ತಾಜಾ ಸುದ್ದಿ

ಉಡುಪಿ: ಜಿಲ್ಲೆಯ 29 ಮಂದಿ ಸಾಧಕರು ಹಾಗೂ 5 ಸಂಘ‌ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು, ಉಡುಪಿಯ ಮಹಾತ್ಮಗಾಂಧಿ ಮೈದಾನದಲ್ಲಿ ಬುಧವಾರ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಿ ಗೌರವಿಸಿದರು. ಜಿಲ್ಲೆಯ 29 ಮಂದಿ ಹಾಗೂ 5 ಸಂಘ‌ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭ ಶಾಸಕರು,ಜಿಲ್ಲಾಧಿಕಾರಿ ಸಹಿತ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read More »

ಬಂಟ್ವಾಳ: ಅ್ಯಂಬುಲೆನ್ಸ್ -ಕಾರು ಡಿಕ್ಕಿ, ಪ್ರಾಣಾಪಾಯದಿಂದ ಪಾರಾದ ರೋಗಿ

ಬಂಟ್ವಾಳ : ಆಂಬ್ಯುಲೆನ್ಸ್ ಮತ್ತು ಕಾರು ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ರಾತ್ರಿ ನಡೆದಿದೆ. ಒಳ ರಸ್ತೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ಕಾರು ಚಾಲಕ ನಿಯಂತ್ರಣ ತಪ್ಪಿ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಗೆ ಡಿಹೊಡೆದಿದ್ದಾನೆ . ಡಿಕ್ಕಿಯ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿದೆ. ಬಳಿಕ ಸ್ಥಳಿಯರ ನೆರವಿನೊಂದಿಗೆ ಬೇರೆ ಆಂಬ್ಯುಲೆನ್ಸ್ ತರಿಸಿ ಮೂಲಕ ರೋಗಿಯನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Read More »

BREAKING : ಜನತೆಗೆ ಬಿಗ್ ಶಾಕ್ : `LPG’ ಸಿಲಿಂಡರ್ ಬೆಲೆಯಲ್ಲಿ 103 ರೂ. ಹೆಚ್ಚಳ

 ನವೆಂಬರ್ ತಿಂಗಳ ಮೊದಲ ದಿನವೇ ಜನತೆಗೆ ಬಿಗ್ ಶಾಕ್, ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 103 ರೂ. ಏರಿಕೆ ಮಾಡಲಾಗಿದೆ. ಇಂದು, 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 103 ರೂ. ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್ಪಿಜಿ ಸಿಲಿಂಡರ್ 1833 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 1943.00 ರೂ., ಮುಂಬೈನಲ್ಲಿ 1785.50 ರೂ., ಚೆನ್ನೈನಲ್ಲಿ 1999.50 ರೂ. 32 ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ 310 ರೂ. ಅಕ್ಟೋಬರ್ 1 ರಂದು ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು ಸುಮಾರು 209 ರೂ.ಗೆ ಹೆಚ್ಚಿಸಲಾಯಿತು. …

Read More »

ಉಡುಪಿ: ಮತ್ತೊಂದು ವಂಚನೆ ಪ್ರಕರಣ: ಚೈತ್ರಾಳನ್ನು ಬ್ರಹ್ಮಾವರಕ್ಕೆ ಕರೆತಂದ ಪೊಲೀಸರು

ಉಡುಪಿ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ವಂಚನೆ ಆರೋಪಿಯಾಗಿರುವ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಕುಂದಾಪುರ ಮೂಲದ ಚೈತ್ರಾಳನ್ನು , ಮತ್ತೊಂದು ವಂಚನೆ ಪ್ರಕರಣದ ತನಿಖೆಗಾಗಿ ಬ್ರಹ್ಮಾವರ ಠಾಣೆಗೆ ಕರೆ ತರಲಾಗಿದೆ. ಬಟ್ಟೆ ಅಂಗಡಿಯನ್ನು ತೆರೆದುಕೊಂಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಸುಧೀನ್ ಚೈತ್ರಾ ವಿರುದ್ದ ದೂರು ನೀಡಿದ್ದರು. ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದೆ ಎಂದು ಸುಧೀನ್ ನಂಬಿಸಿದ್ದ ಚೈತ್ರಾ, 2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು …

Read More »

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ಮಕ್ಕಳಾದ ಸೀತಾರಾಮ, ಬಾಲಕೃಷ್ಣ, ಡಾ.ಮೋಹನ್ ಆಳ್ವ, ಮೀನಾಕ್ಷಿ ಸೇರಿದಂತೆ ಅಸಂಖ್ಯಾತ ಬಂಧು-ಮಿತ್ರರನ್ನು ಅಗಲಿರುವ ಆನಂದ ಆಳ್ವ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ. ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ …

