ತಾಜಾ ಸುದ್ದಿ

ಪೋಷಕರೇ ಎಚ್ಚರ : ಮಕ್ಕಳಿಗೆ ನೀಡುವ ರಸ್ಕ್ ನಿಂದ ಆರೋಗ್ಯ ಸಮಸ್ಯೆಗಳು ಕಾಡಬಹುದು!

ಪೋಷಕರೇ ಮಕ್ಕಳಿಗೆ ನೀವು ನೀಡುವ ರಸ್ಕ್ ಅನಾರೋಗ್ಯಕ್ಕೆ ಕಾರಣವಾಗಬಹುದು. ಅನೇಕ ಜನರು ಚಹಾದ ಜೊತೆಗೆ ರಸ್ಕ್ ಮತ್ತು ಬಿಸ್ಕತ್ತುಗಳನ್ನು ತಿನ್ನುತ್ತಾರೆ. ರಸ್ಕ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಲಾಗುತ್ತದೆ. ಆದರೆ ಇದು ಆರೋಗ್ಯಕರ ಆಹಾರವೇ? ಆರೋಗ್ಯವಂತನೆಂದು ಪರಿಗಣಿಸಲ್ಪಟ್ಟ ರಸ್ಕ್ ಅಕ್ಷರಶಃ ಭಯೋತ್ಪಾದಕ ಎಂದು ತಜ್ಞರು ಎಚ್ಚರಿಸಿದ್ದಾರೆ. ಅವರು ಹೇಳುವ ಮೊದಲ ಕಾರಣವೆಂದರೆ ಅದು ತುಂಬಾ ಅಶುದ್ಧವಾಗಿದೆ ಮತ್ತು ಅದರಲ್ಲಿನ ಪದಾರ್ಥಗಳನ್ನು ಸಂಸ್ಕರಿಸಿದ ಮೈದಾ, ತಾಳೆ ಎಣ್ಣೆ ಮತ್ತು ಸಕ್ಕರೆಯೊಂದಿಗೆ ಬೆರೆಸಿದರೆ, ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಹಿಟ್ಟು, ಸಕ್ಕರೆ ಮತ್ತು ತಾಳೆ ಎಣ್ಣೆಯನ್ನು ಮಾತ್ರ ಹೊಂದಿರುವುದರಿಂದ …

Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ- ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಬಳಿ ಬಸ್ ಪಲ್ಟಿಯಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿಬಹುದು ಎಂಬುದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯಿಂದ ಗಾಯಗೊಂಡವರ ಹೆಸರು …

Read More »

ಉಡುಪಿ: ಪುತ್ರನ ಸಮಯಪ್ರಜ್ಞೆಯಿಂದ ತಂದೆಯ ರಕ್ಷಣೆ

ಉಡುಪಿ: ತಂದೆಯು ಮನೆಯಲ್ಲಿ ಕುಸಿದುಬಿದ್ದು ಅಸಹಾಯಕ ಸ್ಥಿತಿಯಲ್ಲಿದ್ದಾಗ ಎಂಟು ವರ್ಷದ ಪುತ್ರನ ಸಮಯ ಪ್ರಜ್ಞೆಯಿಂದಾಗಿ ತಂದೆಯು ರಕ್ಷಿಸಲ್ಪಟ್ಟ ಘಟನೆ ದೊಡ್ಡಣಗುಡ್ಡೆಯಲ್ಲಿ ನಡೆದಿದೆ. ತಂದೆ ಮತ್ತು ಪುತ್ರ ವಿದ್ಯುತ್‌ ಸಂಪರ್ಕವಿಲ್ಲದ ಮನೆಯಲ್ಲಿ ವಾಸವಾಗಿದ್ದರು. ಸೋಮವಾರ ಸಂಜೆ ತಂದೆ ಅಜಯ್‌ ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ತತ್‌ಕ್ಷಣ ತಂದೆಯ ಅಸಹಾಯಕತೆಯನ್ನು ಗಮನಿಸಿದ ಪುತ್ರ ದಿಯಾನ್‌ ಕತ್ತಲಲ್ಲಿಯೇ ನೆರೆಮನೆಗೆ ಹೋಗಿ ವಿಷಯ ತಿಳಿಸಿದ. ಕೂಡಲೇ ಮನೆಗೆ ಧಾವಿಸಿ ಬಂದ ನೆರೆಮನೆಯವರು ಸತ್ಯಸಂಗತಿ ಅರಿತು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು. ಅವರು ತತ್‌ಕ್ಷಣ ಸೂಕ್ತ ವ್ಯವಸ್ಥೆ ಮಾಡಿ ಅವರನ್ನು ಆಸ್ಪತ್ರೆಗೆ …

Read More »

