ತಾಜಾ ಸುದ್ದಿ

ಮಂಗಳೂರು: ವರ್ಷದ ಕೊನೆಯ ಚಂದ್ರಗ್ರಹಣ: ಪಿಲಿಕುಳದಲ್ಲಿ ವೀಕ್ಷಣೆಗೆ ಅವಕಾಶ

ಮಂಗಳೂರು: ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಮಧ್ಯರಾತ್ರಿ 1:5 ಗಂಟೆಗೆ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆಯ ಸಮಯ ಬದಲಾಗಿದ್ದು, ಕೆಲವು ದೇವಾಲಯಗಳು ಬೇಗನೆ ಮುಚ್ಚಿದರೆ, ಮತ್ತೆ ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಗ್ರಹಣ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಂಜೆ 7.30ರಿಂದ ಆಕಾಶ ವೀಕ್ಷಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದೂರದರ್ಶಕದ ಮೂಲಕ ಗುರು ಗ್ರಹ, ಶನಿ ಗ್ರಹ ಮತ್ತು ಚಂದ್ರನನ್ನು ಕಣ್ತುಂಬಿಕೊಳ್ಳಬಹುದು. …

Read More »

ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ

ಬೆಂಗಳೂರು: ದೇಶಾದ್ಯಂತ ಈರುಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, ಗ್ರಾಹಕರ ಕಣ್ಣಲ್ಲಿ ಕಣ್ಣೀರು ಹಾಕಿಸಲು ಸಜ್ಜಾಗಿದೆ. ಟೊಮೆಟೊ ದರದಲ್ಲಿ ಏರಿಕೆಯು ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗಿ ಅದರ ಬೆಲೆ ಇಳಿಕೆಯ ನಂತರ ಜನರು ನಿಟ್ಟುಸಿರು ಬಿಟ್ಟಿದ್ದರು. ಈಗ ಮತ್ತೆ ಈರುಳ್ಳಿ ದರ ಏರಿಕೆಯಾಗುವ ಸೂಚನೆ ಕಂಡುಬಂದಿದೆ ಇದು ಜನಸಾಮಾನ್ಯರಲ್ಲಿ ಕಣ್ಣೀರು ತರಿಸಲಾರಂಭಿಸಿದೆ ದೇಶದ ವಿವಿಧ ಭಾಗಗಳಲ್ಲಿ ಶೇ.25ರಿಂದ ಶೇ.50 ರಷ್ಟು ಬೆಲೆ ಹೆಚ್ಚಳವಾಗಿದೆ. ಶುಕ್ರವಾರ ದೇಶದಲ್ಲಿ ಸರಾಸರಿ ಈರುಳ್ಳಿ ದರ ಪ್ರತೀ ಕೆ.ಜಿ.ಗೆ 47 ರೂ. ಇತ್ತು. ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಂಡಿದ್ದು, ಹೆಚ್ಚುವರಿಯಾಗಿ ದಾಸ್ತಾನು …

Read More »

ಮಂಗಳೂರು: ಬಸ್ ಡಿಕ್ಕಿಯಾಗಿ ಜಾನುವಾರು ಸಾವು, ಸ್ಥಳೀಯರ ಆಕ್ರೋಶ

ಮಂಗಳೂರು: ಕುಂದಾಪುರದಿಂದ ಮೈಸೂರು- ಮಂಡ್ಯಕ್ಕೆ ತೆರಳುವ ಖಾಸಗಿ ಮೋಟಾಸ್೯ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್‌ನಲ್ಲಿ ಶುಕ್ರವಾರ ತಡರಾತ್ರಿ ವೇಳೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Read More »

ಉಡುಪಿ ನಗರಸಭೆ ವ್ಯಾಪ್ತಿಯ ಅನಧಿಕೃತ ಬ್ಯಾನರ್, ಬಂಟಿಂಗ್ಸ್ ತೆರವಿಗೆ ಪೌರಾಯುಕ್ತರ ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾದ ಬ್ಯಾನರ್, ಬಂಟಿಂಗ್ಸ್, ಕಟೌಟ್‌ಗಳು ಅವಧಿ ಮೀರಿರುವುದು ಕಂಡು ಬಂದಿದ್ದು ಅಂತಹ ಬ್ಯಾನರ್‌ಗಳನ್ನು ಸಂಬಂಧಪಟ್ಟವರು ಕೂಡಲೇ ತೆರವುಗೊಳಿಸಬೇಕು ಎಂದು ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬ್ಯಾನರ್ಸ್ ಮತ್ತು ಕಟೌಟ್‌ಗಳನ್ನು ಅಳವಡಿಸುವ ಪೂರ್ವದಲ್ಲಿ ಕರ್ನಾಟಕ ಮುನಿಸಿಪಲ್ ಆಕ್ಟ್ ನಂತೆ ನಗರಸಭೆ ಕಚೇರಿಯಿಂದ ಅನುಮತಿ ಪಡೆದುಕೊಂಡು ಪ್ರಾರಂಭ ದಿನಾಂಕ, ಮುಕ್ತಾಯ ದಿನಾಂಕ ಹಾಗೂ ಅನುಮತಿ ಪತ್ರ ಸಂಖ್ಯೆಯನ್ನು ನಮೂದಿಸಿ ಅಳವಡಿಸಬೇಕು ಹಾಗೂ ಗೋಡೆಗಳ ಮೇಲೆ ಸಾರ್ವಜನಿಕ ಭಿತ್ತಿಪತ್ರಗಳನ್ನು ಅಂಟಿಸಬಾರದು. ಅಂತಹ ಭಿತ್ತಿಪತ್ರಗಳನ್ನು ಅಂಟಿಸುವ ಮೊದಲು ಸೂಕ್ತ ಸ್ಥಳ ಗುರುತಿಸಿ ಅನುಮತಿ …

