ತಾಜಾ ಸುದ್ದಿ

ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಆತ್ಮಹತ್ಯೆ ಕೇಸ್‌- ಆರೋಪಿಗೆ ಜೈಲು

ಉಡುಪಿ: ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. 2008 ಜೂನ್ 10ರಂದು ಶಾಸಕ ರಘುಪತಿಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು, ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಆತುಲ್ ರಾವ್, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು …

Read More »

BIG BREAKING NEWS: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ. ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪಕ್ಷವನ್ನು ನಡೆಯಲಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ

Read More »

ದೇವಾಲಯಕ್ಕೆ ಪೆಟ್ರೋಲ್ ಬಾಂಬ್ ಎಸೆದ ಭೂಪ – ಅರೆಸ್ಟ್

ಚೆನ್ನೈ: ‘ನನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ’ ಎಂದು ದೇವಾಲಯಕ್ಕೆ ಪೆಟ್ರೋಲ್ ಬಾಂಬ್ ಎಸೆದ ಭೂಪ ಅರೆಸ್ಟ್ ಆಗಿದ್ದಾನೆ. ನಗರದ ಪ್ಯಾರಿಸ್ ಕಾರ್ನರ್ ಪ್ರದೇಶದಲ್ಲಿ ಶುಕ್ರವಾರ ಇತಿಹಾಸ ಶೀಟರ್ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಮೇಲೆ ಮೊಲೊಟೊವ್ ಕಾಕ್ಟೈಲ್ (ಪೆಟ್ರೋಲ್ ಬಾಂಬ್) ಎಸೆದ ನಂತರ ಉದ್ವಿಗ್ನತೆ ಉಂಟಾಗಿದೆ.ಆರೋಪಿಯನ್ನು ಮುರಳೀಕೃಷ್ಣನ್ (38) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು ಕುಡಿದ ಅಮಲಿನಲ್ಲಿ, ಕೈಯಲ್ಲಿ ಪೆಟ್ರೋಲ್ ಬಾಂಬ್ನೊಂದಿಗೆ ದೇವಾಲಯದ ಮುಂದೆ ವಿವಾದದಲ್ಲಿ ಭಾಗಿಯಾಗಿದ್ದನು. ತನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ …

Read More »

ಪುತ್ತಿಲ‌ ಪರಿವಾರ ಕಛೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣ – ಇಬ್ಬರು ಅಪ್ರಾಪ್ತರು ಸೇರಿ 9 ಮಂದಿ ಪೊಲೀಸ್ ವಶಕ್ಕೆ

ಪುತ್ತೂರು :  ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ವಿರುದ್ದ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ದಿನೇಶ್ ಪಂಜಿಗಣ, ಭವಿತ್,ಮನ್ವಿತ್,ಜಯಪ್ರಕಾಶ್,ಚರಣ್,ಮನೀಶ್, ವಿನೀತ್ ಮತ್ತು ಇಬ್ಬರು ಅಪ್ರಾಪ್ತ ಬಾಲಕರು ಎಂದು ಗುರುತಿಸಲಾಗಿದೆ. ದಿನೇಶ್ ಪಂಜಿಗ ಎಂಬಾತ ತಂಡದೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದು, ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗ ಮನೀಶ್ ಕುಲಾಲ್ ಬನ್ನೂರು ಎಂಬವರನ್ನು ಗುರಿಯಾಗಿಟ್ಟುಗೊಂಡು ಬಂದಿದ್ದರು ಎಂದು ಆರೋಪಿಸಲಾಗಿದೆ. ಈ ವೇಳೆ ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ …

Read More »

ಕಟೀಲು: ನಿಯಂತ್ರಣ ತಪ್ಪಿ, ಭಾರಿ ಗಾತ್ರದ ಹೊಂಡಕ್ಕೆ ಬಿದ್ದ ಲಾರಿ- ಚಾಲಕ ಸಾವು

ಮುಲ್ಕಿ : ನಿಡ್ಡೋಡಿ ಶುಂಠಿಲಪದವಿನಿಂದ ಕಟೀಲು ಕಡೆಗೆ ಬರುತ್ತಿದ್ದ ಲಾರಿಯೊಂದು ರೆಸಾರ್ಟ್ ಬಳಿ ನಿಯಂತ್ರಣ ತಪ್ಪಿ, ಭಾರಿ ಗಾತ್ರದ ಹೊಂಡಕ್ಕೆ ಬಿದ್ದು ಚಾಲಕ ಮೃತಪಟ್ಟಿದ್ದಾರೆ. ಮೃತ ಚಾಲಕನನ್ನು ಮೂಡಬಿದ್ರೆ ಪಾಲಡ್ಕ ನಿವಾಸಿ ವಿಶ್ವನಾಥ ನಾಯಕ್(45) ಎಂದು ಗುರುತಿಸಲಾಗಿದೆ. ಮೃತ ಚಾಲಕ ಶುಂಠಿಲ ಪದವು ಬಳಿಯಿಂದ ಲಾರಿಯಲ್ಲಿ ಕಲ್ಲು ಹೇರಿಕೊಂಡು ಕಟೀಲು ಕಡೆಗೆ ಬರುತ್ತಿದ್ದಾಗ ಸೌಂದರ್ಯ ರೆಸಾರ್ಟ್ ಚಡಾವು ಬಳಿ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿಸಿದ ಬಲಬದಿಗೆ ಚಲಿಸಿ, ಭಾರಿ ಗಾತ್ರದ ಹೊಂಡಕ್ಕೆ ಬಿದ್ದಿದೆ ಎನ್ನಲಾಗಿದೆ. ಈ ಸಂದರ್ಭ ಚಾಲಕ ವಿಶ್ವನಾಥ ಟಿಪ್ಪರ್ ನ ಒಳಗಡೆ …

