಪಿಸಲು ಹೋಗಿ ಕಾರೊಂದು ಅಂಗಡಿಯ ಮುಂಭಾಗದ ತಗಡಿನ ಚಪ್ಪರ ಮತ್ತು ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡ ಕಾರು ಚಾಲಕನನ್ನು ಫರಾನ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಹೋಗುತ್ತಿದ್ದ ಕಾರು ಸುರತ್ಕಲ್ ಪೇಟೆಯಲ್ಲಿ ಎದುರಿನಲ್ಲಿದ್ದ ಕಾರೊಂದು ಏಕಾಏಕಿ ಟರ್ನ್ ಮಾಡಿದ ಪರಿಣಾಮ ತೀರಾ ಎಡಭಾಗದಿಂದ ಬರುತ್ತಿದ್ದ ಕಾರಿನ ಚಾಲಕ ಫರಾನ್ ಬ್ರೇಕ್ ಹಾಕಿದ್ದಾರೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ತೀರಾ ಎಡಭಾಗಕ್ಕೆ ತಿರುಗಿ ರಸ್ತೆಯ ಬದಿಯಲ್ಲಿದ್ದ ರಾಘವೇಂದ್ರ ಹೋಟೆಲ್ ನ …

Read More »

ಉಡುಪಿ: ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ- ಪತ್ನಿ ಸಾವು

ಉಡುಪಿ:ತಮ್ಮ ಸಂಬಂಧಿಕರ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಪೆಟ್ರೋಲ್ ಪಂಪ್ ಬಳಿ ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದರೆ, ಪತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಾಂಗಾಳ ಸಾದಾದಿ ಪಡುಮನೆ ಶೇಖರ್ ಶೆಟ್ಟಿ ಅವರ ಪತ್ನಿ ವಿಜಯ ಶೆಟ್ಟಿ (61) ಮೃತ ದುರ್ದೈವಿ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಸ್ಥಳೀಯರು ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಶೇಖರ್ ಶೆಟ್ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಕಡಬ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೊಲೆರೋ

ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಮುಂಜಾನೆ ಸಂಭವಿಸಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿಯ ಚೇತನ್ ಎಂಬವರ ಕುಟುಂಬಸ್ಥರು ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ವಾಹನ ಅಪಘಾತವಾಗಿದೆ. ವಾಹನದಲ್ಲಿ ಮಗು ಸಹಿತ ಮೂರು ಮಂದಿ ಇದ್ದು ಜೀವ ಹಾನಿಯಿಂದ ಪಾರಾಗಿದ್ದಾರೆ. ವಾಹನ ಜಖಂ ಗೊಂಡಿದ್ದು ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸ್ಥಳೀಯರು ಕೂಡಲೇ ಆಗಮಿಸಿ ವಾಹನದಲ್ಲಿದ್ದವರನ್ನು ಉಪಚರಿಸಿದ್ದಾರೆ.

Read More »

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಪುತ್ತೂರು : ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಯಾವುದೋ ವಾಹನ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More »

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್: ಕೊಲೆಗೆ ಕಾರಣ ಬಯಲು

ಬೆಂಗಳೂರು :ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದ ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಕೊನೆಗೂ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಲೆಗೆ ನಿಜವಾದ ಕಾರಣ ಬಯಲಾಗಿದೆ. ಪೊಲೀಸರ ವಿಚಾರಣೆ ವೇಳೆ ಹಣ, ಚಿನ್ನಾಭರಣಕ್ಕಾಗಿ ಪ್ರತಿಮಾರನ್ನು ಕೊಲೆ ಮಾಡಿರುವುದಾಗಿ ಆರೋಪಿ ಕಿರಣ್ ಬಾಯಿ ಬಿಟ್ಟಿದ್ದಾನೆ. ಪ್ರತಿಮಾ ಕೊಲೆಗೆ ಸಂಚು ರೂಪಿಸಿ ಮನೆಗೆ ನುಗ್ಗಿ ಪ್ರತಿಮಾ ಅವರನ್ನು ಕೊಲೆ ಮಾಡಿ, ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದನು. 5 ಲಕ್ಷ ರೂ. ನಗದು, 3 ರಿಂದ 4 ಲಕ್ಷ ಮೌಲ್ಯದ 2 ಚಿನ್ನದ ಬಳೆ, …