Read More »

ಯಡಿಯೂರಪ್ಪಗೆ ಜೀವ ಬೆದರಿಕೆ| ಇನ್ಮುಂದೆ ಬಿಎಸ್‍ವೈಗೆ ಝಡ್ ಕೆಟಗರಿ ಭದ್ರತೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜೀವ ಬೆದರಿಕೆ ಇದೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ವರದಿಯ ಆಧಾರದ ಮೇಲೆ ಕೇಂದ್ರ ಗೃಹ ಸಚಿವಾಲಯ ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಭದ್ರತೆ ಒದಗಿಸಿ ಆದೇಶ ಹೊರಡಿಸಿದೆ. ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಈ ಭದ್ರತೆ ಲಭ್ಯವಾಗಲಿದ್ದು, ಶೀಘ್ರದಲ್ಲಿ ಸಿಆರ್‍ಪಿಎಫ್ ಭದ್ರತಾ ಹೊಣೆಯನ್ನು ವಹಿಸಿಕೊಳ್ಳಲಿದೆ.ಗಣ್ಯರಿಗೆ ಇರುವ ಬೆದರಿಕೆಯ ಕುರಿತು ಗುಪ್ತಚರ ಇಲಾಖೆಯ ವರದಿಯ ಅನುಗುಣವಾಗಿ ಭದ್ರತೆಯ ವ್ಯವಸ್ಥೆಯನ್ನು ನೋಡಿಕೊಳ್ಳಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಬಿಎಸ್‍ವೈ ಘೋಷಿಸಿದ ಬೆನ್ನಲ್ಲೇ, ಅವರಿಗೆ ಝಡ್ ಕೆಟಗರಿ …

Read More »

ಉಡುಪಿ: ಮಳೆ ಕೊರತೆಯಿಂದಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ – ಜಿಲ್ಲಾಧಿಕಾರಿ

ಉಡುಪಿ: ಈ ಸಲದ ಮಳೆಗಾಲದ ನಾಲ್ಕು ತಿಂಗಳ ಅವಧಿಯಲ್ಲಿ (ಜೂನ್-ಸೆಪ್ಟೆಂಬರ್) ಜಿಲ್ಲೆಯಲ್ಲಿ ಶೇ.22ರಷ್ಟು ಮಳೆಯ ಕೊರತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂದೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಜನರಿಗೆ ನೀರಿನ ಮಿತ ಬಳಕೆಗೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ಜನವರಿಯಿಂದ ಸೆಪ್ಟೆಂಬರ್‌ವರೆಗೆ ಜಿಲ್ಲೆಯಲ್ಲಿ ಶೇ.24ರಷ್ಟು ಮಳೆಯ ಕೊರತೆ ಕಂಡಬಂದಿದೆ. ಅಲ್ಲದೇ ಹಿಂಗಾರು ಮಳೆ ಸುರಿಯುವ ಅಕ್ಟೋಬರ್ ತಿಂಗಳಲ್ಲೂ ಇದುವರೆಗೆ ಶೇ.37ರಷ್ಟು ಕೊರತೆ ಕಂಡುಬಂದಿದೆ. ಹೀಗಾಗಿ ಕುಡಿಯುವ ನೀರಿಗೆ ಕೊರತೆಯಾಗುವುದನ್ನು ತಪ್ಪಿಸಲು ಈಗಲೇ ಕೆಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿರುವ ಕಿಂಡಿ …

Read More »

ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ವಾಟ್ಸಾಪ್ ಸೃಷ್ಟಿಸಿ ಹಣಕ್ಕೆ ಬೇಡಿಕೆ…!

