ತಾಜಾ ಸುದ್ದಿ

ಸುಳ್ಯ: ಗ್ರಾಹಕರೊಬ್ಬರೊಂದಿಗೆ ಅಸಭ್ಯ ಮಾತು -ಮೆಸ್ಕಾಂ ಎಇ ಅಮಾನತು

ಸುಳ್ಯ: ಗ್ರಾಹಕರೊಬ್ಬರೊಂದಿಗೆ ದೂರವಾಣಿಯಲ್ಲಿ ಅನುಚಿತವಾಗಿ ಮಾತನಾಡಿದರೆಂಬ ಆಡಿಯೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಸುಳ್ಯದ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ನನ್ನು ಮೆಸ್ಕಾಂನ ಹಿರಿಯ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಮೆಸ್ಕಾಂ ಎ.ಇ. ಸುಪ್ರೀತ್ ಕುಮಾರ್ ವಜಾಗೊಂಡವರು. ಅನುಚಿತ ಮಾತುಗಳ ಆಡಿಯೋ ವೈರಲ್ ಆಗಿರುವುದರಿಂದ ಮೆಸ್ಕಾಂನ ಘನತೆಗೆ ಕುಂದುಂಟಾಗಿರುವುದರಿಂದ ಸುಪ್ರೀತ್ ರನ್ನು ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ

Read More »

ಯಜಮಾನಿಯರಿಗೆ ಗುಡ್ ನ್ಯೂಸ್ : ಸರಳ ವಿಧಾನ ಜಾರಿ, ಇನ್ಮುಂದೆ ಮಿಸ್ ಆಗದೆ ಬರುತ್ತೆ ‘ಗೃಹಲಕ್ಷ್ಮಿ’ ಹಣ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. ಇಲ್ಲಿಯವರೆಗೆ 1.9 ಕೋಟಿ ಮಹಿಳೆಯರ ಖಾತೆಗೆ ಹಣ ತಲುಪಿದೆ ಆದರೆ ಇನ್ನು ಸುಮಾರು 9 ಲಕ್ಷದಷ್ಟು ಮಹಿಳೆಯರಿಗೆ ಹಣ ಸಂದಾಯವಾಗಿಲ್ಲ.   ಇತ್ತೀಚಿಗೆ ಈ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಯಜಮಾನಿಯರ ಅಕೌಂಟ್ ಗೆ ಹಣ ಬರುತ್ತೆ, ಇದಕ್ಕಾಗಿ ಸರಳ ಸೀಡಿಂಗ್ ಆಗದೆ ಇರುವುದು ಹಾಗೂ ಕೆಲವು …

Read More »

ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿದ ಪಾಗಲ್ ಪ್ರೇಮಿಯ ಬಂಧನ

ಹಾಸನ : ಲವ್ ಬ್ರೇಕಪ್ ಆದ ಕೋಪಕ್ಕೆ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಸುಚಿತ್ರಾ (20) ಎಂದು ಗುರುತಿಸಲಾಗಿದೆ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರನಾಗಿದ್ದಾನೆ. ಇವರಿಬ್ಬರು ಇಂಜಿನಿಯರಿಂಗ್ ಒದುತ್ತಿರುವ ವಿಧ್ಯಾರ್ಥಿಗಳಾಗಿದ್ದು, ತೇಜಸ್ ಹಾಗೂ ಸುಚಿತ್ರಾ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಬ್ರೇಕಪ್ ಆಗಿದೆ. ಈ ನಡುವೆ ಮರು ಸಂಧಾನದ ಮಾತುಕತೆ ಎಂದು ಆಕೆಯನ್ನು ಆಹ್ವಾನಿಸಿದ ಹುಡುಗ ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ …

Read More »

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು..!

ಪುತ್ತೂರು: ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿಷ ಹಾವು ಕಡಿತಕ್ಕೊಳಗಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ಬಿಜೆಪಿಯ ಹಿರಿಯ ನಾಯಕರು, ಮುಖಂಡರುಗಳು ಆಸ್ಪತ್ರೆಗೆ ಧಾವಿಸಿದ್ದಾರೆ. ಹಿರೇಬಂಡಾಡಿಯಲ್ಲಿರುವ ತನ್ನ ಮನೆಯ ತೋಟದಲ್ಲಿ ನಿಂತಿರುವ ಸಂದರ್ಭದಲ್ಲಿ ವಿಷಪೂರಿತ ಕನ್ನಡಿ ಹಾವು ಅವರ ಕಾಲಿಗೆ ಕಚ್ಚಿದೆ. ತಕ್ಷಣವೇ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Read More »