Read More »

ಕಾರ್ಕಳ: ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರ್ ಹೃದಯಾಘಾತದಿಂದ ನಿಧನ

ಕಾರ್ಕಳ: ಹಿರಿಯ ಪತ್ರಕರ್ತ ,ಸಾಹಿತಿ ಶೇಖರ್ ಅಜೆಕಾರ್(54) ಅವರಿಂದು ಹೃದಯಾಘಾತದಿಂದ ನಿಧನರಾದರು. ಅವರು 22 ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿದ್ದರು. ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ. 10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು. ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ …

Read More »

ಪುತ್ತೂರು : Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ನಿಧನ

ಪುತ್ತೂರು : Pixel Creatives ಸಂಸ್ಥೆಯ ಸಹ ಮಾಲಕರಾದ ಪ್ರಶಾಂತ್ ಪಲ್ಲತ್ತಡ್ಕ (32) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.ಸಮಾರಂಭಗಳಿಗೆ ಎಲ್ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು, ಸುಳ್ಯ ಸಹಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಮಾರಂಭಕ್ಕೆ ಎಲ್ಇಡಿ ಹಾಗೂ ನೇರಪ್ರಸಾರಕ್ಕೆ ಬೇಕಾಗುವ ಪರಿಕರಗಳನ್ನು ಒದಗಿಸುವ ಖ್ಯಾತ ಸಂಸ್ಥೆ ಇದಾಗಿದೆ. ಮೃತರು ಪತ್ನಿ, ತಂದೆ ತಾಯಿ ಅಕ್ಕಂದಿರು, ಸಿಬ್ಬಂದಿ ವರ್ಗ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

Read More »

ಮಂಗಳೂರು: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ..!

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರೊಂದು ಪತ್ತೆಯಾಗಿದ್ದು, ಕಾರನ್ನು ಚಲಾಯಿಸಿಕೊಂಡು ಬಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಕಾರನ್ನು ಪರಿಶೀಲಿಸಿದಾಗ ಚಿಕ್ಕಮಗಳೂರು ಜಿಲ್ಲೆಯ ವ್ಯಕ್ತಿಯೊಬ್ಬರ ಕೆಲವು ಗುರುತಿನ ಕಾರ್ಡ್‌ಗಳು ಕಂಡು ಬಂದಿವೆ. ಚಿಕ್ಕಮಗಳೂರಿನ ಮುಗುಳಬಳ್ಳಿಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ . ಸೋಮವಾರ ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ …

Read More »

ಬೆಳ್ತಂಗಡಿ: ತಂದೆಯಿಂದಲೇ ಮಗನನ್ನು ಚೂರಿ ಇರಿದು ಕೊಲೆ

ಉಜಿರೆ : ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದ್ದು,ಕೊಲೆ ಮಾಡಿದ ಆರೋಪಿ ಕಷ್ಣಯ್ಯ ಆಚಾರ್. ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ …

Read More »

ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ

ಚಿಕ್ಕಮಗಳೂರು:ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದ್ದು, ಶ್ರೀರಾಮಸೇನೆಯ ಕಾರ್ಯಕರ್ತರು ಮಾಲಾಧಾರಣೆ ಮಾಡಿದ್ದಾರೆ. ಇಂದಿನಿಂದ 7 ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದ್ದು, ನವೆಂಬರ್ 5ರಂದು ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಶ್ರೀರಾಮ ಸೇನೆ ನೇತೃತ್ವದಲ್ಲಿ ದತ್ತಾಮಾಲ ಅಭಿಯಾನ ನಡೆಯಲಿದ್ದು, ಈ ಬಾರಿ 7 ಪ್ರಮುಖ ಬೇಡಿಕೆ ಮುದ್ದಿಟ್ಟುಕೊಂಡು ದತ್ತಾಮಾಲ ಅಭಿಯಾನ ಕೈಗೊಳ್ಳಲಾಗುತ್ತಿದೆ. ಕಾಣೆಯಾದ ಅಮೂಲ್ಯ ವಿಗ್ರಹಗಳ ಬಗ್ಗೆ ತನಿಖೆ ನಡೆಸಬೇಕು, ಸ್ಥಳದಲ್ಲಿ ಇಸ್ಲಾಂ ಚಟುವಟಿಕೆ ಅವಕಾಶ ನೀಡದಂತೆ ಪಟ್ಟು, ನವೆಂಬರ್ 6 ರಂದು ದತ್ತಪೀಠದ ಹೋಮ ಮತ್ತು ದತ್ತು ಪಾದುಕೆ …

Read More »

You cannot copy content of this page.