ಮುತ್ತೂರು ಗ್ರಾಮ ಪಂಚಾಯತ್ ನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

78 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುತ್ತೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು .ಮುಖ್ಯ ಅತಿಥಿಯಾಗಿ ಆಗಮಿಸಿದ ಜೋಸೆಫ್ ಮೊರಸ್ ಇವರು ಧ್ವಜಾರೋಹಣವನ್ನು ನೆರವೇರಿಸಿ ನಮ್ಮ ಗ್ರಾಮದ ಅಭಿವೃದ್ಧಿಗೆ ಮುತ್ತೂರು ಗ್ರಾಮ ಪಂಚಾಯತ್ ನ ಸಹಕಾರ ಶ್ಲಾಘನೀಯ ಎಂದರು , ಸ್ವಾತಂತ್ರ್ಯ ಹೋರಾಟಗಾರ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಈ ಸಂಭ್ರಮಾಚರಣೆಯನ್ನು ಬಹಳ ಉತ್ಸಾಹದಿಂದ ಆಚರಿಸುವ ಎಂದು ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ ಇವರು 300 ವರ್ಷಗಳ ಕಾಲ ಬ್ರಿಟಿಷರ ದಬ್ಬಾಳಿಕೆಯಿಂದ ಬೆಸೆತ್ತ ಭಾರತೀಯರಿಗೆ …

Read More »

ಬಂಟ್ವಾಳ: ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ, ನಗ ನಗದು ದೋಚಿ ಪರಾರಿ

ಬಂಟ್ವಾಳ: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿದ ತಂಡ ಬಳಿಕ ಕೆಲ ದೂರ ಸಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಆತನ ಬಳಿಯಿದ್ದ ನಗ ನಗದು ದೋಚಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಏನಿದು ಘಟನೆ: ಕೊಡಗಿನ ವಿರಾಜಪೇಟೆ ನಿವಾಸಿಯಾಗಿರುವ ಎಂ. ಗಂಗಾಧರ ಅವರು ನಗ ನಗದು ಕಳೆದು ಕೊಂಡ ವ್ಯಕ್ತಿಯಾಗಿದ್ದು, ಇವರು ಕಳೆದ ಶುಕ್ರವಾರ (ಆಗಸ್ಟ್ 9) ದಂದು ವಿರಾಜಪೇಟೆಯಿಂದ ಬಿಸಿ ರೋಡ್‌ ಗೆ ರಾತ್ರಿ ಸುಮಾರು ಒಂಬತ್ತು ಗಂಟೆಯ ವೇಳೆಗೆ ಬಂದಿದ್ದರು. ಬಂಟ್ವಾಳದ ನರಿಕೊಂಬಿನಲ್ಲಿರುವ ಅಣ್ಣನ ಮನೆಗೆ ತೆರಳಲು ಬಿ.ಸಿ.ರೋಡ್ ನಲ್ಲಿ …

Read More »

ಬೆಳ್ತಂಗಡಿ: ಅಕ್ರಮವಾಗಿ ಮೊಬೈಲ್ ಸಿಮ್ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡುತ್ತಿದ್ದ ಇಬ್ಬರು ಅರೆಸ್ಟ್

ಬೆಳ್ತಂಗಡಿ: ಪರಿಚಿತರನ್ನು ಪುಸಲಾಯಿಸಿ ಅವರ ಹೆಸರಲ್ಲಿ ಮೊಬೈಲ್ ಸಿಮ್ ಗಳನ್ನು ಪಡೆದು ಅದನ್ನು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿಯ ನಿವಾಸಿಗಳಾದ ಬಿಬಿಎ ವಿದ್ಯಾರ್ಥಿ ಶಹಾದ್ ಮೊಹಮ್ಮದ್ ಸಮೀರ್‌ (21), ಮೊಹಮ್ಮದ್ ಅಜೀಮ್‌ (19) ಎಂದು ಗುರುತಿಸಲಾಗಿದೆ. ಬಂಧಿತರಿಂದ 86 ಸಿಮ್ ಕಾರ್ಡ್‌ಗಳು ಸಹಿತ ₹ 5.49 ಲಕ್ಷ ಮೌಲ್ಯದ ಸ್ವತ್ತುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ.   ಆರೋಪಿಗಳು ಮರೋಳಿ ಗ್ರಾಮದ ಬಿಕರ್ನಕಟ್ಟೆ ಬಜ್ಜೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಯುವಕರು ಭಾರಿ ಸಂಖ್ಯೆಯಲ್ಲಿ ಸಿಮ್ ಕಾರ್ಡ್‌ಗಳನ್ನು …

Read More »