ಬಜಾಜ್ ಫೈನಾನ್ಸ್ ಇನ್ನೂ ಸಾಲ ಕೊಡುವಂತಿಲ್ಲ -ರಿಸರ್ವ್ ಬ್ಯಾಂಕಿನಿಂದ ಮಹತ್ತರ ಆದೇಶ

ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಕೆಲ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ದೇಶದ ಅತಿದೊಡ್ಡ ಎನ್ ಬಿ ಎಫ್ ಸಿ ಬಜಾಜ್ ಫೈನಾನ್ಸ್ ಸಂಸ್ಥೆಗೆ, ಅದು ಸಾಲ ನೀಡುವ ಉತ್ಪನ್ನಗಳಾದ ಇಕಾಮ್ ಮತ್ತು ಇನ್ಸ್ಟಾ ಇಎಂಐ ಕಾರ್ಡ್ ಅಡಿಯಲ್ಲಿ ಹಣ ನೀಡುವುದನ್ನು ನಿಲ್ಲಿಸುವಂತೆ ಆರ್ಬಿಐ ತಿಳಿಸಿದೆ.ಈ ಸೂಚನೆಯನ್ನು ನವೆಂಬರ್ 15ರಂದು ನೀಡಲಾಗಿದ್ದು, ತತ್ಕ್ಷಣದಿಂದಲೇ ಜಾರಿಗೆ ಬರುತ್ತದೆ. ಈ ಎರಡು ಸ್ಕೀಮ್ ವಿಚಾರದಲ್ಲಿ ಸಂಸ್ಥೆಯು ಆರ್ಬಿಐನ ಡಿಜಿಟಲ್ ಸಾಲ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ, ಈ ಎರಡು ವಿಭಾಗದಲ್ಲಿ ಸಾಲ ಪಡೆಯುವ ಗ್ರಾಹಕರಿಗೆ ಕೆಲ ಪ್ರಮುಖ ಮಾಹಿತಿಯನ್ನು ಬಜಾಜ್ …

Read More »

ಉಡುಪಿ ನಾಲ್ವರ ‘ಮರ್ಡರ್‌ ಕೇಸ್‌’: ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ;ಪೊಲೀಸರಿಂದ ಲಾಠಿಚಾರ್ಜ್

ಉಡುಪಿ:  ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ, ನೇಜಾರು ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ರೋಚಕ ಮಾಹಿತಿಗಳು ಹೊರಬಿದ್ದಿವೆ. ಇದರ ಬೆನ್ನಲ್ಲೇ ಆರೋಪಿಯನ್ನು ಸ್ಥಳ ಮಹಜರು ಮಾಡಲು ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಬೆಳಗ್ಗೆಯಿಂದಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದು, 11.30 ಗಂಟೆಗೆ ಆರೋಪಿಯನ್ನು ಸ್ಥಳ ಮಹಜರು ಸ್ಥಳಕ್ಕೆ ಬರುವುದಾಗಿ ಹೇಳಲಾಗಿತ್ತು. ಆದರೆ ಸಂಜೆ 4.30 ಕ್ಕೆ ಆರೋಪಿಯನ್ನು ಕರೆತರಲಾಗಿತ್ತು. ಈ ಎಲ್ಲಾ ಪ್ರಕ್ರಿಯೆ ನಡೆಯುವ ಸಂದರ್ಭ …

Read More »

ವಿಶ್ವಕಪ್ ಫೈನಲ್ ನಲ್ಲಿ ‘ಟೀಮ್ ಇಂಡಿಯಾ’ ಗೆದ್ದರೆ ಬೆತ್ತಲಾಗುವೆ : ಶಾಕಿಂಗ್ ಹೇಳಿಕೆ ನೀಡಿದ ನಟಿ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿ ಭಾರತ ತಂಡ ಫೈನಲ್ ಪ್ರವೇಶಿದ್ದು, ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿದೆ. ಇಡೀ ಭಾರತ ಫೈನಲ್ ಗಾಗಿ ಎದುರು ನೋಡುತ್ತಿದೆ. ಇದೀಗ ತೆಲುಗಿನ ನಟಿಯೊಬ್ಬರು ವಿಶ್ವಕಪ್ ಫೈನಲ್ ನಲ್ಲಿ ‘ಟೀಮ್ ಇಂಡಿಯಾ’ ಗೆದ್ದರೆ ಬೆತ್ತಲಾಗುವೆ ಎಂದು ಹೇಳಿಕೆ ನೀಡುವ ಮೂಲಕ ವ್ಯಾಪಕ ಸುದ್ದಿಯಾಗಿದ್ದಾರೆ.   ವಿಶ್ವಕಪ್ ಫೈನಲ್ ನಲ್ಲಿ ಭಾರತ ಗೆದ್ದರೆ ವಿಶಾಖಪಟ್ಟಣಂ ಸಮುದ್ರದಲ್ಲಿ ಬೆತ್ತಲೆಯಾಗಿ ನಡೆಯುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನಟಿಯ ಪೋಸ್ಟ್ ಗೆ ತರಹೇವಾರಿ ಕಮೆಂಟ್ …