Read More »

ಮಂಗಳೂರು : ಅಪಾರ್ಟ್ಮೆಂಟ್‌ನಲ್ಲಿ ಪಾರ್ಕಿಂಗ್ ಕೊಡದೆ ಮೋಸ – ಐವರು ಬಿಲ್ಡರ್‌ಗಳಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ

ಮಂಗಳೂರು : ನಗರದ ಗ್ರಾಹಕ ನ್ಯಾಯಾಲಯ ಗ್ರಾಹಕರೊಬ್ಬರ ಪರವಾಗಿ ನೀಡಿರುವ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಹೆಸರಾಂತ ರಿಯಲ್ ಎಸ್ಟೇಟ್ ಸಂಸ್ಥೆಯ ಐವರು ಬಿಲ್ಡರ್‌ಗಳಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ನೀಡುವಂತೆ ಆದೇಶಿಸಿದೆ. ನಗರದ ರಾಮ್ ಭವನದಲ್ಲಿ ಕಚೇರಿ ಹೊಂದಿರುವ ನಗರದ ಮಾರಿಯನ್ ಇನ್ಸಾಸ್ಪಕ್ಟರ್ ಸಂಸ್ಥೆಯ ಪಾಲುದಾರರು ಉಜ್ವಲ್‌ ಡಿಸೋಜ ಮತ್ತು ನವೀನ್ ಕಾರ್ಡೋಜ ಹಾಗೂ ಅವರೊಂದಿಗೆ ಅಭಿವೃದ್ಧಿ ಕಾರ್ಯದಲ್ಲಿ ಪಾಲುದಾರಿಕೆ ಹೊಂದಿರುವ ವಿಲಿಯಂ ಸಲ್ದಾನ್ಹ, ಗಾಯತ್ರಿ ಮತ್ತು ಲೂಸಿ ಸಲ್ದಾನ್ಹ ಶಿಕ್ಷೆಗೊಳಗಾದವರು. 2013ರಲ್ಲಿ ಮಂಗಳೂರಿನ ಗುಜ್ಜರಕೆರೆ …

Read More »

ಬಂಟ್ವಾಳ DYSP ಪ್ರತಾಪ್ ಸಿಂಗ್ ಥೋರಾಟ್ ಲೋಕಾಯುಕ್ತಕ್ಕೆ ವರ್ಗಾವಣೆ

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ‌.ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು ಬಂಟ್ವಾಳ ಡಿವೈಎಸ್ಪಿಯಾಗಿ ಪೊಲೀಸ್ ಇಲಾಖೆ ನೇಮಕ ಮಾಡಲಾಗಿದೆ. ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಬಂಟ್ವಾಳದಲ್ಲಿ ಡಿ.ವೈಎಸ್.ಪಿ.ಯಾಗಿ ಕೆಲ ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದರು. ಇದೀಗ ರಾಜ್ಯದಲ್ಲಿ ಕೆಲವು ಪೋಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.

Read More »

ಬಂಟ್ವಾಳ: 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿ. ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟು ಮಾಡುತ್ತಿದ್ದ ಕಾರಣಕದಕ್ಕಾಗಿ 2021 ರ ಡಿ. 21 ರಂದು ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಅ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷರುಗಳಾದ ಹರೀಶ್ ಮತ್ತು ಮೂರ್ತಿ …

Read More »

ಕುಕ್ಕೆ ಸುಬ್ರಹ್ಮಣ್ಯ ಗರ್ಭ ಗುಡಿಯ ಪೋಟೊದೊಂದಿಗೆ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ: ದೂರು ದಾಖಲು

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭ ಗುಡಿಯ ಪೋಟೋ ತೆಗೆದಿದ್ದಾರೆ. ಅಲ್ಲದೆ ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ …

Read More »

You cannot copy content of this page.