‘ಐದು ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಐದೂ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಡಿನ ಜನತೆಗೆ 78 ನೇ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದ್ದಾರೆ. ಕಳೆದ 77 ವರ್ಷಗಳಲ್ಲಿ ಕರ್ನಾಟಕ ಮಹತ್ವದ ಪಾತ್ರ ಹೊಂದಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ …

Read More »

ಕೆಂಪುಕೋಟೆ ಮೇಲೆ ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ

ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ನೆಹರು ಮತ್ತು ಇಂದಿರಾಗಾಂಧಿಯವರ ದಾಖಲೆ ಸರಿಗಟ್ಟಿದ್ದಾರೆ. ಮೊದಲಿಗೆ ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಮೋದಿ ಅಲ್ಲಿಂದ ಕೆಂಪುಕೋಟೆಗೆ ಆಗಮಿಸಿದ್ದಾರೆ. ಸೇನಾಪಡೆಗಳಿಂದ ಗೌರವವಂದನೆ ಸ್ವೀಕರಿಸಿದ ಬಳಿಕ ಕೆಂಪು ಕೋಟೆಯ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. 2014ರಿಂದ ಸತತವಾಗಿ 11ನೇ ಬಾರಿಗೆ ಮೋದಿ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ …

Read More »

ಮೂಡಬಿದ್ರೆ: ಕಡಂದಲೆ ಶಾಂಭವಿ ನದಿಯಲ್ಲಿ ದನದ 2 ತಲೆಗಳು ಪತ್ತೆ..!!

ಮೂಡಬಿದ್ರೆ: ಇಂದು ಬೆಳಿಗ್ಗೆ ಕಡಂದಲೆ ಶಾಂಭವಿ ನದಿಯಲ್ಲಿ ದನದ ಎರಡು ತಲೆಗಳು ಸ್ಥಳೀಯರಿಗೆ ಪತ್ತೆಯಾಗಿದೆ. ಮಾಂಸಕ್ಕಾಗಿ ದನಗಳನ್ನು ಕೊಂದು ಬಳಿಕ ಅದರ ತಲೆಗಳನ್ನು ನದಿಗೆ ತಂದು ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಪರಿಸರದಲ್ಲಿ ಅಕ್ರಮ ಕಸಾಯಿ ಖಾನೆ ಇದೆಯೇ ಎಂಬ ಪ್ರಶ್ನೆ ಇದೀಗ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ರಾತ್ರಿ ದನ ಹಾಗೂ ಕರುವನ್ನು ಮಾಂಸಕ್ಕಾಗಿ ಹತ್ಯೆ ಮಾಡಿ ಬಳಿಕ ಅದರ ತಲೆಗಳನ್ನು ನದಿಗೆ ಹಾಕಲಾಗಿದೆ ಎನ್ನಲಾಗಿದೆ. ಅದು ನದಿಯ ಪೊದೆಯಲ್ಲಿ ಸಿಲುಕಿದ ಕಾರಣ ಇಂದು ಸ್ಥಳೀಯರಿಗೆ ಕಾಣಸಿಕ್ಕಿದೆ ಎಂದು ತಿಳಿದು ಬಂದಿದೆ. …

Read More »

ಮಂಗಳೂರು: ಪ್ರೇಯಸಿ ಕೈ ಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ

ಮಂಗಳೂರು: ಪ್ರೀತಿಸಿದ್ದ ಯುವತಿ ಕೈಕೊಟ್ಟಿದ್ದಾಳೆಂದು ಮನನೊಂದ ಯುವಕನೋರ್ವನು ನೇಣಿಗೆ ಶರಣಾಗಿರುವ ಘಟನೆ ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ತಾರೆಮಾ‌ರ್ ಅರ್ಭಿ ಎಂಬಲ್ಲಿ ಸೋಮವಾರ ನಡೆದಿದೆ. ಚಂದ್ರಶೇಖರ (32) ಆತ್ಮಹತ್ಯೆಗೆ ಶರಣಾದ ಯುವಕ. ಮೇಸ್ತ್ರಿ ಕೆಲಸ ಮಾಡುತ್ತಿದ್ದ ಈತ ಹಲವು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆಕೆ ದೂರವಾಗುತ್ತಿದ್ದಂತೆ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ‌. ಚಂದ್ರಶೇಖರ ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದಿದ್ದಾನೆ. ಬಳಿಕ ಸ್ನೇಹಿತನೊಬ್ಬನಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಬೈಕ್ ಇರುವ ಜಾಗ ತಿಳಿಸಿ ಅದನ್ನು ಕೊಂಡೊಯ್ಯುವಂತೆ ತಿಳಿಸಿದ್ದಾನೆ. ಆತ ಸೂಚಿಸಿದ್ದ ಸ್ಥಳಕ್ಕೆ ಆಗಮಿಸಿದಾಗ ಚಂದ್ರಶೇಖರ …

Read More »

You cannot copy content of this page.