Read More »

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ‌ ಬಿಡುಗಡೆ.

ಚಿತ್ರದುರ್ಗ: ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡರು. ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ‌ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು.   ಆದರೆ, ಸಂಜೆ ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ …

Read More »

ಶಬರಿಮಲೆಗೆ ತೆರಳುವ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯ..!

ತಿರುವನಂತಪುರಂ:ತಿರುವಾಂಕೂರು ದೇವಸ್ವಂ ಮಂಡಳಿಯು ನಿಲಕ್ಕಲ್‌ನಲ್ಲಿ ಪಾರ್ಕಿಂಗ್‌ಗಾಗಿ ಫಾಸ್ಟ್‌ಟ್ಯಾಗ್ ವ್ಯವಸ್ಥೆಯನ್ನು ಜಾರಿಗೊಳಿಸಿರುವುದರಿಂದ ಶಬರಿಮಲೆ ಕಡೆಗೆ ಹೋಗುವ ಎಲ್ಲಾ ವಾಹನಗಳು ಫಾಸ್ಟ್‌ಟ್ಯಾಗ್ ಹೊಂದಿರಬೇಕು ಎಂದು ಡಿಜಿಪಿ ಶೇಖ್ ದರ್ವೇಶ್ ಸಾಹೇಬ್ ಬುಧವಾರ ಹೇಳಿದ್ದಾರೆ. ಶಬರಿಮಲೆಗೆ ಹೋಗುವ ಯಾವುದೇ ವಾಹನಗಳನ್ನು ಅಲಂಕರಿಸಬಾರದು ಎಂದು ಅವರು ಸಲಹೆ ನೀಡಿದರು. ಸುರಕ್ಷಿತ ಶಬರಿಮಲೆ ಮಂಡಲಂ-ಮಕರವಿಳಕ್ಕು ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ಮಾಡಲಾದ ಎಲ್ಲಾ ವ್ಯವಸ್ಥೆಗಳನ್ನು ಡಿಜಿಪಿ ಪರಿಶೀಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರಿಂದ ಎಲ್ಲ ಬಂದೋಬಸ್ತ್ ಮಾಡಲಾಗಿದೆ. ಈ ತೀರ್ಥಯಾತ್ರೆಯಲ್ಲಿ ಆರು ಹಂತಗಳಲ್ಲಿ ಒಟ್ಟು 13,000 ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. “ಮಕ್ಕಳು ಮತ್ತು ಮಹಿಳೆಯರಿಗೆ …

Read More »

BIG NEWS: ‘ಬೀದಿನಾಯಿ’ ಕಚ್ಚಿ ಸಾವನ್ನಪ್ಪಿದ್ರೇ 5 ಲಕ್ಷ ಪರಿಹಾರ, ಗಾಯಗೊಂಡವರಿಗೆ 5 ಸಾವಿರ ನೆರವು: ‘ಹೈಕೋರ್ಟ್’ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡವರಿಗೆ ಐದು ಸಾವಿರ ಹಾಗೂ ಸಾವನ್ನಪ್ಪಿದ್ರೇ 5 ಲಕ್ಷ ಪರಿಹಾರ ನೀಡುವ ನಿಯಮವು ಶೀಘ್ರವೇ ಜಾರಿಗೊಳಿಸೋ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಬುಧವಾರ ಪ್ರಮಾಣ ಪತ್ರ ಸಲ್ಲಿಸಿದೆ. ಪ್ರಾಣಿಗಳ ಜನನ ನಿಯಂತ್ರಣ(ನಾಯಿ) ಅಧಿನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಎಲ್ ರಮೇಶ್ ನಾಯಕ್ ಸಲ್ಲಿಸಿದ್ದಂತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾ.ಕೃಷ್ಣ ಎಸ್ …

Read More »

You cannot copy content of this page.