ತಾಜಾ ಸುದ್ದಿ

ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ..!

ಮಂಗಳೂರು; ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಸುರೇಂದ್ರ ದೇವಾಡಿಗ (31) ನಾಪತ್ತೆಯಾದ ಯುವಕ. ಸುರೇಂದ್ರ ಅವರು ಅ.20ರಂದು ಕೆಲಕ್ಕೆ ಹೋಗುವುದಾಗಿ ಮನೆಯಿಂದ ತೆರಳಿರುವವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಅವರು ನಾಪತ್ತೆಯಾಗಿರುವ ಕುರಿತು ಸಂಬಂಧಿಕರು ಮತ್ತು ಸ್ನೇಹಿತರಲ್ಲಿ ವಿಚಾರಿಸಿದ್ದು. ಎಲ್ಲೂ ಪತ್ತೆಯಾಗಿಲ್ಲ. ನಾಪತ್ತೆಯಾದ ದಿನದಿಂದ ಅವರ ಮೊಬೈಲ್‌ ಸ್ವಿಚ್ ಆಫ್‌ ಆಗಿದೆ ಎಂದು ಅವರ ಅಣ್ಣ ಪ್ರಸಾದ್‌ ಎಂಬವರು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More »

ಬಂಟ್ವಾಳ: ಸಾಲದ ಬಾಧೆ ತಾಳಲಾರದೆ ಯುವಕ ಆತ್ಮಹತ್ಯೆ

ಬಂಟ್ವಾಳ: ಸಾಲದ ಬಾಧೆ ತಾಳಲಾರದೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ. ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಸನತ್ ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎನ್ನಲಾಗಿದೆ. ಅದಕ್ಕಾಗಿ ಟೆಂಪೋ ವನ್ನು ಕೂಡ ಮಾರಾಟ ಮಾಡಿದ್ದರು …

Read More »

ಬಡವರ ಭಾಗ್ಯದ ಬಾಗಿಲು ತೆರೆಯುವ “ಡ್ರೀಮ್ ಗೋಲ್ಡ್ ಲಕ್ಕಿ ಸ್ಕೀಮ್”

ಸುರತ್ಕಲ್: ಕಾರು, ಬೈಕ್, ಆಕ್ಟಿವಾ, ಚಿನ್ನ ಮತ್ತು ಗೃಹೋಪಯೋಗಿ ವಸ್ತುಗಳನ್ನು ತಮ್ಮದಾಗಿಸಿಕೊಳ್ಳುವ ನಿಮ್ಮ ಕನಸನ್ನು ನನಸಾಗಿಸಲು “ಡ್ರೀಮ್ ಗೋಲ್ಡ್ ಲಕ್ಕಿ ಸ್ಕೀಮ್” ಹೊಸ ಯೋಜನೆಯೊಂದನ್ನು ಕಾರ್ಯರೂಪಕ್ಕೆ ತಂದಿದೆ. ಈ ಸ್ಕೀಮ್ ನ ಪ್ರಥಮ ಡ್ರಾ ಇದೇ ಬರುವ ಡಿಸೆಂಬರ್ 15 ರಂದು ನಡೆಯಲಿದ್ದು, ಪ್ರತೀ ತಿಂಗಳು ರೂ.1000/- . ನಂತೆ 20 ಕಂತುಗಳ ಒಟ್ಟು 20ಡ್ರಾಗಳು ನಡೆಯಲಿವೆ. ಪ್ರತೀ ತಿಂಗಳು ಗ್ರಾಹಕರ ಕನಸಿನ ಬಹುಮಾನಗಳೊಂದಿಗೆ ಪ್ರತೀ ಡ್ರಾದಲ್ಲೂ ಕನಿಷ್ಠ 10 ಅದೃಷ್ಟಶಾಲಿಗಳಿಗೆ ವಿಶೇಷ ಉಡುಗೊರೆಗಳನ್ನು ಸಂಸ್ಥೆ ನೀಡಲಿದೆ. ಈ ಸ್ಕೀಮ್ ನ ವಿಷೇಶ ಏನೆಂದರೆ …

Read More »

ಮಂಗಳೂರು: ಖಾಸಗಿ ಬಸ್ ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಮಂಗಳೂರು: ಖಾಸಗಿ ಬಸ್‌ನ ಧಾವಂತಕ್ಕೆ ಪಾದಚಾರಿಯೊಬ್ಬರು ಬಸ್ ನಡಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಗರದ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಆ್ಯಂಡ್ ರಾವ್ ಸರ್ಕಲ್‌ನಲ್ಲಿ ಸಂಭವಿಸಿದೆ. ಕೊಣಾಜೆಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ 54 ಸಂಬರ್‌ನ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿತ್ತು. ಈ ವೇಳೆ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದರು. ಆಗ ನೇರವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಮುಂದಿನ ಚಕ್ರದಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ವ್ಯಕ್ತಿಯ ತಲೆ ಸಂಪೂರ್ಣ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖವೂ …

Read More »

ಮುಂಬೈನ 8 ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ : ಇಬ್ಬರು ಸಾವು, ಹಲವರಿಗೆ ಗಾಯ