ಮಂಗಳೂರು: ಇತ್ತೀಚೆಗೆ ಸೈಬರ್ ಫ್ರಾಡ್ ವಿವಿಧ ರೀತಿಯಲ್ಲಿ ನಡೆಯುತ್ತಿದೆ‌. ಜನರನ್ನು ವಂಚನೆಗೊಳಿಸಿ ಸುಲಭವಾಗಿ ದುಡ್ಡು ಮಾಡುತ್ತಿದ್ದ ಸೈಬರ್ ದಂಧೆಕೋರರು ಇದೀಗ ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿಯೇ ನಕಲಿ ವಾಟ್ಸಾಪ್ ಸೃಷ್ಟಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ವಾಟ್ಸಾಪ್‌ನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೋವನ್ನೇ ದುರ್ಬಳಕೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಬಳಿಕ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ಹಲವರಿಗೆ ವಾಟ್ಸಾಪ್ ಸಂದೇಶ ಕಳಿಸಿ, ತಾನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್. ಆಸ್ಪತ್ರೆಯಲ್ಲಿದ್ದೇನೆ. ಯುಪಿಐ ಕೆಲಸ ಮಾಡುತ್ತಿಲ್ಲ, ಸ್ವಲ್ಪ ಹಣ ಇದ್ದರೆ ಕೊಡಿ, ಒಂದು ಗಂಟೆಯಲ್ಲಿ ವಾಪಾಸ್ …

Read More »

ಬಂಟ್ವಾಳ: ಶಾರದೋತ್ಸವ ಮೆರವಣಿಗೆ ವೇಳೆ ಚೂರಿ ಇರಿತ: ಓರ್ವ ಗಂಭೀರ

ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್ ನಿವಾಸಿಗಳಾದ ಚೇತನ್,ಪ್ರಸನ್ನ,ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ …

Read More »

ಕೊಣಾಜೆ: ಹಂಚು ತೆಗೆದು ಮನೆಗೆ ನುಗ್ಗಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ- ಆರೋಪಿ ಬಂಧನ

ಮಂಗಳೂರು: ಕಾಮುಕನೊಬ್ಬ ಹೆಂಚು ತೆಗೆದು ಬೆಡ್ ರೂಂ ಗೆ ನುಗ್ಗಿ ಮಂಚದಡಿಯಲ್ಲಿ ಅಡಗಿ ಕುಳಿತು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಮಂಗಳೂರಿನ ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಹರೇಕಳ ನಿವಾಸಿ ನೌಫಾಲ್ (38) ನನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಮನೆಯೊಂದರ ಹಂಚು ತೆಗೆದು ಮನೆಯ ಬೆಡ್ ರೂಂಗೆ ನುಗ್ಗಿದ ನೌಫಾಲ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಂಚು ತೆಗೆದು ಒಳಗೆ ನುಗ್ಗಿದ ನೌಫಾಲ್ ಮಂಚದ ಅಡಿಯಲ್ಲಿ ಮಲಗಿದ್ದ. ರಾತ್ರಿ 10 ರ ಸುಮಾರಿಗೆ ತನ್ನ ಮಕ್ಕಳಿಬ್ಬರ ಜೊತೆ …

Read More »

ನವಿಲು ಗರಿ ಇಟ್ಟುಕೊಂಡಿರುವ ದರ್ಗಾ, ಮಸೀದಿ ಮೇಲೂ ದಾಳಿ ಮಾಡಿ ಮೌಲ್ವಿಗಳ ಬಂಧಿಸಿ- ಬಿಜೆಪಿ

ಬೆಂಗಳೂರು: ನವಿಲು ಗರಿಗಳನ್ನು  ಇಟ್ಟುಕೊಂಡಿರುವ ದರ್ಗಾ, ಮಸೀದಿಗಳ ಮೇಲೆಯೂ ದಾಳಿ ಮಾಡಿ. ಮುಸ್ಲಿಂ ಮೌಲ್ವಿಗಳ ವಿರುದ್ಧ ಕೇಸ್ ಹಾಕಿ, ರೇಡ್ ಮಾಡಿ. ಎಲ್ಲ ಮೌಲ್ವಿಗಳಿಗೂ ಏಳೇಳು ವರ್ಷ ಜೈಲು ಶಿಕ್ಷೆ ಕೊಡಿ. ಆಗ ನಿಮ್ಮ ಅರಣ್ಯ ರಕ್ಷಣೆ ಕಾಳಜಿ ಎಷ್ಟಿದೆ ಅಂತ ಗೊತ್ತಾಗುತ್ತದೆ. ಕೇವಲ ಹಿಂದುಗಳ ನಂಬಿಕೆಗಳನ್ನೇ ಟಾರ್ಗೆಟ್ ಮಾಡಬೇಡಿ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ. ಈ ಮೂಲಕ ಹುಲಿ ಉಗುರು ಹೊಂದಿರುವವರ ತಪಾಸಣೆ ಮತ್ತು ಕ್ರಮಕ್ಕೆ ಮುಂದಾಗಿರುವ ಅರಣ್ಯ ಇಲಾಖೆ ನಡೆಯನ್ನು ಕಟುವಾಗಿ ಖಂಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಅರವಿಂದ್‌ ಬೆಲ್ಲದ್‌, …

Read More »

You cannot copy content of this page.