Read More »

ಉಪ್ಪಿನಂಗಡಿ : ಬಾಲಕಿಗೆ ಲೈಂಗಿಕ ಕಿರುಕುಳ ಫೋಕ್ಸೋ ಕಾಯ್ದೆಯಡಿ ಪ್ರಕರಣ

ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪೊಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮುಝಮ್ಮಿಲ್ (19) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಶಾಲೆಯೊಂದರ ವಿದ್ಯಾರ್ಥಿನಿಯ ಮೊಬೈಲ್‌ ಪೋನ್‌ಗೆ ಸಂದೇಶ ಕಳುಹಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ಅಕ್ಟೋಬರ್ 10ರಂದು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದನಲ್ಲದೇ ಹಾಗೂ ನವೆಂಬರ್ 6ರಂದು ವಿದ್ಯಾರ್ಥಿನಿಗೆ ಪುನ: ಮೊಬೈಲ್ ಸಂದೇಶ ಕಳುಹಿಸಿ ಹಿಂಸಿಸುತ್ತಿದ್ದ. ಇದರಿಂದ ವಿದ್ಯಾರ್ಥಿನಿಯು ಮಾನಸಿಕವಾಗಿ ಕುಗ್ಗಿ ಹೋಗಿರುತ್ತಾಳೆಂದು ಆಕೆಯ ತಾಯಿ …

Read More »

ಕಾರ್ಕಳ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ..!

ಕಾರ್ಕಳ: ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಿರ್ಗಾನ ಗ್ರಾಮದ ಮನೋಜ್ ಆಚಾರ್ಯ ಎಂಬವರ ಪತ್ನಿ ಅಶ್ವಿನಿ (25) ಎಂದು ಗುರುತಿಸಲಾಗಿದೆ. ಈದು ಗ್ರಾಮದ ಮುಳಿಕಾರು ಎಂಬಲ್ಲಿನ ಅಶ್ವಿನಿಗೆ ಹಿರ್ಗಾನ ಗ್ರಾಮದ ಮನೋಜ್ ಎಂಬವರ ಜತೆ ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆಯಾದ್ದು, ಇದೀಗ ನವವಿವಾಹಿತೆ ಅಶ್ವಿನಿ ಸಾವಿನ ಕುರಿತು ಆಕೆಯ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ …

Read More »

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಘಾತದಿಂದ ನಿಧನ

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬುಲ್ಯೆನ್ಸ್ ನಲ್ಲಿ ಕರೆದೊಯ್ಯಲಾಯಿತು.ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಟೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು. 1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿದ್ದರು.ಬಳಿಕ ಈ …

Read More »

ಅಕ್ಷಯ್ ಕಲ್ಲೇಗ ಹತ್ಯೆ ವೇಳೆ ಆರೋಪಿಗಳು ಗಾಂಜಾ ಸೇವಿಸಿದ ಬಗ್ಗೆ ವರದಿ ಬಂದಿಲ್ಲ – ಎಸ್ಪಿ ರಿಷ್ಯಂತ್

ಪುತ್ತೂರು: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. ನವೆಂಬರ್ 6 ರಂದು ಪುತ್ತೂರಿನ ಹೊರವಲಯದ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರು ದುಷ್ಕರ್ಮಿಗಳು ತಲವಾರ್ ನಿಂದ ಹಲ್ಲೆ ನಡೆಸಿದ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಅಕ್ಷಯ್ ಕಲ್ಲೇಗ ಹತ್ಯೆ ವೇಳೆ …

Read More »

ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಖುಲಾಸೆ

ಮಂಗಳೂರಿನಲ್ಲಿಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ಧಾಖಲಾಗಿದ್ದ ಬಿಜೈ ರಾಜನ ಕೊಲೆ ಪ್ರಕರಣ ದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2012 ನೇ ಇಸವಿಯಲ್ಲಿ ನಗರದ ಫಳ್ನೀರ್ ವೆಸ್ಟ್ಗೇಟ್ ಟವರ್ಸ್ ಕಟ್ಟಡದಲ್ಲಿರುವ ನ್ಯಾಷನಲ್ ಮೆಡಿಕಲ್ ಬಳಿಯಲ್ಲಿರುವ ಕಾಯಿನ್ ಬೂತ್ ನ ಬಳಿ ರವಿಪೂಜಾರಿಯು ಒಳಸಂಚು ನಡೆಸಿ ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿ ಕೊಲೆ ಮಾಡಿಸಿದ ರವಿ ಪೂಜಾರಿ ಮತ್ತು ಅತನ ಸಹಚರರ ವಿರುದ್ದ ಮಂಗಳೂರಿನ ಪೂರ್ವ …

Read More »

You cannot copy content of this page.