ಮುಂಬೈ : ಮುಂಬೈನ ಉಪನಗರ ಕಂಡಿವ್ಲಿಯಲ್ಲಿರುವ ಎಂಟು ಅಂತಸ್ತಿನ ವಸತಿ ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್ನಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇದ್ರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.   ಮಹಾವೀರ್ ನಗರ ಪ್ರದೇಶದ ಪವನ್ ಧಾಮ್ ವೀಣೆ ಸಂತೂರ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್ನಲ್ಲಿ ಮಧ್ಯಾಹ್ನ 12.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯು ನಂತರ ಆ ಮಹಡಿಯಲ್ಲಿರುವ ವಿದ್ಯುತ್ ವೈರಿಂಗ್ ಮತ್ತು ಸ್ಥಾಪನೆಗಳಿಗೆ ಹರಡಿತು. ಸುಮಾರು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ ಮತ್ತು ಬೆಂಕಿಯಲ್ಲಿ ಸಿಲುಕಿರುವ …

Read More »

ಉಡುಪಿ : ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ..!

ಉಡುಪಿ : ಉಡುಪಿಯಲ್ಲಿನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶೃತಿನ್ ಶೆಟ್ಟಿ (35) ಮೃತ ದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಅಸಹಜ ಸಾವೆಂದು ಪೊಲೀಸರಿಉ ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19 ಕ್ಕೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) . ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ …

Read More »

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ- ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ದ ಪೊಲೀಸರು..!

ಬೆಂಗಳೂರು : ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬ ಅರೆಸ್ಟ್​ ಆಗಿದ್ದಾನೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಸ್ಫರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ. ನಿನ್ನೆ ರಾತ್ರಿ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಸದ್ಯ ಅರಣ್ಯಾಧಿಕಾರಿಗಳ ಕಷ್ಟಡಿಯಲ್ಲಿರುವ ವರ್ತೂರು ಸಂತೋಷ್ ನ ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆಯಿದೆ. ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ. ಕುತ್ತಿಗೆಯಲ್ಲಿ ಹುಲಿ ಉಗುರು ಇರುವ ಪೆಂಡೆಂಟ್ ಹಾಕಿಕೊಂಡಿದ್ದರು. ಈ ಕುರಿತು ವ್ಯಕ್ತಿಯೊಬ್ಬರು ದೂರು …

Read More »

ಮಂಗಳೂರು: ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ವಾಸ- ಇಬ್ಬರು ವಿದೇಶಿಯರು ವಶಕ್ಕೆ

ಮಂಗಳೂರು: ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ವಾಸವಾಗಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ಉಳಿದುಕೊಂಡಿದ್ದರು. ‌ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.”

Read More »

ಬಂಟ್ವಾಳ ಮನೆಗೆ ನುಗ್ಗಿ ಕಳವು : ಅಂತರಾಜ್ಯ ಕಳ್ಳನನ್ನು ಹಿಡಿದು ಥಳಿಸಿದ ಗ್ರಾಮಸ್ಥರು..!

ಬಂಟ್ವಾಳ: ಮನೆಗೆ ನುಗ್ಗಿ ಕಳವು ಮಾಡಿದ ಅಂತರಾಜ್ಯ ಕಳ್ಳರ ಪೈಕಿ ಓರ್ವ ಕಳ್ಳನನ್ನು ಸಾರ್ವಜನಿಕರು ‌ಹಿಡಿದು ಥಳಿಸಿದಲ್ಲದೆ, ಪೋಲೀಸರ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕೊಲ್ಲಂ ಜಿಲ್ಲೆಯ ಕರಕ್ಕಲ್ ನಿವಾಸಿ ಪ್ರವೀಣ್ ಎಂಬಾತ ಪೋಲೀಸರ ಅತಿಥಿಯಾಗಿದ್ದಾನೆ.ಈತನ ಸ್ನೇಹಿತ ಪರಾರಿಯಾಗಿದ್ದಾನೆ. ಕಳ್ಳತನಕ್ಕೆ ಬಳಸುವ ಬೈಕ್ ಪೋಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರು ಜೊತೆಯಾಗಿ ಕಳವು ನಡೆಸಿದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಂಚಿ ಮಸೀದಿ ಬಳಿಯ ಕಮರುದ್ದೀನ್ ಹಾಗೂ ಜಲಾಲುದ್ದೀನ್ ಸಹೋದರರ ಎರಡು ಮನೆ …

Read More »

ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ಗೆಲ್ಲಬೇಕೆ!?ಕಾರು, ಬೈಕು, ಚಿನ್ನವನ್ನು ನಿಮ್ಮದಾಗಿಸಬೇಕೇ? ಬ್ರೈಟ್ ಭಾರತ್ ಯೋಜನೆಯ ಸದಸ್ಯರಾಗಿ ನಿಮಗೂ ಗೆಲ್ಲಬಹುದು ಸ್ವಂತ ಮನೆ

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 9535234074 ಈ ನಂಬರ್‌ಗೆ ವಾಟ್ಸಪ್ …

Read More »

You cannot copy content of this page.